ಉಡುಪಿ: ವೈದ್ಯರ ಸಲಹೆ ಚೀಟಿ ಇಲ್ಲದೆ ಔಷಧ ವ್ಯಾಪಾರಿಗಳು ಪ್ಯಾರಾಸಿಟಿಮಲ್ ಮತ್ತು ಇತರೆ ಆಂಟಿಬಯೋಟಿಕ್ ಔಷಧಗಳ ಮಾರಾಟ ಮಾಡದಂತೆ ಉಡುಪಿ ಸಹಾಯಕ ಔಷಧಿ ನಿಯಂತ್ರಕರು ಪ್ರಕಟಣೆ ಹೊರಡಿಸಿದ್ದಾರೆ.
ಜಿಲ್ಲೆಯಾದ್ಯಂತ ವ್ಯಾಪಕವಾಗಿ ಡೆಂಗ್ಯೂ ಹಾಗೂ ಇತರ ಕೆಲವು ಸಾಂಕ್ರಾಮಿಕ ರೋಗ ಪ್ರಕರಣಗಳು ಹೆಚ್ಚಾಗುತ್ತಿದ್ದು ರೋಗಿಗಳು ಸ್ವ ಔಷಧೋಪಾಚಾರ ಮಾಡಿಕೊಳ್ಳುವುದರಿಂದ ರೋಗ ಪತ್ತೆ ಮಾಡಿ, ರೋಗಿಗಳಿಗೆ ಸರಿಯಾದ ಚಿಕಿತ್ಸೆ ದೊರೆಯದೆ ಪ್ರಾಣಾಪಾಯಗಳು ಸಂಭವಿಸುವ ಸಾಧ್ಯತೆ ಇರುವುದರಿಂದ ಮುಂಜಾಗ್ರತ ಕ್ರಮವಾಗಿ ಜಿಲ್ಲೆಯ ಎಲ್ಲಾ ಔಷಧ ವ್ಯಾಪಾರಿಗಳು ಕಡ್ಡಾಯವಾಗಿ ವೈದ್ಯರ ಸಲಹಾ ಚೀಟಿ ಇಲ್ಲದೆ ಪ್ಯಾರಾಸಿಟಿಮಲ್ ಮತ್ತು ಇತರೆ ಆಂಟಿಬಯೋಟಿಕ್ ಔಷಧಗಳ ಮಾರಾಟ ಮಾಡಬಾರದೆಂದು ಪ್ರಕಟಣೆ ಹೊರಡಿಸಿದ್ದು ಅಲ್ಲದೆ ಜಿಲ್ಲೆಯ ಎಲ್ಲಾ ರಕ್ತ ಕೋಶ ಕೇಂದ್ರದವರು ರಕ್ತ ಹಾಗೂ ರಕ್ತ ಉತ್ಪನ್ನಗಳ ಕೊರತೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಲು ಹಾಗೂ ರಕ್ತದಾನಿಗಳ ಪಟ್ಟಿಯನ್ನು ಸಿದ್ಧ ಪಡಿಸಿಟ್ಟು ಕೊಂಡು ಅವಶ್ಯಕತೆಗೆ ಅನುಗುಣವಾಗಿ ರಕ್ತವನ್ನು ಪಡೆದು ದಾಸ್ತಾನು ಇಟ್ಟುಕೊಳ್ಳಬೇಕೆಂದು ತಿಳಿಸಿದ್ದಾರೆ.