Home ದಾವಣಗೆರೆ ಹಬ್ಬಗಳ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಲ್ಲಿ ಸರ್ಕಾರಿ ನೌಕರರ ರಜೆ ರದ್ದು: ಹೈಅಲರ್ಟ್ ಘೋಷಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ದಾವಣಗೆರೆಕ್ರೈಂ ನ್ಯೂಸ್ನವದೆಹಲಿಬೆಂಗಳೂರು

ಹಬ್ಬಗಳ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಲ್ಲಿ ಸರ್ಕಾರಿ ನೌಕರರ ರಜೆ ರದ್ದು: ಹೈಅಲರ್ಟ್ ಘೋಷಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್

Share
ಯೋಗಿ ಆದಿತ್ಯನಾಥ್
Share

ಲಕ್ನೋ: ದೀಪೋತ್ಸವ, ದೀಪಾವಳಿ, ಛತ್ ಹಾಗೂ ದೇವ್ ದೀಪಾವಳಿ ಹಬ್ಬಗಳ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸರ್ಕಾರಿ ಅಧಿಕಾರಿಗಳು ಮತ್ತು ನೌಕರರ ರಜೆಯನ್ನು ರದ್ದುಗೊಳಿಸಿದ್ದು, ರಾಜ್ಯಾದ್ಯಂತ ಕಟ್ಟುನಿಟ್ಟಿನ ಭದ್ರತೆ ಹಾಗೂ ಹೈಅಲರ್ಟ್ ಘೋಷಿಸಿದ್ದಾರೆ. ತುರ್ತು ಸಂದರ್ಭಗಳನ್ನು ಹೊರತುಪಡಿಸಿ ಇತರೆ ಯಾವುದೇ ಸಂದರ್ಭದಲ್ಲಿ ರಜೆ ಮಂಜೂರು ಮಾಡಲಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಲಕ್ನೋದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಹಬ್ಬಗಳ ಸಿದ್ಧತೆಗಳ ಕುರಿತು ಪರಾಮರ್ಶೆ ನಡೆಸಿದ ಮುಖ್ಯಮಂತ್ರಿಯವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾಮಾಜಿಕ ಸೌಹಾರ್ದತೆಯನ್ನು ಕಾಪಾಡುವುದೇ ಸರ್ಕಾರದ ಪ್ರಥಮ ಆದ್ಯತೆಯಾಗಿದೆ ಎಂದು ತಿಳಿಸಿದ್ದಾರೆ. ಹಬ್ಬಗಳ ವಾತಾವರಣವನ್ನು ಕದಡಲು ಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳುವಂತೆ ಎಚ್ಚರಿಕೆ ನೀಡಿದ್ದಾರೆ.

ಮಾರುಕಟ್ಟೆ ಹಾಗೂ ಸಾಮಾಜಿಕ ಜಾಲತಾಣಗಳ ಮೇಲ್ವಿಚಾರಣೆ: ಮಾರುಕಟ್ಟೆಗಳಲ್ಲಿ 24 ಗಂಟೆಗಳ ಕಾಲ ನಿರಂತರ ನಿಗಾ ಇಡುವಂತೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ವಂದೇತಿಗಳನ್ನು ಹಬ್ಬಿಸುವವರ ಮೇಲೆ ಕಣ್ಣಿಡಲು ಪೊಲೀಸರಿಗೆ ಸೂಚಿಸಲಾಗಿದೆ.

ಅಗ್ನಿಶಾಮಕ ಸುರಕ್ಷತೆ: ಪಟಾಕಿಗಳನ್ನು ಕೇವಲ ತೆರೆದ ಹಾಗೂ ಸುರಕ್ಷಿತ ನಿರ್ದಿಷ್ಟ ಸ್ಥಳಗಳಲ್ಲಿ ಮಾತ್ರ ಮಾರಾಟ ಮಾಡಲು ಅವಕಾಶ ಕಲ್ಪಿಸಬೇಕು ಮತ್ತು ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಅಗ್ನಿಶಾಮಕ ದಳವು ಸದಾ ಸನ್ನದ್ಧವಾಗಿರಬೇಕು.

ಅಗತ್ಯ ಸೇವೆಗಳ ಸರಬರಾಜು: ಹಬ್ಬದ ದಿನಗಳಲ್ಲಿ ಯಾವುದೇ ವ್ಯತ್ಯಯವಿಲ್ಲದೆ ವಿದ್ಯುತ್, ಕುಡಿಯುವ ನೀರು, ಉತ್ತಮ ನೈರ್ಮಲ್ಯ ಹಾಗೂ ಸೂಕ್ತ ಬೆಳಕಿನ ವ್ಯವಸ್ಥೆಯನ್ನು ಒದಗಿಸಲು ಅಧಿಕಾರಿಗಳಿಗೆ ತಾಕೀತು ಮಾಡಲಾಗಿದೆ.

ರೈತರು ಹಾಗೂ ನೌಕರರ ಕಲ್ಯಾಣ: ರಸಂ ಕಪ್ಪು ಮಾರುಕಟ್ಟೆಗೆ ತಡೆಯೊಡ್ಡುವುದು, ಭತ್ತ ಖರೀದಿ ಪ್ರಕ್ರಿಯೆಯಲ್ಲಿ ಲೋಪವಾಗದಂತೆ ನೋಡಿಕೊಳ್ಳುವುದು ಮತ್ತು ಹಬ್ಬದ ಮುಂಚಿತವಾಗಿ ಹೊರಗುತ್ತಿಗೆ ನೌಕರರು ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಪಾವತಿಸಲು ನಿರ್ದೇಶಿಸಲಾಗಿದೆ.

ಸಾರ್ವಜನಿಕ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ತರುವವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ ಎಂದು ಯೋಗಿ ಆದಿತ್ಯನಾಥ್ ಎಚ್ಚರಿಕೆ ನೀಡಿದ್ದಾರೆ.
Share

Leave a comment

Leave a Reply

Your email address will not be published. Required fields are marked *

Recent Posts

Recent Comments

No comments to show.
Related Articles