ದಾವಣಗೆರೆ: ಬೆಳ್ತಂಗಡಿ ಕೋರ್ಟಿಗೆ ಎಸ್ಐಟಿ 3,923 ಪುಟಗಳ ಮಧ್ಯಂತರ ವರದಿ ಸಲ್ಲಿಸಿದ್ದು, 6 ಜನರ ಬುರುಡೆ ಗ್ಯಾಂಗ್ ಸ್ಪಷ್ಟವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಪೂಜ್ಯ ಶ್ರೀ ವೀರೇಂದ್ರ ಹೆಗಡೆಯವರ ವಿರುದ್ಧ ಷಡ್ಯಂತ್ರ ಹಾಗೂ ಸುಳ್ಳುಸಾಕ್ಷಿ ಸೃಷ್ಟಿ ಮಾಡಿರುವುದು ಸಾಬೀತಾಗಿದೆ ಎಂದು ಮಾಜಿ ಸಚಿವ ಎಂ. ಪಿ. ರೇಣುಕಾಚಾರ್ಯ ಹೇಳಿದ್ದು, ಇದು ಸತ್ಯಕ್ಕೆ ಸಂದ ಜಯ ಎಂದಿದ್ದಾರೆ.
ಹಿಂದೂ ಶ್ರದ್ಧಾ ಕೇಂದ್ರಗಳ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ನೆಡೆಯುತ್ತಿದ್ದು ಈ ಬುರುಡೆ ಗ್ಯಾಂಗ್ ಅನ್ನು ತಕ್ಷಣ ಬಂಧಿಸಿ, ಇವರ ಹಿಂದಿರುವ ದುಷ್ಟ ಶಕ್ತಿಗಳನ್ನು ಪತ್ತೆ ಹಚ್ಚಿ ಕಾನೂನಿನ ಕುಣಿಕೆಯಲ್ಲಿ ಸಿಲುಕಿಸಿ ಕಠಿಣ ಶಿಕ್ಷೆ ಕೊಡಿಸಬೇಕೆಂದು ರಾಜ್ಯ ಸರ್ಕಾರವನ್ನು ಅವರು ಆಗ್ರಹಿಸಿದ್ದಾರೆ.
ಅಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪನವರ ನೇತೃತ್ವದಲ್ಲಿ ‘ಧರ್ಮಸ್ಥಳ ಚಲೋ’ ಜನಜಾಗೃತಿ ಬೃಹತ್ ಸಮಾವೇಶ ಮಾಡಿ ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ಧ್ವನಿ ಎತ್ತಿದ್ದು, ಇದು ಸತ್ಯಕ್ಕೆ ಸಂದ ಜಯವಾಗಿದೆ ಎಂದು ತಿಳಿಸಿದ್ದಾರೆ.





Leave a comment