Home ದಾವಣಗೆರೆ ವಿದ್ಯಾರ್ಥಿ ಸಹಾಯ ಹಸ್ತ ಯೋಜನೆಯಡಿ ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ವೃತ್ತಿಪರ ಕೋರ್ಸ್‌ಗಳಲ್ಲಿ ಶೇ 7.5 ಮೀಸಲಾತಿ ಘೋಷಣೆ!
ದಾವಣಗೆರೆನವದೆಹಲಿಬೆಂಗಳೂರು

ವಿದ್ಯಾರ್ಥಿ ಸಹಾಯ ಹಸ್ತ ಯೋಜನೆಯಡಿ ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ವೃತ್ತಿಪರ ಕೋರ್ಸ್‌ಗಳಲ್ಲಿ ಶೇ 7.5 ಮೀಸಲಾತಿ ಘೋಷಣೆ!

Share
ವಿದ್ಯಾರ್ಥಿ
Share

ಬೆಂಗಳೂರು: ಗ್ರಾಮೀಣ ಭಾಗದ ಬಡ ಹಾಗೂ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಉನ್ನತ ಶಿಕ್ಷಣದ ಹಾದಿಯನ್ನು ಸುಲಭಗೊಳಿಸುವ ಉದ್ದೇಶದಿಂದ “ವಿದ್ಯಾರ್ಥಿ ಸಹಾಯ ಹಸ್ತ” ಎಂಬ ನೂತನ ಯೋಜನೆಯನ್ನು ಜಾರಿಗೆ ತರಲು ತೀರ್ಮಾನಿಸಲಾಗಿದೆ.

ಈ ಯೋಜನೆಯಡಿ, 1ರಿಂದ 10ನೇ ತರಗತಿಯವರೆಗೆ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಓದಿದ ವಿದ್ಯಾರ್ಥಿಗಳಿಗೆ ವೈದ್ಯಕೀಯ (NEET), ಎಂಜಿನಿಯರಿಂಗ್ (CET) ಸೇರಿದಂತೆ ಪ್ರಮುಖ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಯಲ್ಲಿ ಒಳ-ಮೀಸಲಾತಿ ಸಿಗಲಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ಶೇ 15 ಗ್ರಾಮೀಣ ಮೀಸಲಾತಿಯ ವ್ಯಾಪ್ತಿಯೊಳಗೇ ಶೇ 7.5 ರಷ್ಟು ವಿಶೇಷ ಮೀಸಲಾತಿಯನ್ನು ಕೇವಲ ಸರ್ಕಾರಿ ಶಾಲೆಯ ಮಕ್ಕಳಿಗೆ ಕಾಯ್ದಿರಿಸಲಾಗುವುದು ಎಂದು ಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ. 

ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಗೌರವವಂದನೆ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಅಲ್ಲದೆ, ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯದ ಪ್ರತಿಯೊಂದು ಪಟ್ಟಣ ಹಾಗೂ ನಗರಗಳಲ್ಲಿ ಹೊರ ವರ್ತುಲ ರಸ್ತೆ (Ring Road) ಮತ್ತು ಮೊಬಿಲಿಟಿ ಗ್ರಿಡ್‌ಗಳನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.

“ನಾಡಿನ ಅಭಿವೃದ್ಧಿಯ ತೇರನ್ನು ಎಳೆಯಲು ಪ್ರತಿಯೊಬ್ಬ ಕನ್ನಡಿಗರ ಕೈ ಜೋಡಿಸಬೇಕು” ಎಂದು ಕರೆ ನೀಡಿದ ಸರ್ಕಾರವು, ಕುವೆಂಪು ಅವರ “ಅನಿಕೇತನ” ಕವನದ ವಿಶ್ವಮಾನವ ಸಂದೇಶವನ್ನು ಸ್ಮರಿಸಿದೆ ಎಂದರು.

Share

Leave a comment

Leave a Reply

Your email address will not be published. Required fields are marked *

Recent Posts

Recent Comments

No comments to show.
Related Articles