SUDDIKSHANA KANNADA NEWS/ DAVANAGERE/ DATE:28-02-2024
ದಾವಣಗೆರೆ: ಚನ್ನಗಿರಿ ಪ್ರವಾಸಿ ಮಂದಿರದಲ್ಲಿ ಫೆ. 29ರ ನಾಳೆ ಗುರುವಾರ ಬೆಳಿಗ್ಗೆ 11.30ಕ್ಕೆ ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ಔಟ್ ರಿಚ್ ವಿಭಾಗದ ವತಿಯಿಂದ ವಿಶೇಷ ಸಭೆ ಕರೆಯಲಾಗಿದೆ.
ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಪ್ರಬಲ ಟಿಕೆಟ್ ಆಕಾಂಕ್ಷಿಗಳೂ, ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ಔಟ್ ರಿಚ್ ವಿಭಾಗದ ಕರ್ನಾಟಕ ರಾಜ್ಯ ಉಪಾಧ್ಯಕ್ಷ ವಿನಯ್ ಕುಮಾರ್ ಜಿ.ಬಿ. ಕಕ್ಕರಗೊಳ್ಳ
ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಈ ವಿಶೇಷ ಸಭೆಗೆ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಯುವ ಮುಖಂಡರು, ಮಹಿಳಾ ಪದಾಧಿಕಾರಿಗಳು, ಜಿ.ಪಂ., ತಾ.ಪಂ., ಗ್ರಾ.ಪಂ. ಹಾಲಿ, ಮಾಜಿ ಸದಸ್ಯರು, ಅಭಿಮಾನಿಗಳು, ಹಿತೈಷಿಗಳು, ಬೆಂಬಲಿಗರು,
ಕಾರ್ಯಕರ್ತರು ಆಗಮಿಸಿ ಸಭೆ ಯಶಸ್ವಿಗೊಳಿಸುವಂತೆ ಮನವಿ ಮಾಡಲಾಗಿದೆ.