SUDDIKSHANA KANNADA NEWS/DAVANAGERE/DATE:30_12_2025
ದಾವಣಗೆರೆ: ಇಂದು ಎಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ. ಶ್ರೀ ವೆಂಕಟೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ ಭಕ್ತರು ಪುನೀತರಾಗುತ್ತಿದ್ದಾರೆ.
ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಶ್ರೀ ವೆಂಕಟೇಶ್ವರ ದೇವಸ್ಥಾನಗಳು ಭಕ್ತರಿಂದ ಗಿಜಿಗುಡುತ್ತಿವೆ. ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಭಕ್ತರು ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆಯುತ್ತಿದ್ದಾರೆ. ದೇವಸ್ಥಾನಗಳಲ್ಲಿ ವೆಂಕಟೇಶ್ವರ ಸ್ವಾಮಿಗೆ ವಿಶೇಷ ಪೂಜೆ ಪುನಸ್ಕಾರ ನೆರವೇರಿದವು.
ವೈಕುಂಠ ಏಕಾದಶಿ ಅಂಗವಾಗಿ ದಾವಣಗೆರೆ ನಗರದ ಎಂಸಿಸಿ ಬಿ ಬ್ಲಾಕ್ ನಲ್ಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನ ಸನ್ನಿಧಿಯಲ್ಲಿ ಇಂದು ಬೆಳಗ್ಗೆಯಿಂದಲೇ ಭಕ್ತರು ತಿರುಪತಿ ದೇವರ ದರ್ಶನ ಮಾಡಿದರು.
ಇದೇ ಸಂದರ್ಭದಲ್ಲಿ ಸಾರ್ವಜನಿಕರಿಗೆ ಪ್ರಸಾದ ವಿತರಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರು, ಸಮಿತಿಯ ಪದಾಧಿಕಾರಿಗಳು, ಸ್ವಯಂಸೇವಕರು ಸೇರಿದಂತೆ ಸಾವಿರಾರು ಭಕ್ತರು ಬೆಳಗ್ಗೆಯಿಂದಲೇ ದೇವರ ದರ್ಶನ ಪಡೆದರು.





Leave a comment