SUDDIKSHANA KANNADA NEWS/ DAVANAGERE/ DATE:07-02-2025
ದಾವಣಗೆರೆ: ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ಫೆಬ್ರವರಿ 8 ಮತ್ತು 9ರಂದು ರಾಜನ ಹಳ್ಳಿಯ ಶ್ರೀ ಮಹರ್ಷಿ ವಾಲ್ಮಿಕಿ ಗುರುಪೀಠದಲ್ಲಿ ನಡೆಯಲಿದೆ ಎಂದು ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದ ಸಂಚಾಲಕ ಶ್ರೀನಿವಾಸ್ ದಾಸಕರಿಯಪ್ಪ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಶ್ರೀಮಠದ 27ನೇ ವಾರ್ಷಿಕೋತ್ಸವ, ಲಿಂಗೈಕ್ಯ ಜಗದ್ಗುರು ಶ್ರೀ ಪುಣ್ಯಾನಂದಪುರಿ ಮಹಾಸ್ವಾಮೀಜಿಯವರ 18ನೇ ವರ್ಷದ ಪುಣ್ಯಾರಾಧನೆ ಹಾಗೂ ಜಗದ್ಗುರು ಶ್ರೀ ಡಾ.ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮೀಜಿಯವರ 17ನೇ ವರ್ಷದ ಪಟ್ಟಾಧಿಕಾರ ಮಹೋತ್ಸವ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಫೆಬ್ರವರಿ 8 ರಂದು ಬೆಳಿಗ್ಗೆ 7ಕ್ಕೆ ರಾಜನಹಳ್ಳಿ ಗ್ರಾಮದಿಂದ ಶ್ರೀ ಮಠದವರೆಗೆ ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಗುರುಪೀಠದ ಡಾ.ವಾಲ್ಮೀಕಿ ಪ್ರಸನ್ನಾನಂದ ಶ್ರೀಗಳು ಧ್ವಜಾರೋಹಣ ಮಾಡುವ ಮೂಲಕ ಚಾಲನೆ ನೀಡಲಿದ್ದಾರೆ. ಹರಿಹರ ಶಾಸಕ ಬಿ.ಪಿ.ಹರೀಶ್, ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದ ಅಧ್ಯಕ್ಷ ಬಿ.ದೇವೇಂದ್ರಪ್ಪ ಚಿಕ್ಕಮ್ಮನಹಟ್ಟಿ, ಟಿ.ಓಬಳಪ್ಪ, ಶ್ರೀನಿವಾಸ್ ದಾಸ ಕರಿಯಪ್ಪ ಇತರೆ ಗಣ್ಯರು ಆಗಮಿಸಲಿದ್ದಾರೆ ಎಂದು ಹೇಳಿದರು.
ನಂತರ 8.30ಕ್ಕೆ ಸರ್ವಧರ್ಮ ಸಾಮೂಹಿಕ ವಿವಾಹ ಮಹೋತ್ಸವ ನಡೆಯಲಿದೆ. 9.30ಕ್ಕೆ ಕೃಷಿ ವಸ್ತು ಪ್ರದರ್ಶನ ಮೇಳ, ಉದ್ಯೋಗ ಮೇಳ ನಡೆಯಲಿದೆ. 10.30ಕ್ಕೆ ಶ್ರೀ ಮಹರ್ಷಿ ವಾಲ್ಮೀಕಿ ಜೀವನಾಧಾರಿತ ಫಲಪುಷ್ಪ ಪ್ರದರ್ಶನ ಮೇಳ ನಡೆಯಲಿದೆ ಎಂದು ಹೇಳಿದರು.
ಬೆಳಿಗ್ಗೆ 11ಕ್ಕೆ ಮಹಿಳಾ ಗೋಷ್ಠಿಯನ್ನು ಸಂಡೂರು ಶಾಸಕಿ ಅನ್ನಪೂರ್ಣ ಈ. ತುಕಾರಾಂ ಉದ್ಘಾಟನೆ ಮಾಡುವರು. ದೇವದುರ್ಗ ಶಾಸಕ ಕರೆಮ್ಮ ಜಿ.ನಾಯಕ, ಎಂಎಲ್ಸಿ ಹೇಮಲತಾ ನಾಯಕ, ಶಾಂತಲಾ ರಾಜಣ್ಣ, ಪ್ರಿಯಾಂಕ ಸತೀಶ್ ಜಾರಕಿಹೊಳಿ, ಡಾ.ಅನುಸೂಯ ಕೆಂಪನಹಳ್ಳಿ ಮಾಡಲಿದ್ದಾರೆ. ವಿವಿಧ ಕ್ಷೇತ್ರದ ಗಣ್ಯರು ಆಗಮಿಸಲಿದ್ದಾರೆ. ಮಧ್ಯಾಹ್ನ 2.30ರಿಂದ ನೌಕರರ ಗೋಷ್ಠಿ ಮತ್ತು ಕಾರ್ಯಾಗಾರ ನಡೆಯಲಿದೆ. ಸಂಜೆ 5ಕ್ಕೆ ಸಂಘಟನಾ ಗೋಷ್ಠಿ ನಡೆಯಲಿದೆ ಎಂದು ಹೇಳಿದರು.
