SUDDIKSHANA KANNADA NEWS/ DAVANAGERE/ DATE:12-10-2024
ದಾವಣಗೆರೆ: ನಗರದಲ್ಲಿ ವಿಶ್ವ ಹಿಂದೂ ಪರಿಷತ್ತು ಸಾರ್ವಜನಿಕ ವಿಜದಶಮಿ ಮಹೋತ್ಸವ ಸಮಿತಿ ವತಿಯಿಂದ ನಗರದ ವೆಂಕಟೇಶ್ವರ ವೃತ್ತದಿಂದ ವಿಜಯದಶಮಿ ಶೋಭಾಯಾತ್ರೆ ಮೆರವಣಿಗೆ ಕ್ಷಣಗಣನೆ ಆರಂಭವಾಗಿದೆ.
ಈ ಸಂಬಂಧ ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯಲ್ಲಿ ಕಾನೂನು -ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ವಿಜಯದಶಮಿ ಶೋಭಾಯಾತ್ರೆ ಸಮಯದಲ್ಲಿ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಲಾಗಿದೆ. ಆಯೋಜಕರಿಗೂ ಸೂಚನೆ ನೀಡಲಾಗಿದೆ.
ವಿಜಯದಶಮಿ ಮೆರವಣಿಗೆಯನ್ನು ಈಗಾಗಲೇ ನಿಗಧಿಪಡಿಸಿದ ಮಾರ್ಗಗಳಲ್ಲಿಯೇ ಸಾಗಬೇಕು. ವುದು ಹಾಗೂ ಯಾವುದೇ ಕಾರಣಕ್ಕೂ ಮಾರ್ಗ ಬದಲಾವಣೆಗೆ ಅವಕಾಶವಿರುವುದಿಲ್ಲ. ಯಾವುದೇ ಜೀವ ಹಾನಿಯಾಗದಂತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಕಾನೂನು ಸುವ್ಯವಸ್ಥೆಗೆ ದಕ್ಕೆ ತರುವಂತಹವರ ಮತ್ತು ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ನಿರ್ಧಕ್ಷಣ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಪ್ರಚೋದನಕಾರಿ ಹಾಡುಗಳನ್ನು ಹಾಕುವುದು, ಪೋಸ್ಟರ್ಗಳನ್ನು ಪ್ರದರ್ಶಿಸುವುದಕ್ಕೆ ಅವಕಾಶ ಇರುವುದಿಲ್ಲ. ಈ ಬಗ್ಗೆ ಆಯೋಜಕರು ವಿಶೇಷ ಗಮನ ಹರಿಸುವುದು ಮತ್ತು ಸೂಕ್ತ ಕ್ರಮ ಕೈಗೊಳ್ಳುವುದು. ಸಾರ್ವಜನಿಕ, ಜನ ಸಂದಣಿ ಪ್ರದೇಶಗಳಲ್ಲಿ ಪಟಾಕಿಗಳನ್ನು ಸಿಡಿಸಬಾರದು. ಸುರಕ್ಷಿತ ಕ್ರಮಗಳನ್ನು ಅನುಸರಿಸಬೇಕು. ಮಾದಕ ವಸ್ತು ಸೇವನೆ, ಮದ್ಯ ಸೇವನೆ ಮಾಡಬಾರದು. ಸಂಚಾರ ವ್ಯವಸ್ಥೆಗೆ ತೊಂದರೆಯಾಗದಂತೆ ವಿಜಯದಶಮಿ ಮೆರವಣಿಗೆಯನ್ನು
ನಡೆಸಬೇಕು.
ಯಾವುದೇ ವಿದ್ಯುತ್ ಅವಘಡಗಳಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.ಮೆರವಣಿಗೆ ಮಾರ್ಗಗಳಲ್ಲಿ ಬೆಳಕಿನ ವ್ಯವಸ್ಥೆಗೆ ಜನರೇಟರ್ ಗಳನ್ನು ಅಳವಡಿಸಿಕೊಳ್ಳಬೇಕು. ಮೆರವಣಿಗೆ ಮಾರ್ಗಗಳ ಸೂಕ್ಷ್ಮ ಪ್ರದೇಶಗಳಲ್ಲಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಈಗಾಗಲೇ ರೌಡಿ ಮತ್ತು ಮತೀಯ ಗೂಂಡಗಳ ಮೇಲೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ನಿಗಾ ಇರಿಸಲಾಗಿದೆ. ಕರ್ಕಶವಾದ ಶಬ್ಧವನ್ನುಂಟು ಮಾಡುವ ಸೌಂಡ್ ಸಿಸ್ಟಂ ಮತ್ತು ಡಿಜೆಗಳನ್ನು ಉಪಯೋಗಿಸಬಾರದು, ಏಕೆಂದರೆ ಮಾನ್ಯ ಘನ ನ್ಯಾಯಲಯವು ಕರ್ಕಶವಾದ ಶಬ್ಧವನ್ನುಂಟು ಮಾಡುವ ಸೌಂಡ್ ಸಿಸ್ಟಂ ಮತ್ತು ಡಿಜೆಗಳನ್ನು ನಿಷೇಧಿಸಿದ್ದು, ಉಲ್ಲಂಘಿಸಿದ್ದಲ್ಲಿ ಕಾನೂನು ರಿತ್ಯಾ ಕ್ರಮ ಕೈಗೊಳ್ಳಲಾಗುವುದು.
ಸಾರ್ವಜನಿಕ ಆಸ್ತಿ, ಜೀವ ಹಾನಿಯಾಗದಂತೆ ಮುಂಜಾಗ್ರತ ಕ್ರಮಗಳನ್ನು ಅನುಸರಿಸಬೇಕು. ಮೆರವಣಿಗೆ ಮಾರ್ಗಗಳಲ್ಲಿ ಸ್ವಯಂ ಸೇವಕರನ್ನು ನೇಮಿಸಬೇಕು. ಈ ಬಗ್ಗೆ ಸ್ಥಳೀಯ ಠಾಣೆಗೆ ಮಾಹಿತಿ ನೀಡಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಕೋಮುಪ್ರಚೋದಕ ಹಾಗೂ ಧಾರ್ಮಿಕ ನಿಂದನೆ, ಸುಳ್ಳುಸುದ್ದಿ ಹರಡುವುದು, ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರುವಂತಹ ಪೋಸ್ಟ್ ಗಳನ್ನು ಹಾಕುವುದಾಗಲೀ ಹಾಗು ಶೇರ್ ಮಾಡುವುದಾಗಲೀ ಕಂಡು ಬಂದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೇ ಶಾಂತಿಯುತವಾಗಿ ಹಾಗೂ ಸೌಹಾರ್ಧಯುತವಾಗಿ ಹಬ್ಬವನ್ನು ಆಚರಿಸುವುದು, ಯಾವುದೇ ಅಹಿತಕರ ಘಟನೆಗಳು ಕಂಡುಬಂದರೆ ತುರ್ತು ಸಹಾಯವಣಿ 112 ಗೆ ಕರೆ ಮಾಡುವುದು ಹಾಗೂ ಸ್ಥಳೀಯ ಪೊಲೀಸ್ ಠಾಣೆ/ಪೊಲೀಸ್ ಅಧಿಕಾರಿ ಸಿಬ್ಬಂದಿಗಳಿಗೆ ಮಾಹಿತಿ ನೀಡಲು ಕೋರಲಾಗಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಪಡೆಯದೇ ಯಾವುದೇ ಬ್ಯಾನರ್ ಮತ್ತು ಬಂಟಿಂಗ್ಸ್ ಗಳನ್ನು ಹಾಕಬಾರದು. ಈಗಾಗಲೇ ಹಾಕಿರುವ ಬಂಟಿಂಗ್ಸ್ ಬ್ಯಾನರ್ಸ್, ಟ್ಯಾಬ್ಲೋ ಗಳ ಸುರಕ್ಷತೆ ಬಗ್ಗೆ ಆಯೋಜಕರು ಸ್ವಯಂ ಸೇವಕರನ್ನು ನೇಮಿಸಬೇಕು.
ಪೊಲೀಸ್ ಬಂದೋಬಸ್ತ್:
ವಿಜಯದಶಮಿ ಮೆರವಣಿಗೆ ಸಂಬಂಧ ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ವಿಜಯದಶಮಿ ಮೇರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿ ಸಿಬ್ಬಂದಿ ಹಾಗೂ ಕೆ.ಎಸ್.ಆರ್.ಪಿ ತುಕಡಿಗಳು, ಡಿಎಆರ್ ತುಕಡಿಗಳನ್ನು ಅಲ್ಲದೇ ಹೋಮ್ ಗಾರ್ಡ್ ಸಿಬ್ಬಂದಿಗಳನ್ನು ನಿಯೋಜಿಸಿದ್ದು, ಮೆರವಣಿಗೆ ಉದ್ದಕ್ಕೂ ಸಿಸಿಟಿವಿ ಅಳವಡಿಕೆ, ಮೆರವಣಿಗೆಯ ಸಂಪೂರ್ಣ
ಚಿತ್ರಿಕರಣಕ್ಕೆ ವಿಡಿಯೋಗ್ರಾಫರ್ ಗಳನ್ನು ನಿಯೋಜಿಸಲಾಗಿದೆ.
ಅಲ್ಲದೇ ಮೆರವಣಿಗೆಯ ಉದ್ದಕ್ಕೂ ಡ್ರೋನ್ ಕಣ್ಗಾವಲು ಇರಿಸಲಾಗಿರುತ್ತದೆ. ಒಟ್ಟಾರೆಯಾಗಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ಎಸ್ಪಿ ಉಮಾ ಪ್ರಶಾಂತ್
ತಿಳಿಸಿದ್ದಾರೆ.