SUDDIKSHANA KANNADA NEWS/ DAVANAGERE/ DATE_03-07_2025
ದಾವಣಗೆರೆ: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ ಪಡೆಯಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಯುಪಿಎಸ್‍ಸಿ, ಐಎಎಸ್ ಗೆಜೆಟೆಡ್ ಪ್ರೊಬೇಷನರ್ ಪರೀಕ್ಷೆಗೆ ವಸತಿಯುತ ತರಬೇತಿಯನ್ನು ಬೆಂಗಳೂರಿನ ಹಜ್ ಭವನದಲ್ಲಿ ಹಾಗೂ ಕೆಪಿಎಸ್‍ಸಿ ಗ್ರೂಫ್ ಸಿ , ಆರ್‍ಆರ್ ಟಿ ಅಂಡ್ ಎಸ್‍ಎಸ್‍ಸಿ ಪರೀಕ್ಷಾ ಪೂರ್ವ ತರಬೇತಿಯನ್ನು ಪ್ರತಿಷ್ಠಿತ ಸಂಸ್ಥೆಗಳ ಮೂಲಕ ನೀಡಲಾಗುತ್ತಿದೆ. ಅರ್ಜಿಯನ್ನು ಸೇವಾಸಿಂಧೂ ಮೂಲಕ https://sevasindhu.karnataka.gov.in ಆಗಸ್ಟ್ 2 ರೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ, ತಾಲ್ಲೂಕು ಮಾಹಿತಿ ಕೇಂದ್ರ 08192-250066 ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ,# 44, ಎ ಬ್ಲಾಕ್ , 2ನೇ ಮಹಡಿ, ಜಿಲ್ಲಾ ಆಡಳಿತ ಭವನ , ಕರೂರು ಕ್ರಾಸ್, ಹರಿಹರ ರಸ್ತೆ, ದಾವಣಗೆರೆ- 08192-250022 ಸಂಪರ್ಕಿಸಲು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.