• ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
Friday, May 9, 2025
Social icon element need JNews Essential plugin to be activated.
Kannada News-suddikshana
No Result
View All Result
  • Login
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
No Result
View All Result
Morning News
No Result
View All Result

37 ಲಕ್ಷ ರೈತರಿಗೆ 28,000 ಕೋಟಿ ರೂ. ಸಾಲ ವಿತರಿಸುವ ಗುರಿ, ಸುಸ್ತಿ ಸಾಲಗಳ ಮೇಲಿನ ಬಡ್ಡಿ ಮನ್ನಾ!

Editor by Editor
March 7, 2025
in ದಾವಣಗೆರೆ, ಬೆಂಗಳೂರು
0
37 ಲಕ್ಷ ರೈತರಿಗೆ 28,000 ಕೋಟಿ ರೂ. ಸಾಲ ವಿತರಿಸುವ ಗುರಿ, ಸುಸ್ತಿ ಸಾಲಗಳ ಮೇಲಿನ ಬಡ್ಡಿ ಮನ್ನಾ!

SUDDIKSHANA KANNADA NEWS/ DAVANAGERE/ DATE:07-03-2025

ಬೆಂಗಳೂರು: 2024-25ನೇ ಸಾಲಿನಲ್ಲಿ 21.78 ಲಕ್ಷ ರೈತರಿಗೆ 18,960 ಕೋಟಿ ರೂ. ಕೃಷಿ ಸಾಲ ವಿತರಿಸಲಾಗಿದೆ. ರಿಯಾಯತಿ ಬಡ್ಡಿ ದರದಲ್ಲಿ ನೀಡುವ ಪುನರ್ಧನದ ಮಿತಿಯನ್ನು ನಬಾರ್ಡ್‌ ಶೇ.58ರಷ್ಟು ಕಡಿಮೆ ಮಾಡಿದ್ದರೂ ಸಹ, ನಿಗದಿತ ಗುರಿಯನ್ನು ಸಾಧಿಸಲು ನಾವು ಬದ್ಧರಾಗಿದ್ದೇವೆ. ಪ್ರಸಕ್ತ ಸಾಲಿನಲ್ಲಿ 37 ಲಕ್ಷ ರೈತರಿಗೆ 28,000 ಕೋಟಿ ರೂ. ಸಾಲವನ್ನು ವಿತರಿಸುವ ಗುರಿಯನ್ನು ಹೊಂದಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

2023-24ನೇ ಸಾಲಿನ ಬೆಳಗಾವಿ ಅಧಿವೇಶನದಲ್ಲಿ ಘೋಷಿಸಿದಂತೆ, ಡಿಸಿಸಿ (DCC) ಹಾಗೂ ಪಿಕಾರ್ಡ್‌ (PCARD) ಬ್ಯಾಂಕುಗಳಿಗೆ ಸಂಬಂಧಿಸಿದ ಮಧ್ಯಮಾವಧಿ ಮತ್ತು ದೀರ್ಘಾವಧಿ ಸುಸ್ತಿ ಸಾಲಗಳ ಮೇಲಿನ 240 ಕೋಟಿ ರೂ. ಬಡ್ಡಿಯನ್ನು ಮನ್ನಾ ಮಾಡಲಾಗಿದೆ.

ಯಶಸ್ವಿನಿ ಯೋಜನೆಯಡಿ ಇಲ್ಲಿಯವರೆಗೆ 700 ನೆಟ್‌ವರ್ಕ್ಮಆಸ್ಪತ್ರೆಗಳು ನೋಂದಣಿಯಾಗಿದ್ದು, ಈ ಆಸ್ಪತ್ರೆಗಳಲ್ಲಿ ಇದುವರೆಗೂ ರಾಜ್ಯಾದ್ಯಂತ 59,000 ಫಲಾನುಭವಿಗಳು 103 ಕೋಟಿ ರೂ. ಮೊತ್ತದ ಚಿಕಿತ್ಸೆ ಪಡೆದಿರುತ್ತಾರೆ.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕೇಂದ್ರ ಪುರಸ್ಕೃತ ಗಣಕೀಕರಣ ಯೋಜನೆಯಡಿ 93 ಕೋಟಿ ರೂ.ಗಳಷ್ಟು ಬಿಡುಗಡೆ ಮಾಡಿ, ರಾಜ್ಯದಲ್ಲಿ 110 ಸಂಘಗಳ ಗಣಕೀಕರಣವನ್ನು ಪೂರ್ಣಗೊಳಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ,
3,000 ಸಂಘಗಳನ್ನು ಸಂಪೂರ್ಣವಾಗಿ ಗಣಕೀಕರಣಗೊಳಿಸಲು ಉದ್ದೇಶಿಸಲಾಗಿದೆ.

