SUDDIKSHANA KANNADA NEWS/ DAVANAGERE/ DATE-16-06-2025
ಬೆಂಗಳೂರು: ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಕಂದು ಬಾಳೆ, ಅಂಗಾಂಶ ಬಾಳೆ, ತರಕಾರಿ, ಕಾಳುಮೆಣಸು, ಗೋಡಂಬಿ, ಹೂವಿನ ಬೆಳೆಗಳು ಪ್ರದೇಶ ವಿಸ್ತರಣೆ, ಕೃಷಿಹೊಂಡ, ಕಳೆ ಚಾಪೆ, ಮಿನಿ ಟ್ರಾಕ್ಟರ್ ಫಾರ್ಮ್
ಗೇಟ್, ಪ್ರಾಥಮಿಕ ಸಂಸ್ಕಾರಣಾ ಘಟಕ, ಪ್ಯಾಕ್‌ಹೌಸ್, ಸಮಗ್ರ ಪೀಡೆ ನಿರ್ವಹಣೆ ಮತ್ತು ರಾಜ್ಯದೊಳಗೆ ಹಮ್ಮಿಕೊಳ್ಳುವ ತರಬೇತಿ ಕಾರ್ಯಕ್ರಮಗಳು ಹಾಗೂ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ-ತಾಳೆ ಬೆಳೆ
ಯೋಜನೆಯಡಿ ಪ್ರದೇಶ ವಿಸ್ತರಣೆ (ಸ್ವದೇಶಿ ಮತ್ತು ವಿದೇಶಿ ತಳಿಗಳು) ಅಂತರ ಬೆಳೆ, ತಾಳೆ ಹಣ್ಣು ಕೊಯ್ಯಲು ಸಹಾಯಧನ ಕಾರ್ಯಕ್ರಮಗಳಿಗೆ ಸಹಾಯಧನ ಕೋರಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹಣ್ಣಿನ ಬೆಳೆಗಳು, ತರಕಾರಿ ಮತ್ತು ತೋಟದ ಬೆಳೆಗಳಿಗೆ ಹಾನಿ ನೀರಾವರಿ ಮತ್ತು ತುಂತುರು ನೀರಾವರಿ ಅಳವಡಿಸಿಕೊಳ್ಳಲು ಹಾಗೂ ಸಮಗ್ರ
ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ ಕಾಳುಮೆಣಸು ಪ್ರದೇಶ ವಿಸ್ತರಣೆ ಕೈಗೊಳ್ಳಲು ಆಸಕ್ತ ರೈತರಿಂದ ಸಹಾಯಧನ ಕೋರಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಕೇಂದ್ರ ಪುರಸ್ಕೃತ ಯೋಜನೆಯಾದ ಕೃಷಿ ವಿಸ್ತರಣೆ ಮತ್ತು ತರಬೇತಿ ಅಭಿಯಾನ ಯೋಜನೆಯಡಿ ಮತ್ತು ತೋಟಗಾರಿಕೆಯಲ್ಲಿ ವಿನೂತನ ತಂತ್ರಜ್ಞಾನ ಮತ್ತು ಯಾಂತ್ರೀಕರಣ ಯೋಜನೆಯಡಿ ಅಡಿಕೆ ಸಿಪ್ಪೆ ಸುಲಿಯುವ ಯಂತ್ರ, ತೆಂಗಿನ ಮರ ಹತ್ತುವ ಯಂತ್ರ, ಕಳೆ ಕೊಚ್ಚುವ ಯಂತ್ರ, ಟ್ರಾಕ್ಟರ್ ಟ್ರೆöÊಲರ್ ಮತ್ತು ಇನ್ನಿತರ ಯಂತ್ರೋಪಕರಣಗಳಿಗೆ ಹಾಗೂ ರಾಷ್ಟಿçÃಯ ಕೃಷಿ ವಿಕಾಸ ಯೋಜನೆಯಡಿ ಪ್ಲಾಸ್ಟಿಕ್ ಕ್ರೇಟ್, ಹಣ್ಣು ಮಾಗಿಸುವ ಘಟಕ, ಸೋಲಾರ್ ಪಂಪ್ ಸೆಟ್, ಲಘು ಪೋಷಕಾಂಶಗಳ ಮಿಶ್ರಣ/ಬೆಳೆ ಸ್ಪೆಷಲ್ ಸಹಾಯಧನ ನೀಡಲು ಆಸಕ್ತ ರೈತರಿಂದ ಸಹಾಯಧನ ಕೋರಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ರಾಜ್ಯವಲಯ ಯೋಜನೆ ಹಾಗೂ ಜಿಲ್ಲಾ ಪಂಚಾಯತ್ ಯೋಜನೆ ವತಿಯಿಂದ ಜೇನು ಪೆಟ್ಟಿಗೆ, ಸ್ಟಾಂಡ್ ಹಾಗೂ ಜೇನು ಕುಟುಂಬಕ್ಕೆ ಸಹಾಯಧನ ನೀಡಲು ಆಸಕ್ತ ರೈತರಿಂದ ಸಹಾಯಧನ ಕೋರಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂ.27 ಕೊನೆಯ ದಿನಾಂಕವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಆಯಾ ರೈತ ಸಂಪರ್ಕ ಕೇಂದ್ರದ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.