SUDDIKSHANA KANNADA NEWS/ DAVANAGERE/ DATE:06-07-2024
ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ. ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಜುಲೈ 6 ರಂದು ಬೆಳಿಗ್ಗೆ 10 ಗಂಟೆಗೆ ಚನ್ನಗಿರಿ ತಾಲ್ಲೂಕಿನ ಸಂತೇಬೆನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.
ಈ ಉದ್ಯೋಗ ಮೇಳದಲ್ಲಿ 20 ಕ್ಕಿಂತ ಹೆಚ್ಚು ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿ.ಫಾರ್ಮ, ಬಿ.ಫಾರ್ಮ, ಡಿಪ್ಲೊಮಾ, ಬಿಇ, ಬಿ ಟೆಕ್, ಹಾಗೂ ಪದವಿ, ಸ್ನಾತಕೋತ್ತರ ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಆಸಕ್ತ ಅಭ್ಯರ್ಥಿಗಳು ಕನಿಷ್ಠ 15 ಸೆಟ್ ಬಯೋಡಾಟಾ ಮತ್ತು ಆಧಾರ್ ನಂಬರ್ ನೊಂದಿಗೆ ಉದ್ಯೋಗಮೇಳದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ: 8105122556, 9591088202, ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿ ರವೀಂದ್ರ.ಡಿ.ತಿಳಿಸಿದ್ದಾರೆ.