SUDDIKSHANA KANNADA NEWS/ DAVANAGERE/ DATE:17-12-2024
ಬೆಳಗಾವಿ: ವಕ್ಫ್ ವಿಚಾರ ಬಿಜೆಪಿಗೆ ತಿರುಗುಬಾಣವಾಗಿದೆ. ಅತಿ ಹೆಚ್ಚು ನೋಟಿಸ್ ಕೊಟ್ಟಿರುವುದು ಬಿಜೆಪಿ ಅಧಿಕಾರದಲ್ಲಿ ಇದ್ದಾಗಲೇ. ವಕ್ಫ್ ಆಸ್ತಿ ಒತ್ತುವರಿ ತೆರವುಗೊಳಿಸುವುದಾಗಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲೇ ಹೇಳಿದೆ. ಬಿ. ಎಸ್. ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದಾಗಲೇ ವಕ್ಫ್ ಆಸ್ತಿ ತೆರವುಗೊಳಿಸಲು ನೋಟಿಸ್ ಗಳನ್ನು ಕೊಡಲಾಗಿದೆ. ಹೀಗಾಗಿ ಬಿಜೆಪಿಗೆ ಈ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ
ಹೇಳಿದರು.
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಮಾತನಾಡಿದ ಅವರು, once a waqf property… Always a waqf property ಅಂತ ಸುಪ್ರೀಂಕೋರ್ಟ್ ಜಡ್ಜ್ ಮೆಂಟ್ ಬಂದಿವೆ. ಸಚಿವ ಜಮೀರ್ ಅವರು ಸಮರ್ಥವಾಗಿ ಉತ್ತರ ನೀಡುತ್ತಾರೆ. ಪರಿಷತ್ ನಲ್ಲಿ ಈಗಾಗಲೇ ಕೊಟ್ಟಿದ್ದಾರೆ ಎಂದು ಹೇಳಿದರು.
ನಾವು 2013 ರಿಂದ 2018 ರವರೆಗೆ ಅಧಿಕಾರದಲ್ಲಿದ್ದಾಗ ಅವರು ಕೇಳಿದ್ದನ್ನೆಲ್ಲಾ CBI ತನಿಖೆಗೆ ಒಪ್ಪಿಸಿದೆವು. ಆದರೂ CBI ತನಿಖೆಯಲ್ಲಿ ಬಿಜೆಪಿಯ ಒಂದೂ ಆರೋಪ ಸಾಬೀತಾಗಲಿಲ್ಲ. *ಅವರು ಅಧಿಕಾರದಲ್ಲಿದ್ದಾಗ ನಾವು ಕೇಳಿದ ಒಂದನ್ನೂ CBI
ತನಿಖೆಗೆ ಕೊಡಲಿಲ್ಲ. ಈಗ ಮತ್ತೆ ಅದೇ CBI ರಾಗ ಎಖೆಯುತ್ತಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು CBI ಅನ್ನು “ಚೋರ್ ಬಚಾವೋ ಸಂಸ್ಥೆ” ಎಂದಿದ್ದರು. ಈಗ ಇವರಿಗೆ CBI ಮೇಲೆ ಪ್ರೀತಿ ಬಂದಿದೆ ಎಂದರು.
ಜನ ಸಂಪರ್ಕ ಸಭೆ ಹೆಚ್ಚೆಚ್ಚು ಮಾಡಿ:
ನಮ್ಮ ಸಚಿವರು ಮತ್ತು ಶಾಸಕರು ಅವರವರ ಉಸ್ತುವಾರಿಯ ಜಿಲ್ಲೆಗಳಲ್ಲಿ, ಕ್ಷೇತ್ರಗಳಲ್ಲಿ ಹೆಚ್ಚೆಚ್ಚು ಜನಸಂಪರ್ಕ ಸಭೆ ನಡೆಸಿ ಅವರ ಸಮಸ್ಯೆಗಳನ್ನು ಬಗೆಹರಿಸಿ. ಹಣಕ್ಕೆ ಸಮಸ್ಯೆ ಇಲ್ಲ. ಹಣ ಇದೆ. ಜನರ ಕೆಲಸ ಮಾಡಿ ಎಂದರು.
ಬಿಜೆಪಿ ಅಧಿಕಾರದಲ್ಲಿದ್ದಾಗ ಒಂದೇ ಒಂದು ಮನೆ ಕೊಡಲಿಲ್ಲ. ಬಿಜೆಪಿ ಯಾವ ಮುಖ ಇಟ್ಟುಕೊಂಡು ನಮ್ಮನ್ನು ಪ್ರಶ್ನಿಸುತ್ತಿದೆ ಎಂದು ಶಾಸಕರನ್ನು ಪ್ರಶ್ನಿಸಿದರು.
ಮಳೆ ಹಾನಿ ಸರಿಪಡಿಸಲು ಅಪೆಂಡಿಕ್ಸ್ ಇ ನಲ್ಲಿ 4000 ಕೋಟಿ, ಗ್ರಾಮೀಣ ರಸ್ತೆ ಹಾಳಾಗಿರುವುದಕ್ಕೆ 2000 ಕೋಟಿ ಹಾಗೆಯೇ ಸಿಟಿ, ಟೌನ್ ರಸ್ತೆಗಳಿಗೂ ಹೆಚ್ಚುವರಿ ಹಣ ಕೊಡುತ್ತಿದ್ದೇವೆ. ಮುಂದಿನ ವರ್ಷದಿಂದ ರಾಜ್ಯದ ಆರ್ಥಿಕ ಸಾಮರ್ಥ್ಯ ಇನ್ನಷ್ಟು
ಹೆಚ್ಚುತ್ತದೆ. ಆಗ ಇನ್ನಷ್ಟು ಅಭಿವೃದ್ಧಿಯ ವೇಗ ಹೆಚ್ಚುತ್ತದೆ ಎಂದು ಹೇಳಿದರು.
ಎಲ್ಲಾ ಕ್ಷೇತ್ರಗಳಿಗೂ ಎಲ್ಲಾ ಪಕ್ಷದ ಶಾಸಕರ ಕ್ಷೇತ್ರಗಳಿಗೂ 2000 ಕೋಟಿ ವಿತರಣೆ ಮಾಡುತ್ತೇವೆ. ಆದ್ದರಿಂದ ನಮ್ಮ ಶಾಸಕರು ಎದೆ ಎತ್ತಿ ಮಾತನಾಡಿ. ಅವರ ಬಾಯಿ ಮುಚ್ಚಿಸಿ ಎಂದರು.