ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ದಾವಣಗೆರೆ ದಕ್ಷಿಣಕ್ಕೆ ಹೆಚ್ಚಿದ ಆಕಾಂಕ್ಷಿಗಳು: ಬಿಜೆಪಿ ಟಿಕೆಟ್ ನೀಡುವಂತೆ ಉಮಾ ಪ್ರಕಾಶ್ ಮನವಿ

On: April 3, 2023 10:42 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:03-04-2023

ದಾವಣಗೆರೆ: ಬಿಜೆಪಿ (BJP)ಪಕ್ಷದಲ್ಲಿ ಟಿಕೆಟ್ (TICKET) ಆಕಾಂಕ್ಷಿಗಳ ಪಟ್ಟಿ ಹೆಚ್ಚಾಗುತ್ತಲೇ ಇದೆ. ದಾವಣಗೆರೆ (DAVANAGERE) ದಕ್ಷಿಣ ವಿಧಾನಸಭಾ ಕ್ಷೇತ್ರವೂ ಇದಕ್ಕೆ ಹೊರತಲ್ಲ. ಬಿಜೆಪಿ (BJP) ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್, ಮಹಾನಗರ ಪಾಲಿಕೆ ಮಾಜಿ ಮೇಯರ್ ಅಜಯಕುಮಾರ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ್ ದಾಸಕರಿಯಪ್ಪ (SHRINIVAS DASKARIYAPPA) ಅವರ ಹೆಸರು ಪ್ರಮುಖವಾಗಿ ಕೇಳಿ ಬರುತ್ತಿದೆ. ಈ ನಡುವೆ ಮಹಾನಗರ ಪಾಲಿಕೆಯ ಮಾಜಿ ಮೇಯರ್ ಹಾಗೂ ಹಾಲಿ ಸದಸ್ಯೆ ಉಮಾ ಪ್ರಕಾಶ್ (UMA PRAKASH) ಅವರೂ ಸಹ ತಮಗೆ ಟಿಕೆಟ್  (TICKET) ನೀಡುವಂತೆ ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಅರ್ಜಿ ಸಲ್ಲಿಸಿದ್ದಾರೆ.

ದಕ್ಷಿಣ ಕ್ಷೇತ್ರದಲ್ಲಿ ಒಬಿಸಿ ಆಧಾರದಲ್ಲಿ ಟಿಕೆಟ್ (TICKET) ನೀಡುವುದಾದರೆ ತಮಗೆ ನೀಡಿ. ಮಹಿಳೆಯರಿಗೆ ಪ್ರಾತಿನಿಧ್ಯ ಕೊಟ್ಟಂತಾಗುತ್ತದೆ. ಕಳೆದ 20 ವರ್ಷಗಳಿಂದಲೂ ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದೇನೆ. ಬಿಜೆಪಿ (BJP)ಯಿಂದ ಸ್ಪರ್ಧಿಸಲು ತಾನೂ ಆಕಾಂಕ್ಷಿಯಾಗಿದ್ದು, ಬಿ ಫಾರಂ ನೀಡುವಂತೆ ಮನವಿ ಸಲ್ಲಿಸಿದ್ದಾರೆ.

ಉಮಾ ಪ್ರಕಾಶ್ ಸಲ್ಲಿಸಿರುವ ಅರ್ಜಿಯಲ್ಲೇನಿದೆ…?

ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಡಿ. ಜಿಲ್ಲೆಯ ಭಾರತೀಯ ಜನತಾ ಪಾರ್ಟಿಯ ಸಂಘಟನೆಯಲ್ಲಿ ಸುಮಾರು ಎರಡು ದಶಕಗಳಿಂದ ಕಾರ್ಯಕರ್ತಳಾಗಿ ಕೆಲಸ ನಿರ್ವಹಿಸಿರುತ್ತೇನೆ. 2007ರಲ್ಲಿ ಬಿಜೆಪಿಯಿಂದ ಮಹಾನಗರ ಪಾಲಿಕೆ ಚುನಾವಣೆಗೆ ಸ್ಪರ್ಧಿಸಿ ಜಯ ಗಳಿಸಿ ಒಂದು ವರ್ಷ ದಾವಣಗೆರೆ ಮಹಾನಗರಕ್ಕೆ ಮಹಾಪೌರಳಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿರುತ್ತೇನೆ. ಈ ವೇಳೆ ಹಲವು ಅಭಿವೃದ್ಧಿ
ಕಾರ್ಯಗಳನ್ನು ಕೈಗೊಂಡಿದ್ದೇನೆ.

ಪ್ರಸ್ತುತ 2019 ರಲ್ಲಿ ನಡೆದ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಿ ಎರಡನೇ ಬಾರಿ ಮಹಾನಗರ ಪಾಲಿಕೆ ಸದಸ್ಯಳಾಗಿದ್ದೇನೆ. ಯೋಜನೆ ಮತ್ತು ಕಾಮಗಾರಿ ಸ್ಥಾಯಿ ಸಮಿತಿಯ ಅಧ್ಯಕ್ಷಳಾಗಿ ಉತ್ತಮವಾಗಿ ಕಾರ್ಯ ನಿರ್ವಹಿಸಿರುತ್ತೇನೆ.
ನಾನು ಹಿಂದುಳಿದ ಉಪ್ಪಾರ (UPPARA) ಜನಾಂಗಕ್ಕೆ ಸೇರಿದವಳಾಗಿದ್ದು, ದಾವಣಗೆರೆ (DAVANAGERE) ಜಿಲ್ಲೆಯಲ್ಲಿ ಹಿಂದುಳಿದ ವರ್ಗಕ್ಕೆ ಅಥವಾ ಮಹಿಳೆಗೆ ಅವಕಾಶ ಕಲ್ಪಿಸುವುದಾದರೆ ನನ್ನ ಹೆಸರನ್ನು ಶಿಫಾರಸ್ಸು ಮಾಡಲು ಈ ಮೂಲಕ ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ ಎಂದು ಉಮಾ ಪ್ರಕಾಶ್ ಅವರು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment