Home ದಾವಣಗೆರೆ ಸೂರ್ಯವಂಶಿ “ವೈಭವ”ದ ಸ್ಫೋಟಕ ಆಟಕ್ಕೆ ಯುಎಇ ಕಂಗಾಲ್: ಕೇವಲ 40 ಎಸೆತಗಳಲ್ಲಿ150 ರನ್ ಬಾರಿಸಿ ವಿಶ್ವದಾಖಲೆ ಬರೆದ 15ರ ಪೋರ!
ದಾವಣಗೆರೆಕ್ರೀಡೆನವದೆಹಲಿಬೆಂಗಳೂರು

ಸೂರ್ಯವಂಶಿ “ವೈಭವ”ದ ಸ್ಫೋಟಕ ಆಟಕ್ಕೆ ಯುಎಇ ಕಂಗಾಲ್: ಕೇವಲ 40 ಎಸೆತಗಳಲ್ಲಿ150 ರನ್ ಬಾರಿಸಿ ವಿಶ್ವದಾಖಲೆ ಬರೆದ 15ರ ಪೋರ!

Share
ಸೂರ್ಯವಂಶಿ
Share

ದೋಹಾ: ವೈಭವ್ ಸೂರ್ಯವಂಶಿ ಆಟಕ್ಕೆ ಯುಇಎ ಬೌಲರ್ ಗಳು ಕಂಗಾಲ್ ಆದರು. ಕೇವಲ 28 ಎಸೆತಗಳಲ್ಲಿ ಭರ್ಜರಿ ಶತಕ ಸಿಡಿಸಿದ ವೈಭವ್ ಸೂರ್ಯವಂಶಿ ಆಟಕ್ಕೆ ಕ್ರಿಕೆಟ್ ಪಂಡಿತರೇ ನಿಬ್ಬೆರಗಾಗಿದ್ದಾರೆ.

ರೈಸಿಂಗ್ ಸ್ಟಾರ್ಸ್ ಏಷ್ಯಾ ಕಪ್ ಟೂರ್ನಿಯಲ್ಲಿ ಭಾರತ ‘ಎ’ ತಂಡದ ಯುವ ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ  ಅಸಾಧಾರಣ ಬ್ಯಾಟಿಂಗ್ ಪ್ರದರ್ಶನದ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಯುಎಇ (UAE) ವಿರುದ್ಧದ ಪಂದ್ಯದಲ್ಲಿ ಕೇವಲ 28 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ಲಿಸ್ಟ್-ಎ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ವೇಗದ ಶತಕ ದಾಖಲಿಸಿದ ವಿಶ್ವ ದಾಖಲೆಗೆ ಪಾತ್ರರಾಗಿದ್ದಾರೆ. ಮಾತ್ರವಲ್ಲ, ಕೇವಲ 40 ಎಸೆತಗಳಲ್ಲಿ 150 ರನ್ ಬಾರಿಸಿದ ವಿಶ್ವದ ಮೊದಲ ಬ್ಯಾಟ್ಸ್ ಮನ್ ಎಂಬ ಕೀರ್ತಿಗೂ ಪಾತ್ರರಾಗಿದ್ದಾರೆ.

ದೋಹಾದಲ್ಲಿ ನಡೆದ ಈ ಪಂದ್ಯದಲ್ಲಿ 250 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಭಾರತ ‘ಎ’ ತಂಡದ ಪರ ಕಣಕ್ಕಿಳಿದ 15 ವರ್ಷದ ವೈಭವ್ ಸೂರ್ಯವಂಶಿ ಆರಂಭದಿಂದಲೇ ಸಿಕ್ಸರ್‌ ಹಾಗೂ ಬೌಂಡರಿಗಳ ಸುರಿಮಳೆಗೈದರು. ಈ ಹಿಂದೆ ಆಸ್ಟ್ರೇಲಿಯಾದ ಆಟಗಾರ ಜೇಕ್ ಫ್ರೇಸರ್-ಮೆಕ್‌ಗುರ್ಕ್ ಹೆಸರಲ್ಲಿದ್ದ 29 ಎಸೆತಗಳ ಶತಕದ ದಾಖಲೆಯನ್ನು ಮುರಿದು ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ.

ವಿಶ್ವ ದಾಖಲೆಯ ಶತಕ: ಕೇವಲ 28 ಎಸೆತಗಳಲ್ಲಿ ಶತಕ ಪೂರ್ಣಗೊಳಿಸುವ ಮೂಲಕ 50 ಓವರ್‌ಗಳ (ಲಿಸ್ಟ್-ಎ) ಕ್ರಿಕೆಟ್‌ನಲ್ಲಿ ವಿಶ್ವದಲ್ಲೇ ಅತ್ಯಂತ ವೇಗದ ಶತಕ ಬಾರಿಸಿದ ಹೆಗ್ಗಳಿಗೆ ಪಾತ್ರರಾದರು.

ಸ್ಫೋಟಕ ಇನ್ನಿಂಗ್ಸ್: ಕೇವಲ 15 ವಯಸ್ಸಿನ ಯುವ ಬ್ಯಾಟರ್ ವೈಭವ್, ಯುಎಇ ಬೌಂಡರಿ ರೇಖೆಯಾಚೆಗೆ ಸೀಮಿತ ಓವರ್‌ಗಳಲ್ಲಿ ಸಿಕ್ಸರ್‌ಗಳ ಸುರಿಮಳೆಗೈದು ಗಮನ ಸೆಳೆದರು.

ಹಳೆಯ ದಾಖಲೆ ಮುರಿತ: ಆಸ್ಟ್ರೇಲಿಯಾದ ಜೇಕ್ ಫ್ರೇಸರ್-ಮೆಕ್‌ಗುರ್ಕ್ (29 ಎಸೆತ) ಹಾಗೂ ದಕ್ಷಿಣ ಆಫ್ರಿಕಾದ ಎಬಿ ಡಿ ವಿಲಿಯರ್ಸ್ (31 ಎಸೆತ) ದಾಖಲೆಯನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ್ದಾರೆ.

ಅಂತರರಾಷ್ಟ್ರೀಯ ಮಟ್ಟದ ಯುವ ಕ್ರಿಕೆಟ್ ಟೂರ್ನಿಯಲ್ಲಿ ಅತ್ಯಂತ ಕಿರಿಯ ವಯಸ್ಸಿನಲ್ಲಿ ಈ ರೀತಿಯ ಅಸಾಧಾರಣ ದಾಖಲೆ ಬರೆದಿರುವ ವೈಭವ್ ಸೂರ್ಯವಂಶಿ ಅವರ ಆಟಕ್ಕೆ ಕ್ರಿಕೆಟ್ ಜಗತ್ತಿನಿಂದ ಪ್ರಶಂಸೆ ವ್ಯಕ್ತವಾಗಿದೆ.

Share

Recent Comments

No comments to show.
Related Articles