SUDDIKSHANA KANNADA NEWS/ DAVANAGERE/ DATE:01-11-2023
ದಾವಣಗೆರೆ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ವಿಧಾನಸಭಾ ಕ್ಷೇತ್ರವಾರು ಭಾವಚಿತ್ರವಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2024 ಕ್ಕೆ ಸಂಬಂಧಿಸಿದಂತೆ ಅ.27 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ನಡೆಸಿದ ಸಭೆಯಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯನ್ನು ಪರಿಷ್ಕರಣೆ ಮಾಡುತ್ತಿರುವ ಬಗ್ಗೆ ಚರ್ಚಿಸಿ ಮಾಹಿತಿ ನೀಡಿದರು.
ಕರಡು ಮತದಾರರ ಪಟ್ಟಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಡಿಸೆಂಬರ್ 9 ರೊಳಗೆ ಸಲ್ಲಿಸುವುದು. ಡಿ.26 ರಂದು ಆಕ್ಷೇಪಣೆಯನ್ನು ಇತ್ಯರ್ಥಗೊಳಿಸಲಾಗುವುದು. 2024 ರ ಜನವರಿ 05 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಣೆ ಮಾಡಲಾಗುವುದು.
ದಾವಣಗೆರೆ ಜಿಲ್ಲೆಯ ಮತದಾರರ ಅಂಕಿ ಅಂಶಗಳು:
- 103-ಜಗಳೂರು: ಪುರುಷರು -98057, ಮಹಿಳೆಯರು-95670, ಇತರೆ-10, ಒಟ್ಟು 193737. 104-ಹರಿಹರ- ಪುರುಷರು -104204, ಮಹಿಳೆಯರು-104659, ಇತರೆ-18, ಒಟ್ಟು 208881.
- 106-ದಾವಣಗೆರೆ ದಕ್ಷಿಣ: ಪುರುಷರು -120943, ಮಹಿಳೆಯರು-123964, ಇತರೆ-36, ಒಟ್ಟು 244943.
- 107-ದಾವಣಗೆರೆ ಉತ್ತರ, ಪುರುಷರು -106328, ಮಹಿಳೆಯರು-107723, ಇತರೆ-36, ಒಟ್ಟು 214087.
- 108-ಮಾಯಾಕೊಂಡ: ಪುರುಷರು -97000, ಮಹಿಳೆಯರು-95541, ಇತರೆ-6, ಒಟ್ಟು 192547.
- 109-ಚನ್ನಗಿರಿ, ಪುರುಷರು -100937, ಮಹಿಳೆಯರು-100215, ಇತರೆ-8, ಒಟ್ಟು 201160.
- 110-ಹೊನ್ನಾಳಿ-ಪುರುಷರು -99462, ಮಹಿಳೆಯರು-98998, ಇತರೆ-3, ಒಟ್ಟು 198463.
- ಜಿಲ್ಲೆಯ ಮತದಾರರಲ್ಲಿ ಪುರುಷರು- 726931, ಮಹಿಳೆಯರು -726770, ಇತರೆ-117 ಸೇರಿ ಒಟ್ಟು ಮತದಾರರ ಸಂಖ್ಯೆ -1453818.
ಜಿಲ್ಲೆಯ ಮತದಾರರ ನೋಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೋಂದಾಣಾಧಿಕಾರಿಗಳ ವಿವರ:
103-ಜಗಳೂರು ವಿಧಾನಸಭಾ ಕ್ಷೇತ್ರ ಹಾಗೂ 105-ಹರಿಹರ ವಿಧಾನಸಭಾ ಕ್ಷೇತ್ರಕ್ಕೆ ದಾವಣಗೆರೆ ಉಪವಿಭಾಗಾಧಿಕಾರಿ ಮತದಾರರ ನೋಂದಣಾಧಿಕಾರಿಗಳಾಗಿರುತ್ತಾರೆ. ಜಗಳೂರು ತಹಶೀಲ್ದಾರ್ ಮತ್ತು ಹರಿಹರ ತಹಶೀಲ್ದಾರ್ ಸಹಾಯಕ ಮತದಾರರ ನೋಂದಣಾಧಿಕಾರಿಗಳಾಗಿರುತ್ತಾರೆ.
106-ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರ ಮತ್ತು 107-ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಮಹಾನಗರಪಾಲಿಕೆಯ ಆಯುಕ್ತರು ಮತದಾರರ ನೋಂದಣಾಧಿಕಾರಿಗಳಾಗಿರುತ್ತಾರೆ. ಪಾಲಿಕೆಯ ಕಂದಾಯ ಅಧಿಕಾರಿ ಮತ್ತು ಪಾಲಿಕೆಯ ಪರಿಷತ್ ಕಾರ್ಯದರ್ಶಿ ಸಹಾಯಕ ಮತದಾರರ ನೋಂದಣಾಧಿಕಾರಿಗಳಾಗಿರುತ್ತಾರೆ.
108-ಮಾಯಾಕೊಂಡ ವಿಧಾನಸಭಾ ಕ್ಷೇತ್ರಕ್ಕೆ ದಾವಣಗೆರೆ ಉಪವಿಭಾಗಾಧಿಕಾರಿ ಮತದಾರರ ನೋಂದಣಾಧಿಕಾರಿಗಳಾಗಿರುತ್ತಾರೆ. ದಾವಣಗೆರೆ ತಹಶೀಲ್ದಾರ್ ಸಹಾಯಕ ಮತದಾರರ ನೋಂದಣಾಧಿಕಾರಿಗಳಾಗಿರುತ್ತಾರೆ.
109-ಚನ್ನಗಿರಿ ವಿಧಾನಸಭಾ ಕ್ಷೇತ್ರ ಹಾಗೂ 110-ಹೊನ್ನಾಳಿ ವಿಧಾನಸಭಾ ಕ್ಷೇತ್ರಕ್ಕೆ ಹೊನ್ನಾಳಿ ವಿಭಾಗಾಧಿಕಾರಿ ಮತದಾರರ ನೋಂದಣಾಧಿಕಾರಿಗಳಾಗಿರುತ್ತಾರೆ. ಚನ್ನಗಿರಿ ತಹಶೀಲ್ದಾರ್ ಹಾಗೂ ಹೊನ್ನಾಳಿ ತಹಶೀಲ್ದಾರ್ ಸಹಾಯಕ ಮತದಾರರ ನೋಂದಣಾಧಿಕಾರಿಗಳಾಗಿರುತ್ತಾರೆ.
ಎಪಿಕ್ ಹೊಂದಿರುವ ಮತದಾರರು ಪಟ್ಟಿಯಲ್ಲಿ ತಮ್ಮ ಹೆಸರಿರುವ ಬಗ್ಗೆ ಮತ್ತೊಮ್ಮೆ ಪರಿಶೀಲನೆ ನಡೆಸಿ ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಬಗ್ಗೆ ದೃಢಪಡಿಸಿಕೊಳ್ಳಬಹುದು.
ಒಂದು ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಮಾತ್ರ ಹೆಸರು ನೋಂದಾಯಿಸಿಕೊಂಡಿರುವ ಬಗ್ಗೆ ಖಚಿತ ಪಡಿಸಿಕೊಳ್ಳುವುದು. ಮತದಾರರ ಪಟ್ಟಿಯಲ್ಲಿ ಈವರೆಗೆ ನೋಂದಣಿಯಾಗದ ಹಾಗೂ ದಿನಾಂಕ: 01-01-2024 ಕ್ಕೆ 18 ವರ್ಷ ಪೂರ್ಣಗೊಳ್ಳುವ ಯುವ ಮತದಾರರು ತಮ್ಮ ಹೆಸರನ್ನು ನೋಂದಾಯಿಸಲು ಅರ್ಜಿ ಸಲ್ಲಿಸಬಹುದು. ಅಲ್ಲದೆ 01.04.2024, 01.07.2024, 01.10.2024ಕ್ಕೆ 18 ವರ್ಷ ತುಂಬುವ ಯುವ ಮತದಾರರು ಸಹಾ ಮುಂಗಡವಾಗಿ ಅರ್ಜಿ ಸಲ್ಲಿಸಬಹುದು.
ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಲು ನಮೂನೆ-6, ವಿದೇಶಗಳಲ್ಲಿ ನೆಲಸಿರುವ ಭಾರತೀಯ ನಾಗರೀಕರು ಹೆಸರು ಸೇರ್ಪಡೆಗೆ ನಮೂನೆ-6ಎ, ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ, ಇತರೆ 11 ದಾಖಲೆಗಳ ಜೋಡಣೆಗೆ ನಮೂನೆ-6ಬಿ, ಹೆಸರು ತೆಗೆದು ಹಾಕಲು, ಆಕ್ಷೇಪಣೆಗೆ ನಮೂನೆ-7, ತಿದ್ದುಪಡಿ ಮತ್ತು ಸ್ಥಳಾಂತರಕ್ಕೆ ನಮೂನೆ-8ನ್ನು
ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಸಂಬಂಧಿಸಿದ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಸಲ್ಲಿಸಬಹುದು. ಅರ್ಜಿಗಳನ್ನು ಆನ್ ಲೈನ್ ಮುಖಾಂತರ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಹಾಯವಾಣಿ ಸಂಖ್ಯೆ 1950ಕ್ಕೆ ಕರೆ ಮಾಡಬಹುದು ಎಂದು ತಿಳಿಸಿದರು.