Home ದಾವಣಗೆರೆ ವಚನಾನಂದ ಸ್ವಾಮೀಜಿಗೆ ಬಿಗ್ ರಿಲೀಫ್: ಜಾಮೀನು ರದ್ದು ಕೋರಿದ್ದ ಅರ್ಜಿ ವಜಾ!
ದಾವಣಗೆರೆಕ್ರೈಂ ನ್ಯೂಸ್ಬೆಂಗಳೂರು

ವಚನಾನಂದ ಸ್ವಾಮೀಜಿಗೆ ಬಿಗ್ ರಿಲೀಫ್: ಜಾಮೀನು ರದ್ದು ಕೋರಿದ್ದ ಅರ್ಜಿ ವಜಾ!

Share
ವಚನಾನಂದ ಸ್ವಾಮೀಜಿ
Share

ದಾವಣಗೆರೆ: ಹರಿಹರ ತಾಲೂಕಿನ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಪೀಠಾಧಿಪತಿ ಶ್ರೀ ವಚನಾನಂದ ಸ್ವಾಮೀಜಿ ಅವರಿಗೆ ಕಾನೂನು ಪ್ರಕ್ರಿಯೆಯಲ್ಲಿ ದೊಡ್ಡ ಮಟ್ಟದ ರಿಲೀಫ್ ಸಿಕ್ಕಿದೆ.

ಮಠದಲ್ಲಿದ್ದ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ದಾಖಲಾಗಿದ್ದ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ, ಸ್ವಾಮೀಜಿಗೆ ನೀಡಲಾಗಿದ್ದ ಜಾಮೀನನ್ನು ರದ್ದುಪಡಿಸುವಂತೆ ಕೋರಿ ಸಲ್ಲಿಸಲಿದ್ದ ತಕರಾರು ಅರ್ಜಿಯನ್ನು ದಾವಣಗೆರೆಯ ವಿಶೇಷ ಪೋಕ್ಸೊ ನ್ಯಾಯಾಲಯವು ವಜಾಗೊಳಿಸಿದೆ.

ಪ್ರಕರಣದ ಹಿನ್ನೆಲೆ:

ಹರಿಹರದ ಪಂಚಮಸಾಲಿ ಮಠದಲ್ಲಿದ್ದ ಅಪ್ರಾಪ್ತ ಬಾಲಕರಿಗೆ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಪೊಲೀಸರು ತನಿಖೆ ನಡೆಸಿ ಸ್ವಾಮೀಜಿಯವರ ವಿಚಾರಣೆಯನ್ನು ಸಹ ನಡೆಸಿದ್ದರು. ಇದರ ಬೆನ್ನಲ್ಲೇ, ಸ್ವಾಮೀಜಿ ತಮ್ಮ ಪ್ರಭಾವ ಬಳಸಿ ಸಾಕ್ಷಿಗಳನ್ನು ನಾಶಪಡಿಸಲು ಹಾಗೂ ಬೆದರಿಕೆ ಹಾಕಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಸಂತ್ರಸ್ತ ಬಾಲಕನ ತಾಯಿ ಪರವಾಗಿ ಜಾಮೀನು ರದ್ದು ಕೋರಿ ನ್ಯಾಯಾಲಯಕ್ಕೆ ಮರು ಅರ್ಜಿ ಸಲ್ಲಿಸಲಾಗಿತ್ತು.

ಈ ಅರ್ಜಿಯ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲಯ ಹಾಗೂ ಸ್ವಾಮೀಜಿ ಪರ ಹಿರಿಯ ವಕೀಲರ ವಾದ-ಪ್ರತಿವಾದಗಳನ್ನು ಆಲಿಸಿದ ಪೀಠ, ಅಂತಿಮವಾಗಿ ಅರ್ಜಿದಾರರ ಮನವಿಯನ್ನು ತಿರಸ್ಕರಿಸಿ ಆದೇಶ ಹೊರಡಿಸಿದೆ. ನ್ಯಾಯಾಲಯದ ಈ ತೀರ್ಪಿನಿಂದ ಶ್ರೀಗಳು ಸದ್ಯಕ್ಕೆ ನಿರಾಳರಾಗಿದ್ದು, ಕಾನೂನು ಹೋರಾಟದಲ್ಲಿ ದೊಡ್ಡ ಯಶಸ್ಸು ಸಿಕ್ಕಂತಾಗಿದೆ.

Share

Leave a comment

Leave a Reply

Your email address will not be published. Required fields are marked *