SUDDIKSHANA KANNADA NEWS/ DAVANAGERE/ DATE:06-02-2024
ದಾವಣಗೆರೆ: ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಅವರು ನಗರದ ಮಧ್ಯಭಾಗದಲ್ಲಿರುವ ಲೋಕೋಪಯೋಗಿ ಇಲಾಖೆ ಸಿಬ್ಬಂದಿಯವರ ವಸತಿಗೃಹ ಕಟ್ಟಡದ ಪರಿಶೀಲನೆ ನಡೆಸಿ ಸಿಬ್ಬಂದಿಯವರ ಕುಂದು ಕೊರತೆ ವಿಚಾರಿಸಿ ಮೂಲಭೂತ ಸೌಕರ್ಯ ಅಳವಡಿಸಲು ಮತ್ತು ಸಮರ್ಪಕ ನೀರು ಪೂರೈಕೆ ಮಾಡಲು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಳಿಕ ದಾವಣಗೆರೆ ನಗರದ ರಾಷ್ಟ್ರೀಯ ಹೆದ್ದಾರಿ ಪಕ್ಕದ ಸಕ್ರ್ಯೂಟ್ ಹೌಸ್ ಪಕ್ಕದಲ್ಲಿರುವ ಜಾಗದಲ್ಲಿ ಅಂಬೇಡ್ಕರ್ ಭವನ ನಿರ್ಮಿಸುವ ಉದ್ದೇಶದಿಂದ ಸ್ಥಳ ಪರೀಶೀಲನೆ ನಡೆಸಿದರು.
ಮಹಾನಗರ ಪಾಲಿಕೆ ಆಯುಕ್ತರು ಮತ್ತು ನಗರ ಅಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು, ಲೋಕೋಪಯೋಗಿ ಇಲಾಖೆ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು. ನಗರದ ಎಸ್ಎಸ್ಎಂ ಬಡಾವಣೆಯಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಖಾಲಿ ಇರುವ ಜಾಗದಲ್ಲಿ ಕಸಾಯಿ ಖಾನೆ ನಿರ್ಮಿಸಲು ನಿಗದಿಪಡಿಸಿರುವ ಜಾಗವನ್ನು ಪರಿಶೀಲಿಸಿದರು.
ನಗರದ ಡಿಸ್ಟಿಕ್ ಫೈರ್ ಆಫೀಸ್ ಕಚೇರಿಗೆ ಭೇಟಿ ನೀಡಿ ಇಲ್ಲಿನ ಕಾರ್ಯವೈಖರಿ ಬಗ್ಗೆ ಪರಿಶೀಲನೆ ನಡೆಸಿ ಕಚೇರಿ ಕಟ್ಟಡ ಸ್ವಚ್ಛತೆ ಮತ್ತು ಸಿಬ್ಬಂದಿಯವರ ಕುಂದು ಕೊರತೆ ವಿಚಾರಿಸಿ ಜನಸ್ನೇಹಿಯಾಗಿ ಜನಪರವಾಗಿ
ಕಾರ್ಯನಿರ್ವಹಿಸಲು ಸೂಚಿಸಿದರು.
ಪಾಲಿಕೆ ಆಯುಕ್ತೆ ರೇಣುಕಾ, ಕಾರ್ಯಪಾಲಕ ಇಂಜಿನಿಯರ್ ನರೇಂದ್ರಬಾಬು, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹಾಂತೇಶ್ ಹಾಗೂ ಪಾಲಿಕೆ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.