Home ಕ್ರೈಂ ನ್ಯೂಸ್ ಕಸ ಸಂಗ್ರಹಿಸುತ್ತಿದ್ದ ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡಿದ ವ್ಯಕ್ತಿ ವೀಡಿಯೊ ವೈರಲ್, ಆರೋಪಿ ಶಾರುಖ್ ಬಂಧನ!
ಕ್ರೈಂ ನ್ಯೂಸ್ದಾವಣಗೆರೆಬೆಂಗಳೂರು

ಕಸ ಸಂಗ್ರಹಿಸುತ್ತಿದ್ದ ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡಿದ ವ್ಯಕ್ತಿ ವೀಡಿಯೊ ವೈರಲ್, ಆರೋಪಿ ಶಾರುಖ್ ಬಂಧನ!

Share
ಕಸ
Share

ಬುಲಂದ್‌ಶಹರ್: ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ರಸ್ತೆಬದಿಯಲ್ಲಿ ಕಸ  ಸಂಗ್ರಹಿಸುತ್ತಿದ್ದ ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಅಸಭ್ಯವಾಗಿ ಕಿರುಕುಳ ನೀಡಿ, ಅದನ್ನು ವಿಡಿಯೋ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಗುಲಾವಠಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಶಾರುಖ್ ಎಂದು ಗುರುತಿಸಲಾಗಿದೆ.

ಬಾಲಕಿಯರ ಹಿಂದೆ ತೆರಳಿ ಅಸಭ್ಯವಾಗಿ ಹಾಡುಗಳನ್ನು ಹಾಡುತ್ತಾ, ಅನುಚಿತ ಕಾಮೆಂಟ್‌ಗಳನ್ನು ಮಾಡುತ್ತಾ ತನ್ನ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಿಸಿಕೊಂಡಿದ್ದ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರು ಮತ್ತು ಅಪ್ರಾಪ್ತ ಬಾಲಕಿಯರ ಸುರಕ್ಷತೆ ಕುರಿತು ಈ ಘಟನೆ ತೀವ್ರ ಕಳಕಳಿಯನ್ನು ಹುಟ್ಟುಹಾಕಿದೆ.

ಸ್ವಯಂ ಪ್ರೇರಿತ ದೂರು ದಾಖಲು: ವೈರಲ್ ಆದ ವೀಡಿಯೊವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತಕ್ಷಣವೇ ಪ್ರಕರಣ ದಾಖಲಿಸಿಕೊಂಡು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ.

ಆರೋಪಿ ಬಂಧನ: ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ನಗರ) ಅಭಿಷೇಕ್ ಪ್ರತಾಪ್ ಅಜಯ್ ಅವರ ಮಾರ್ಗದರ್ಶನದಲ್ಲಿ ಆರೋಪಿ ಶಾರುಖ್‌ನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಇಲಾಖೆ ಖಚಿತಪಡಿಸಿದೆ.

ಮಹಿಳಾ ಸುರಕ್ಷತೆಗೆ ಆಘಾತ: ಬಾಲಕಿಯರ ಒಪ್ಪಿಗೆಯಿಲ್ಲದೆ ವೀಡಿಯೊ ಚಿತ್ರೀಕರಿಸಿ ಕಿರುಕುಳ ನೀಡಿರುವ ಕೃತ್ಯಕ್ಕೆ ಸಾರ್ವಜನಿಕ ವಲಯದಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ಧಕ್ಕೆ ತರುವ ಇಂತಹ ಕೃತ್ಯಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Recent Posts

Recent Comments

No comments to show.
Related Articles