ಫೆಬ್ರವರಿ 9ರಂದು ಬೆಳಿಗ್ಗೆ 9ಕ್ಕೆ ಧರ್ಮ ಸಭೆ ನಡೆಯಲಿದ್ದು, ರಾಜ್ಯದ ವಿವಿಧ ಮಠಾಧೀಶರು ಸಾನಿಧ್ಯ ವಹಿಸಲಿದ್ದಾರೆ. ಇದೇ ವೇಳೆ ಸಾಧನೆ ಮಾಡಿದ ಸಾಧಕರಿಗೆ 2024ನೇ ಸಾಲಿನ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಲಾಗುವುದು. ಮಧ್ಯಾಹ್ನ 12.30ಕ್ಕೆ ಜನ ಜಾಗೃತಿ ಜಾತ್ರಾ ಮಹೋತ್ಸವ ನಡೆಯಲಿದೆ. ರಾಜ್ಯದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ಮಾಡುವರು. ಜಾತ್ರಾ ಸಮಿತಿಯ ಅಧ್ಯಕ್ಷ ಬಿ.ದೇವೇಂದ್ರಪ್ಪ ಚಿಕ್ಕಮ್ಮನಹಟ್ಟಿ ಅಧ್ಯಕ್ಷತೆ ವಹಿಸಿದ್ದಾರೆ ಎಂದರು.
ಮುಖ್ಯ ಅತಿಥಿಗಳಾಗಿ ಕೇಂದ್ರದ ಬೃಹತ್ ಕೈಗಾರಿಕಾ ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಆಹಾರ, ನಾಗರಿಕ ವಿತರಣಾ ಖಾತೆ ಸಚಿವ ಪ್ರಹ್ಲಾದ ಜೋಷಿ, ಕರ್ನಾಟಕ ಸರ್ಕಾರದ ವಿಪಕ್ಷ ನಾಯಕ ಆರ್.ಅಶೋಕ, ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಎನ್. ರಾಜಣ್ಣ, ಮಾಜಿ ಸಚಿವ ಬಿ.ಶ್ರೀರಾಮುಲು, ಶ್ರೀನಿವಾಸ್ ದಾಸಕರಿಯಪ್ಪ, ಹಾವೇರಿ ಸಂಸದ ಬಸವರಾಜ್ ಬೊಮ್ಮಾಯಿ, ವಿ.ಸೋಮಣ್ಣ, ಬಿ.ವೈ. ವಿಜಯೇಂದ್ರ, ಎಸ್. ಎಸ್. ಮಲ್ಲಿಕಾರ್ಜುನ, ಕೆ.ಹೆಚ್. ಮುನಿಯಪ್ಪ, ಡಾ.ಜಿ.ಪರಮೇಶ್ವರ, ಹೆಚ್.ಸಿ. ಮಹಾದೇವಪ್ಪ, ಎಂ.ಬಿ.ಪಾಟೀಲ್, ಸಂತೋಷ ಲಾಡ್, ಪ್ರಿಯಾಂಕ ಖರ್ಗೆ, ಕೆ.ವೆಂಕಟೇಶ್, ಶಿವರಾಜ್ ತಂಗಡಗಿ, ಜಿ.ಕುಮಾರ ನಾಯಕ, ಈ ತುಕಾರಾಂ, ವಿ.ಎಸ್.ಉಗ್ರಪ್ಪ, ಬಿ.ನಾಗೇಂದ್ರ ಸೇರಿದಂತೆ ರಾಜ್ಯ, ಕೇಂದ್ರದ ಶಾಸಕರು, ಸಂಸದರು ಆಗಮಿಸಲಿದ್ದಾರೆ ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಜಿಗಳಿ ಪ್ರಕಾಶ್, ವಿನಾಯಕ ಬಿ.ಹೆಚ್. ಪೈಲ್ವಾನ್, ಪ್ರವೀಣ್ ಶಾಮನೂರು, ಜಿ.ಆರ್. ನಾಗರಾಜ್, ಎಸ್.ಸತೀಶ್ ಇದ್ದರು.