Site icon Kannada News-suddikshana

ಬೆಂಗಳೂರಿಗೆ ಬರುತ್ತಿದ್ದ ವಿಆರ್‌ಎಲ್‌ ಬಸ್‌ ಪಲ್ಟಿ: ಇಬ್ಬರು ಸಾವು

ಯಾದಗಿರಿ: ಬೆಂಗಳೂರಿಗೆ ಬರುತ್ತಿದ್ದ ವಿಆರ್‌ಎಲ್‌ ಸಂಸ್ಥೆಯ ಬಸ್‌ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹತ್ತಿಗೂಡುರ ಗ್ರಾಮದ ಬ್ರಿಡ್ಜ್ ಬಳಿ ನಡೆದಿದೆ. ಮೃತರು ಕಲಬುರ್ಗಿಯ ಮೂಲದ ನಿವಾಸಿಗಳು ಎಂದು ಗುರುತಿಸಲಾಗಿದೆ.

37 ಜನ ಪ್ರಯಾಣಿಕರನ್ನೊಳಗೊಂಡ ವಿಆರ್​ಎಲ್​ ಬಸ್​ ಕಲಬುರ್ಗಿಯಿಂದ ಬೆಂಗಳೂರು ಕಡೆ ತೆರಳುತ್ತಿತ್ತು ಈ ವೇಳೆ ಹತ್ತಿಗೂಡುರ ಗ್ರಾಮದ ಬ್ರಿಡ್ಜ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿಯಾಗಿದೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, 7 ಜನರ ಸ್ಥಿತಿ ಚಿಂತಾಜನಕವಾಗಿದೆ. ​ಬಸ್‌ನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ಹೊರತೆಗೆಯಲು ಪೊಲೀಸರು ಹರಸಾಹಸ ಪಟ್ಟಿದ್ದು, ಗಾಯಾಳುಗಳನ್ನು ಶಹಾಪುರ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.
ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸುರಪುರ ಡಿವೈಎಸ್ಪಿ ಜಾವೇದ್ ಇನಾಮ್ದಾರ್ ಹಾಗೂ ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

 

Exit mobile version