ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

“ಮಹಿಳಾ ಸಬಲೀಕರಣಕ್ಕಾಗಿ ಯೋಗ” ಧ್ಯೇಯವಾಕ್ಯದೊಂದಿಗೆ ಯೋಗ ದಿನ: ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಬೇಕಾ…?

On: June 10, 2024 10:10 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:11-06-2024

ದಾವಣಗೆರೆ: 10 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ನಗರದ ಜಿಲ್ಲಾ ಕೇಂದ್ರದಲ್ಲಿ ಆಯೋಜಿಸಲಾಗಿದ್ದು, ಜಿಲ್ಲೆಯ ಎಲ್ಲ ಯೋಗಾಸಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಆಯುಷ್ ಅಧಿಕಾರಿ ಯೋಗೇಂದ್ರಕುಮಾರ್ ತಿಳಿಸಿದರು.

ನಗರದ ಸರ್ಕಾರಿ ಪ್ರಕೃತಿ ಚಿಕಿತ್ಸೆ ಆಸ್ಪತ್ರೆಯಲ್ಲಿ ನಡೆದ 10ನೇ ಅಂತಾರಾಷ್ಟ್ರೀಯ ಯೋಗ ದಿನ ಆಯೋಜನೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲಾಡಳಿತ, ಜಿಲ್ಲಾ ಆಯುಷ್ ಇಲಾಖೆ ಹಾಗೂ ವಿವಿಧ ಯೋಗ ಸಂಸ್ಥೆಗಳ ಸಹಯೋಗದಲ್ಲಿ ಜೂನ್ 21 ರಂದು ಅಂತರಾಷ್ಟ್ರೀಯ ಯೋಗದಿನವನ್ನು ಆಯೋಜಿಸಲಾಗುವುದು ಎಂದರು.

ಈ ಬಾರಿಯ ಘೋಷಣೆಯನ್ವಯ “ಮಹಿಳಾ ಸಬಲೀಕರಣಕ್ಕಾಗಿ ಯೋಗ” ಧ್ಯೇಯವಾಕ್ಯದೊಂದಿಗೆ ಯೋಗ ದಿನ ಆಚರಿಸಲಾಗುತ್ತಿದೆ. ಜಿಲ್ಲೆಯ ಸ್ವಯಂ ಸೇವಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳು, ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 4 ರಿಂದ 5 ಸಾವಿರ ಜನರು ಈ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ತಿಳಿಸಿದರು.

ಜಿಲ್ಲೆಯ ಎಲ್ಲ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿ, ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೆ ಸಹಕರಿಸಬೇಕು ಎಂದರು. ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜೂನ್ 10 ರಿಂದ ಜೂನ್ 20 ರವರೆಗೆ ಯೋಗೋತ್ಸವ ಕಾರ್ಯಕ್ರಮ ಆಚರಿಸುತ್ತಿದ್ದು ವಿವಿಧ ಸಂಘಟನೆಯ ಸಹಯೋಗದಲ್ಲಿ ಯೋಗ ರಸಪ್ರಶ್ನೆ ಸ್ಪರ್ಧೆ, ಕ್ರೀಡಾಸ್ಪರ್ಧೆ,ಸಮೂಹ ನೃತ್ಯ ಸ್ಪರ್ಧೆ, ಆಶುಭಾಷಣ ಸ್ಪರ್ಧೆ, ಬೋಧನಾ ಕೌಶಲ್ಯ ಸ್ಪರ್ಧೆ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿದ್ದು, ಸಾರ್ವಜನಿಕರು ಅದರ ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು.

ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲಾ ಸ್ಪರ್ಧಿಗಳಿಗೆ ಡಿಜಿಟಲ್ ಪ್ರಮಾಣ ಪತ್ರ ಮತ್ತು ಬಹುಮಾನವನ್ನು ಜೂನ್ 21, ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ನೀಡಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಯೋಗ ಒಕ್ಕೂಟದ ಅಧ್ಯಕ್ಷರಾದ ವಾಸುದೇವ ರಾಯ್ಕರ್ ಮಾತನಾಡಿ, ಯೋಗವು ಕೇವಲ ದೈಹಿಕ ವ್ಯಾಯಾಮವಲ್ಲ ಯೋಗವು ಮನಸ್ಸು, ದೇಹ, ಆತ್ಮವನ್ನು ಒಳಗೊಳ್ಳುವ ಅಭ್ಯಾಸವಾಗಿದೆ. ಪ್ರತಿ ವರ್ಷದಂತೆ ಈ ವರ್ಷವು ನಮ್ಮ ಒಕ್ಕೂಟದ ವತಿಯಿಂದ ಎಲ್ಲಾ ರೀತಿಯ ಸಹಕಾರವನ್ನು ನೀಡಲಾಗುವುದು ಹಾಗೂ ವಾಕಾಥಾನ್ ಆಯೋಜಿಸಲಾಗಿದ್ದು ಎಲ್ಲರೂ ಪಾಲ್ಗೋಳ್ಳುವಂತೆ ಮನವಿ ಮಾಡಿದರು.

ಸಭೆಯಲ್ಲಿ ಸರ್ಕಾರಿ ಪ್ರಕೃತಿ ಚಿಕಿತ್ಸೆಯ ಆಡಳಿತ ವೈದ್ಯಾಧಿಕಾರಿ ರತ್ನ.ಡಿ.ಎಂ, ವೈದ್ಯಾಧಿಕಾರಿ ಡಾ.ಸಿದ್ದೇಶ್ ಈ ಬಿಸನಳ್ಳಿ ಮತ್ತು ಸುರೇಶ್, ಈಶ್ವರಿ ವಿಶ್ವವಿದ್ಯಾನಿಲಯದ ನೀಲಕ್ಕ, ಕೆಜಿಎಎಂಒಎನ ಅಧ್ಯಕ್ಷರಾಧ ಡಾ.ಮಲ್ಲಿಕಾರ್ಜುನ ಬೂದಿಹಾಳ, ಇತರರು ಹಾಜರಿದ್ದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment