SUDDIKSHANA KANNADA NEWS/ DAVANAGERE/ DATE-06-06-2025
ಬೆಂಗಳೂರು: ಕರ್ನಾಟಕ ವಿರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನ ಮತ್ತು ಸಾಲ-ಸೌಲಭ್ಯಕ್ಕಾಗಿ ಆನ್‌ಲೈನ್ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹತೆ:
ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ವಿರಶೈವ ಲಿಂಗಾಯತ ಸಮುದಾಯ ಹಾಗೂ ಅದರ ಉಪ ಜಾತಿಗಳಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ
ಕಡ್ಡಾಯ. ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು.
ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿರಬೇಕು. ನಿಗಮವು ಅನುಷ್ಠಾನಗೊಳಿಸುವ ಈ ಮೇಲ್ಕಂಡ ಯೋಜನೆಗಳಲ್ಲಿ ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ಅಧ್ಯಕ್ಷರು ಹಾಗೂ ನಿರ್ದೇಶಕÀರು ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಬಯಸುವವರೂ ಸಹ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಮೇಲ್ಕಂಡ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ
ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
2023-24 ಮತ್ತು 2024-25ನೇ ಸಾಲಿನಲ್ಲಿ ಅರ್ಜಿಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಪಲಾನುಭಾವಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಯೋಜನೆಗಳ ವಿವರ:
ಶೈಕ್ಷಣಿಕ ಸಾಲ ಯೋಜನೆಯಡಿ ಬಸವ ಬೆಳಗು ಯೋಜನೆ (ಹೊಸದು) ಮತ್ತು (ನವೀಕರಣ), ವಿದೇಶ ವಿದ್ಯಾ ವಿಕಾಸ ಯೋಜನೆ (ಹೊಸದು), ಜೀವ ಜಲ ಯೋಜನೆ, ಕಾಯಕ ಕಿರಣ ಯೋಜನೆ, ಭೋಜನಾಲಯ ಕೇಂದ್ರ,
ವಿಭೂತಿ ನಿರ್ಮಾಣ ಘಟಕ, ಸ್ವಾವಲಂಭಿ ಸಾರಥಿ ಯೋಜನೆ, ಸ್ವ ಸಹಾಯ ಸಂಘಗಳಿಗೆ ಉತ್ತೇಜನ, ಸ್ವಾತಂತ್ರö್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆ(ಈ ಯೋಜನೆಯಡಿ ಅರ್ಜಿ www.kaushalkar.com ನಲ್ಲಿ ಸಲ್ಲಿಸಬೇಕು).
ಅರ್ಜಿಗಳನ್ನು ಬೆಂಗಳೂರು-ಒನ್/ಕರ್ನಾಟಕ-ಒನ್/ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಸೇವಾಸಿಂಧು ಪೋರ್ಟಲ್‌ನಡಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನವಾಗಿದೆ.
ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://kvldcl.karnataka.gov.in ಅಥವಾ ನಿಗಮದ ಕೇಂದ್ರ ಕಚೇರಿಯ ದೂ. 080 22865522, ಮೊ.9900012351, 9900012352 ಗೆ ಸಂಪರ್ಕಿಸಬಹುದು.