SUDDIKSHANA KANNADA NEWS/DAVANAGERE/DATE:21_12_2025
ದಾವಣಗೆರೆ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ನಗರದ ಬಿ.ಡಿ.ಟಿ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್ ವಿಭಾಗದ ಮುಖ್ಯಸ್ಥರು ಹಾಗೂ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮುಖ್ಯಸ್ಥ ಡಾ. ಎನ್ ಮಂಜ ನಾಯ್ಕ್ ಆಯ್ಕೆಯಾಗಿದ್ದಾರೆ.
ಡಾ. ಎನ್ ಮಂಜ ನಾಯ್ಕ್ ಅವರನ್ನು ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದ 10 ನೇ ಕಾರ್ಯಕಾರಿ ಸಮಿತಿ ಮಂಡಳಿಯ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದ್ದು, ವಿಶ್ವವಿದ್ಯಾಲಯ ಮಟ್ಟದ ಪ್ರಮುಖ ನೀತಿ ನಿರ್ಣಯ ಹಾಗೂ ಶೈಕ್ಷಣಿಕ ಸುಧಾರಣೆಗಳನ್ನು ರೂಪಿಸುವ ಕಾರ್ಯಕಾರಿ ಮಂಡಳಿಯಲ್ಲಿ ಸ್ಥಾನ ದೊರಕಿದ್ದು, ಬಿಡಿಟಿ ತಾಂತ್ರಿಕ ಮಹಾವಿದ್ಯಾಲಯದ ಸ್ನೇಹ ಬಳಗ ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.





Leave a comment