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಗೆ ಪ್ರತಿ ಕ್ವಿಂಟಾಲ್‌ಗೆ 7,550 ರೂ. ಜೊತೆಗೆ ರಾಜ್ಯ ಸರ್ಕಾರದ ವತಿಯಿಂದ ಹೆಚ್ಚುವರಿ ಪ್ರೋತ್ಸಾಹಧನ 450 ರೂ.ಗಳಂತೆ ಒಟ್ಟು 138 ಕೋಟಿ ರೂ. ನೀಡಲು ತೀರ್ಮಾನಿಸಲಾಗಿದೆ.
ಇದರಿಂದ, ತೊಗರಿ ಬೆಳೆಯುವ ಪ್ರಮುಖ ಜಿಲ್ಲೆಗಳಾದ ಕಲಬುರಗಿ, ಬೀದರ್‌, ಯಾದಗಿರಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಕೋಲಾರ, ಚಿತ್ರದುರ್ಗ ಹಾಗೂ ಚಿಕ್ಕಬಳ್ಳಾಪುರ ಭಾಗದ ರೈತರಿಗೆ ಅನುಕೂಲವಾಗಲಿದೆ.

ಸಹಕಾರ ಇಲಾಖೆಯಲ್ಲಿ ಕಾರ್ಯಕ್ಷಮತೆ, ಪಾರದರ್ಶಕತೆ ಹಾಗೂ ಜನಸ್ನೇಹಿ ಸೇವೆಗಳನ್ನು ನೀಡಲು ಈ ಕೆಳಕಂಡ ಸುಧಾರಣಾ ಕ್ರಮಗಳನ್ನು ಜಾರಿಗೆ ತರಲಾಗುವುದು.

ರಾಜ್ಯದ ಎಲ್ಲಾ ನೊಂದಾಯಿತ ಗೃಹ ನಿರ್ಮಾಣ ಸಹಕಾರ ಸಂಘಗಳ ಮಾಹಿತಿಯನ್ನು ಕರ್ನಾಟಕ ರಾಜ್ಯ ಸಹಕಾರ ವಸತಿ ಮಹಾಮಂಡಳದ ವತಿಯಿಂದ ಆನ್‌ಲೈನ್‌ನಲ್ಲಿ ಅಳವಡಿಸಲಾಗುವುದು.

ಠೇವಣಿದಾರರ ಹಿತಾಸಕ್ತಿಯನ್ನು ಕಾಪಾಡಲು ಹಾಗೂ ಅವ್ಯವಹಾರವನ್ನು ತಡೆಯಲು ಸಹಾಯವಾಣಿಯನ್ನು ಪ್ರಾರಂಭಿಸಲಾಗುವುದು.

ಸಹಕಾರ ಸಂಘಗಳ ಲೆಕ್ಕ ಪರಿಶೋಧನೆ ವರದಿಗಳನ್ನು ಡಿಜಿಟಲೀಕರಣಗೊಳಿಸಲಾಗುವುದು. ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಪೂರ್ಣಗೊಂಡಿರುವ ಉಗ್ರಾಣಗಳ ನಿರ್ಮಾಣ ಹಾಗೂ ಮೂಲಸೌಕರ್ಯ ಕಾಮಗಾರಿಗಳನ್ನು ಪೂರ್ಣಗೊಳಿಸಲು 376 ಕೋಟಿ ರೂ. ಸಹಾಯಾನುದಾನವನ್ನು ಹಿಂದಿನ ಆಯವ್ಯಯದಲ್ಲಿ ಘೋಷಿಸಿದ್ದೇನೆ. ಅದರಂತೆ, ಈಗಾಗಲೇ 329 ಕೋಟಿ ರೂ. ಬಿಡುಗಡೆಗೊಳಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ, ಬಾಕಿ ಇರುವ 47 ಕೋಟಿ ರೂ. ಮೊತ್ತವನ್ನು
ಒದಗಿಸಲಾಗುವುದು.

