ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಕಿತ್ತೂರು ರಾಣಿ ಚೆನ್ನಮ್ಮನವರ ಸಂಗ್ರಾಮಕ್ಕೆ 200 ವರ್ಷ: ಕೇಂದ್ರ ಸರಕಾರದಿಂದ ಅಂಚೆ ಚೀಟಿ ಬಿಡುಗಡೆಗೆ ವಚನಾನಂದ ಶ್ರೀಗಳ ಹರ್ಷ

On: October 22, 2024 3:49 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:22-10-2024

ದಾವಣಗೆರೆ: ಅಕ್ಟೋಬರ್‌ 23 ರಂದು ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮನವರು ಬ್ರೀಟೀಷರ ವಿರುದ್ದ ನಡೆಸಿದ ಸಂಗ್ರಾಮದ ವಿಜಯೋತ್ಸವಕ್ಕೆ 200 ವರ್ಷ ಸಂದಲಿದೆ. ಈ ಐತಿಹಾಸಿಕ ವಿಜಯದ ಜ್ಞಾಪಕಾರ್ಥವಾಗಿ ರಾಣಿ ಚೆನ್ನಮ್ಮನವರ ಅಂಚೇ ಚೀಟಿಯನ್ನು ಬಿಡುಗಡೆ ಮಾಡಲು ಕೇಂದ್ರ ಸರಕಾರ ಮುಂದಾಗಿರುವುದು ಬಹಳ ಸಂತಸದ ಸಂಗತಿಯಾಗಿದೆ ಎಂದು ಹರಿಹರ ಪಂಚಮಸಾಲಿ ಪೀಠಾಧ್ಯಕ್ಷರಾದ ವಚನಾನಂದ ಸ್ವಾಮೀಜಿ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ಪಂಚಮಸಾಲಿ ಸಮುದಾಯದ ವೀರ ಮಹಿಳೆ ಕಿತ್ತೂರು ರಾಣೀ ಚೆನ್ನಮ್ಮ 200 ವರ್ಷಗಳ ಹಿಂದೆ ಬ್ರೀಟೀಷರ ವಿರುದ್ದ ಯುದ್ದ ಸಾರಿ ಗೆಲವು ಸಾಧಿಸಿದ್ದರು. ಇದರ ಜ್ಞಾಪಕಾರ್ಥವಾಗಿ
ರಾಣಿ ಚೆನ್ನಮ್ಮನವರ ಅಂಚೆ ಚೀಟಿಯನ್ನು ಬಿಡುಗಡೆ ಮಾಡುವಂತೆ ಕಿತ್ತೂರು ಕರ್ನಾಟಕ ನಿಯೋಗದ ಪ್ರಮುಖರು, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಅರವಿಂದ ಬೆಲ್ಲದ್‌, ಮಾಜಿ ಸಂಸದ ಅಣ್ಣಾಸಾಹೇಬ್‌ ಎಸ್‌ ಜೊಲ್ಲೆ ಅವರು ಕೇಂದ್ರ ಸಚಿವ ಜ್ಯೋತಿರಾದಿತ್ಯ ಎಂ ಸಿಂಧಿಯಾ ಅವರಿಗೆ ಅಕ್ಟೋಬರ್ 16ರಂದು ಮನವಿ ಮಾಡಲಾಗಿತ್ತು ಎಂದು ತಿಳಿಸಿದ್ದಾರೆ.

ಈ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ರಾಣಿ ಚೆನ್ನಮ್ಮನ ಅಂಚೆ ಚೀಟಿಯನ್ನು ಇದೇ ಅಕ್ಟೋಬರ್ 23ಕ್ಕೆ ಬಿಡುಗಡೆ ಮಾಡಲು ಆದೇಶ ಹೊರಡಿಸಿದ್ದು ಸ್ವಾಗತಾರ್ಹ ಎಂದು ಹೇಳಿದ್ದಾರೆ.

ಇದು ಭಾರತ ಸರಕಾರದ ವತಿಯಿಂದ ಪಂಚಮಸಾಲಿ ವೀರ ವನಿತೆ ರಾಣಿ ಚೆನ್ನಮ್ಮರಿಗೆ ಸಲ್ಲಿಸುತ್ತಿರುವ ಗೌರವವಾಗಿದೆ. ತನ್ನ ಧೈರ್ಯ ಹಾಗೂ ಸ್ಥೈರ್ಯದಿಂದ ದಿಟ್ಟ ಹೋರಾಟ ತೋರಿಸುವ ಮೂಲಕ ಭಾರತ ದೇಶದ ಇತಿಹಾಸದಲ್ಲಿ ವಿಶೇಷ ಕೊಡುಗೆಯನ್ನು ಚೆನ್ನಮ್ಮನವರು ದಾಖಲಿಸಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸರಕಾರಗಳು ಇವರ ಕೊಡುಗೆಯನ್ನು ದೇಶದ ಯುವ ಜನತೆಗೆ ತಲುಪಿಸುವ ಕಾರ್ಯ ಮಾಡಬೇಕಾಗಿದೆ ಎಂದು ವಚನಾನಂದ ಶ್ರೀಗಳು ಅಭಿಪ್ರಾಯಪಟ್ಟಿದ್ದಾರೆ.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment