SUDDIKSHANA KANNADA NEWS/ DAVANAGERE/ DATE-28-04-2025
ಮಂಗಳೂರು: ನೂರಾರು ಹುಡುಗಿಯರ ಜೊತೆಗಿನ ಸರಸ ಸಲ್ಲಾಪದ ವಿಡಿಯೋಗಳು ಪತ್ತೆಯಾಗಿದ್ದು, ಕಾರ್ಕಳ ನಿವಾಸಿ ಸೈಯದ್ ಎಂಬಾತನನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸರು ಬಂಧಿಸಿ, ಕಾಮುಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಈತನು ಉಡುಪಿ ಜಿಲ್ಲೆಯ ಕಾರ್ಕಳದ ಸೈಯದ್ ಎಂಬುದು ಗೊತ್ತಾಗಿದೆ. ಈತನು ಅನ್ಯಕೋಮಿನ ವಿದ್ಯಾರ್ಥಿನಿಯರು, ಯುವತಿಯರನ್ನು ಪುಸಲಾಯಿಸಿ ರತಿಕ್ರೀಡೆಗೆ ಆಹ್ವಾನಿಸುತ್ತಿದ್ದ. ಈತನ ಮೊಬೈಲ್ ನಲ್ಲಿ ನೂರಾರು ವಿಡಿಯೋಗಳು ಪತ್ತೆಯಾಗಿದ್ದು, ಇದರಲ್ಲಿ ಕಾಲೇಜು ವಿದ್ಯಾರ್ಥಿನಿಯರು ಮತ್ತು ಯುವತಿಯರು ಇದ್ದಾರೆ. ಅವರೊಟ್ಟಿಗಿನ ಖಾಸಗಿ ಕ್ಷಣಗಳ ವಿಡಿಯೋಗಳು ಪತ್ತೆಯಾಗಿವೆ ಎಂದು ತಿಳಿದು ಬಂದಿದೆ.
ಉಡುಪಿ ಜಿಲ್ಲೆಯ ಕಾರ್ಕಳದವನಾದ ಈತ ಬೆಳ್ತಂಗಡಿ ಖಾಸಗಿ ಕಾಲೇಜಿನ ವಿದ್ಯಾರ್ಥಿ ಆಗಿದ್ದ. ಜೊತೆಗೆ ಕಬಡ್ಡಿ ಆಟಗಾರನೂ ಆಗಿದ್ದ. ಅಶ್ಲೀಲ ವಿಡಿಯೋಗಳು ಪತ್ತೆಯಾಗಿದ್ದು, ಈತನ ಕಠಿಣ ಶಿಕ್ಷೆಯಾಗಬೇಕು ಎಂದು ಹಿಂದೂ ಸಂಘಟನೆಗಳು ಆಗ್ರಹಿಸಿವೆ.
ಸಿಕ್ಕಿ ಬಿದ್ದಿದ್ದು ಹೇಗೆ?
ಕಾಮುಕ, ಆರೋಪಿ ಸಯ್ಯದ್, ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್ ಮೇಲೆ ಮೆಸೇಜ್ ಮಾಡುತ್ತಿದ್ದ. ಲೈಂಗಿಕ ಕಿರುಕುಳವನ್ನೂ ನೀಡಿದ್ದ. ಯುವತಿಯು ಈತನ ಕಾಟಕ್ಕೆ ಬೇಸತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರಿಗೆ
ಮಾಹಿತಿ ನೀಡಿದ್ದು, ಇದರಿಂದ ರೊಚ್ಚಿಗೆದ್ದ ಹಿಂದೂ ಸಂಘಟನೆ ಕಾರ್ಯಕರ್ತರು ಸೈಯದ್ ಮೇಲೆ ದಾಳಿ ನಡೆಸಿ ಪೊಲೀಸರಿಗೆ ಹಿಡಿದು ಕೊಟ್ಟಿದ್ದಾರೆ. ಮೊಬೈಲ್ ತೆಗೆದುಕೊಂಡು ಪರಿಶೀಲಿಸಿದಾಗ ನೂರಾರು ವಿಡಿಯೋಗಳು ಸಿಕ್ಕಿದ್ದು,
ಈತನ ವಿರುದ್ಧ ಕ್ರಮ ಜರುಗಿಸದಿದ್ದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆಯನ್ನೂ ನೀಡಲಾಗಿದೆ.
ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಎಸಗಿದ ಆರೋಪ ಎದುರಿಸಿ ಕಳೆದ ಒಂದು ವರ್ಷದಿಂದ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ. ಮಾತ್ರವಲ್ಲ, ಜಾಮೀನು ಅರ್ಜಿ ವಜಾಗೊಳಿಸಲಾಗಿದೆ. ಇನ್ನು ಕರಾವಳಿಯ ಕಾಮುಕ ಸೈಯದ್ ಕೃತ್ಯಕ್ಕೆ ಎಲ್ಲರೂ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.