SUDDIKSHANA KANNADA NEWS/ DAVANAGERE/ DATE:16-01-2025
ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರಾಧ್ಯಕ್ಷ ಹಾಗೂ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರನ್ನು ವಿವಿಧ ಮಠಾಧೀಶರು ಭೇಟಿ ಮಾಡಿ ಆಶೀರ್ವದಿಸಿದರು. ಶಾಮನೂರು ಶಿವಶಂಕರಪ್ಪರ ಆರೋಗ್ಯ ವಿಚಾರಿಸಿದರು.
ಬಾಳೆಹೊನ್ನೂರಿನ ಶ್ರೀಮದ್ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಹಾಗೂ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿಗಳು, ಹರಿಹರ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿಗಳು, ಮಾಚಿದೇವ ಗುರುಪೀಠದ ಶ್ರೀ ಬಸವ ಮಾಚಿದೇವ ಶ್ರೀಗಳು ಹಾಗೂ ವಿವಿಧ ಸ್ವಾಮೀಜಿಗಳು ಡಾ. ಶಾಮನೂರು ಶಿವಶಂಕರಪ್ಪ ಅವರನ್ನು ಭೇಟಿ ಮಾಡಿ ಕುಶಲೋಪರಿ ನಡೆಸಿ ಆಶೀರ್ವದಿಸಿದರು.
ಬೆಂಗಳೂರಿನಲ್ಲಿನ ಸಚಿವರ ನಿವಾಸಕ್ಕೆ ಭೇಟಿ ನೀಡಿದ ಶ್ರೀಗಳು, ಎಸ್. ಎಸ್. ಮಲ್ಲಿಕಾರ್ಜುನ್, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಆಶೀರ್ವದಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ದೂಡಾ ಅಧ್ಯಕ್ಷರು, ಪಾಲಿಕೆ ಸದಸ್ಯರು, ಕಾಂಗ್ರೆಸ್ ಪಕ್ಷದ ವಿವಿಧ ವಿಭಾಗಗಳ ಮುಖಂಡರು ಮತ್ತಿತರರು ಹಾಜರಿದ್ದರು.