ವಿಧಾನ ಪರಿಷತ್‌ನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಕ್ಕೆ ಜೂ.3ರಂದು ಚುನಾವಣೆ ನಡೆಯಲಿರುವ ಹಿನ್ನಲೆಯಲ್ಲಿ ಆ ಭಾಗದ ಅರ್ಹ ಮತದಾರರಿಗೆ ಸೀಮಿತವಾಗಿ ವಿಶೇಷ ರಜೆಯನ್ನು ಘೋಷಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈಶಾನ್ಯ, ನೈರುತ್ಯ ಹಾಗೂ ಬೆಂಗಳೂರು ಪದವೀಧರ ಕ್ಷೇತ್ರ, ಆಗ್ನೇಯ, ನೈರುತ್ಯ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ವ್ಯಾಪ್ತಿಗೆ ಬರುವ ಸರ್ಕಾರಿ, ಖಾಸಗಿ, ಶಾಲಾ-ಕಾಲೇಜು, ಅನುದಾನಿತ ಮತ್ತು ಅನುದಾನ ರಹಿತ ವಿದ್ಯಾಸಂಸ್ಥೆಗಳು, ಎಲ್ಲ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗೆ ರಜೆ ಘೋಷಿಸಲಾಗಿದೆ.