SUDDIKSHANA KANNADA NEWS/ DAVANAGERE/ DATE:06-03-2025
ಬೆಂಗಳೂರು: ರಾಜ್ಯದಲ್ಲಿ ಕಾವೇರಿ 2.0 ತಂತ್ರಾಂಶ ಚಾಲನೆಗೆ ಬಂದ ನಂತರ ಆಸ್ತಿ ನೋಂದಣಿ ಕಾರ್ಯಕ್ಕೆ ವೇಗ ದೊರೆತಿದ್ದು, ಪ್ರಸಕ್ತ ಕಾಲಮಾನದಲ್ಲಿ ಸಾಫ್ಟ್ವೇರ್ಗೆ ಸಂಬಂಧಿಸಿದಂತೆ ಉದ್ಭವಿಸುವ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಈ ಮಾಹಿತಿ ನೀಡಿದರು.
ರಾಜ್ಯದಲ್ಲಿ ಕುರಿ, ಮೇಕೆ ಸಾಕಾಣಿಕೆಯನ್ನು ಪ್ರೋತ್ಸಾಹಿಸಲು ಮತ್ತು ಕುರಿಗಾಹಿಗಳಿಗೆ ಆರ್ಥಿಕ ನೆರವು ಒದಗಿಸಲು ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯನ್ನು 2023-24ರಲ್ಲಿ ಜಾರಿಗೊಳಿಸಲಾಗಿತ್ತು.
ಪ್ರಸಕ್ತ ಸಾಲಿನವರೆಗೆ 7,806 ಫಲಾನುಭವಿಗಳು ಕಾರ್ಯಕ್ರಮದ ಪ್ರಯೋಜನ ಪಡೆದಿದ್ದು, ಯೋಜನೆಯ ಮರುಚಾಲನೆಗೆ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ
ಸಮಾಲೋಚನೆ ನಡೆಸಲಾಗುವುದು ಎಂದು ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.
ಕಲ್ಯಾಣ ಕರ್ನಾಟಕದ ವ್ಯಾಪ್ತಿಯಲ್ಲಿ ಕಳಪೆ ಗುಣಮಟ್ಟದ ಔಷಧ ಪೂರೈಕೆ ಮಾಡಿದ ಕಂಪನಿಗಳ ವಿರುದ್ಧ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಈ ಕುರಿತು ಕೇಂದ್ರ ಸರ್ಕಾರಕ್ಕೂ ಪತ್ರ ಬರೆಯಲಾಗಿದೆ ಎಂದು ಆರೋಗ್ಯ
ಸಚಿವ ದಿನೇಶ್ ಗುಂಡೂರಾವ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.