ರಾಜ್ಯದ ಎಲ್ಲಾ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಪರವಾನಿಗೆ ಪಡೆದು ಕಾರ್ಯನಿರ್ವಹಿಸುತ್ತಿರುವ ಶ್ರಮಿಕರು ಮೃತರಾದಾಗ ಅವರ ವಾರಸುದಾರರಿಗೆ ಒಂದು ಲಕ್ಷ ರೂ. ವಿಮಾ ಮೊತ್ತವನ್ನು ನೀಡಲಾಗುತ್ತಿದ್ದು, ಸದರಿ ವಿಮಾ
ಮೊತ್ತವನ್ನು ಐದು ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು. ಬೆಂಗಳೂರಿನಲ್ಲಿರುವ ಮಾರುಕಟ್ಟೆ ಸಮಿತಿಗಳಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗಿರುವುದರಿಂದ ಬೆಂಗಳೂರಿನ ಹೊರವಲಯದಲ್ಲಿ ಹೊಸ Satellite Market ಅನ್ನು ಸ್ಥಾಪಿಸಲಾಗುವುದು.

ಕೊಪ್ಪಳ ಜಿಲ್ಲೆಯ ಬೂದುಗುಂಪ ಗ್ರಾಮದಲ್ಲಿ ಕುರಿ ಮತ್ತು ಮೇಕೆ ಮಾರುಕಟ್ಟೆಯನ್ನು KKRDB ವತಿಯಿಂದ 25 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಮೂಲಸೌಲಭ್ಯಗಳೊಂದಿಗೆ ಸ್ಥಾಪಿಸಲಾಗುವುದು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೈನುಗಾರಿಕೆಯನ್ನು
ಉತ್ತೇಜಿಸಲು 10 ಕೋಟಿ ರೂ. ಅನುದಾನವನ್ನು ಪ್ರಥಮ ಹಂತದಲ್ಲಿ ನೀಡಲಾಗುವುದು. ಕಲಬುರಗಿಯಲ್ಲಿ ನೂತನ ಮೆಗಾ ಡೈರಿಯನ್ನು ಪ್ರಾರಂಭಿಸಲು KKRDB ವತಿಯಿಂದ 50 ಕೋಟಿ ರೂ. ಅನುದಾನ ಒದಗಿಸಲಾಗುವುದು.

KKRDB ವತಿಯಿಂದ ಕಲಬುರಗಿಯಲ್ಲಿ ಪ್ರಾದೇಶಿಕ ಸಹಕಾರ ಭವನವನ್ನು 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿದೆ. KKRDB ಸಹಯೋಗದಿಂದ ಗ್ರಾಮೀಣ ಉಗ್ರಾಣಗಳನ್ನು 60 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು.

ಕುರಿ ಮತ್ತು ಮೇಕೆ ಸಾಕಾಣಿಕೆದಾರರಿಗೆ ಅನುವಾಗುವಂತೆ ಬೆಂಗಳೂರಿನಲ್ಲಿ ಸುಸಜ್ಜಿತ ಕುರಿ ಮತ್ತು ಮೇಕೆ ಮಾರುಕಟ್ಟೆಯನ್ನು ಪ್ರಾರಂಭಿಸಲಾಗುವುದು. ಚಿಕ್ಕಬಳ್ಳಾಪುರದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ವತಿಯಿಂದ ಅಂತಾರಾಷ್ಟ್ರೀಯ ಮಟ್ಟದ ಹೈಟೆಕ್‌ ಹೂವಿನ ಮಾರುಕಟ್ಟೆಯನ್ನು ಹಾಗೂ ಕೆ.ಜಿ.ಎಫ್‌. ನಲ್ಲಿ ರೈತರ ಆಧುನಿಕ ಮಾರುಕಟ್ಟೆಯನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು.

Next Post
328 ದೇವಾಲಯಗಳ ಆಸ್ತಿ ಒತ್ತುವರಿ ತೆರವಿಗೆ ಬಿಗಿ ಕ್ರಮ, ತಸ್ತೀಕ್ ಮೊತ್ತ 60,000ದಿಂದ 72 ಸಾವಿರಕ್ಕೆ ಏರಿಕೆ!

328 ದೇವಾಲಯಗಳ ಆಸ್ತಿ ಒತ್ತುವರಿ ತೆರವಿಗೆ ಬಿಗಿ ಕ್ರಮ, ತಸ್ತೀಕ್ ಮೊತ್ತ 60,000ದಿಂದ 72 ಸಾವಿರಕ್ಕೆ ಏರಿಕೆ!

Leave a Reply Cancel reply

Your email address will not be published. Required fields are marked *

Recent Posts

  • ಎಲ್ಲಾ ಟಿ-20 ಐಪಿಎಲ್ ಪಂದ್ಯಗಳ ರದ್ದುಗೊಳಿಸಿದ ಬಿಸಿಸಿಐ
  • ಐಪಿಎಲ್ ಟಿ-20 ಟೂರ್ನಮೆಂಟ್ ರದ್ದಾಗುತ್ತಾ? ಐಪಿಎಲ್ ಅಧ್ಯಕ್ಷರು ಹೇಳಿದ್ದೇನು…?
  • ಬಾಂಬ್ ಇಟ್ಕೊಂಡು ಹೋಗೋ ಬದ್ಲು ಭಾರತದೊಳಗಿರುವ ಪಾಕಿಗಳನ್ನ ಜಮೀರ್ ಅಹ್ಮದ್ ಹೊಡೆದಾಕಲಿ: ಎಂ. ಪಿ. ರೇಣುಕಾಚಾರ್ಯ ಟಾಂಗ್!
  • ಜಾಗತಿಕ ಭಿಕ್ಷೆ ಬೇಡಿದ್ದ ಪಾಕ್ ಎಕ್ಸ್ ಖಾತೆಯೇ ಹ್ಯಾಕ್: ಪಾಕ್ ಆರ್ಥಿಕ ವ್ಯವಹಾರಗಳ ಸಚಿವಾಲಯಕ್ಕೆ ಶಾಕ್!
  • ಐಸಿ-814 ವಿಮಾನ ಅಪಹರಣದ ಮಾಸ್ಟರ್‌ಮೈಂಡ್ ಅಬ್ದುಲ್ ರೌಫ್ ಅಜರ್ ಆಪ್ ಖತಂ: ಯಾರು ಈ ಉಗ್ರ?

Recent Comments

No comments to show.

Archives

  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023

Categories

  • Chitradurga
  • CINEMA
  • DHARAVADA
  • DINA BHAVISHYA
  • Home
  • Hubli
  • JOB NEWS
  • KALABURAGI
  • Mangalore
  • MYSORE
  • SHIVAMOGGA
  • STATE
  • Stock market (ಷೇರು ಮಾರುಕಟ್ಟೆ)
  • UDUPI
  • ಅಡಿಕೆ ಧಾರಣೆ ಮತ್ತು ಅಡಿಕೆ ಮಾಹಿತಿ
  • ಕನ್ನಡ ರಾಜ್ಯೋತ್ಸವ
  • ಕ್ರಿಕೆಟ್
  • ಕ್ರೀಡೆ
  • ಕ್ರೈಂ ನ್ಯೂಸ್
  • ದಾವಣಗೆರೆ
  • ನವದೆಹಲಿ
  • ಬೆಂಗಳೂರು
  • ವಾಣಿಜ್ಯ
  • ವಿದೇಶ
  • ಹಾರ್ಟ್ ಬೀಟ್ಸ್- ಬದುಕು ಬೆಳಕು
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ

© 2023 Newbie Techy -Suddi Kshana by Newbie Techy.

No Result
View All Result

© 2023 Newbie Techy -Suddi Kshana by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In