SUDDIKSHANA KANNADA NEWS/ DAVANAGERE/ DATE-15-05-2025
ದಾವಣಗೆರೆ: ಕರ್ನಾಟಕ ರಾಜ್ಯ ಉಗ್ರಾಣ ನಿಗಮವು ಸರ್ಕಾರದ ಅಂಗ ಸಂಸ್ಥೆಯಾಗಿದ್ದು, ರಾಜ್ಯಾದ್ಯಂತ 161 ಉಗ್ರಾಣ ಕೇಂದ್ರಗಳ ಮೂಲಕ ರೈತರಿಗೆ, ರೈತ ಉತ್ಪಾದಕ ಸಂಸ್ಥೆ, ಸರ್ಕಾರಿ ಸಂಸ್ಥೆಗಳಿಗೆ ಹಾಗೂ ವ್ಯಾಪಾರಸ್ಥರಿಗೆ, ಇತರೆ ಸಂಘ ಸಂಸ್ಥೆಗಳಿಗೆ ರಿಯಾಯಿತಿ ದರದಲ್ಲಿ ಗೋದಾಮುಗಳನ್ನು ಬಾಡಿಗೆಗೆ ನೀಡಲು ಇಚ್ಚಿಸಲಾಗಿದೆ.
ಕೃಷಿ ಉತ್ಪನ್ನಗಳನ್ನು ವೈಜ್ಞಾನಿಕ ಸರಕು ಸಂಗ್ರಹಣಾ ಸೌಲಭ್ಯ ಒದಗಿಸುತ್ತಿದೆ. ಆಸಕ್ತರು ಈ ಅವಕಾಶವನ್ನು ಸದುಪಯೋಗಪಡೆದುಕೊಳ್ಳಬಹುದು ಎಂದು ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಪ್ರಾದೇಶಿಕ ವ್ಯವಸ್ಥಾಪಕರು ತಿಳಿಸಿದ್ದಾರೆ.
ಅದರಂತೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಸಾಗರಪೇಟೆಯಲ್ಲಿ 3 ಗೋದಾಮುಗಳನ್ನು ಸ್ಥಾಪಿಸಿದ್ದು, ಒಟ್ಟಾರೆ 7 ಸಾವಿರ ಮೆಟ್ರಿಕ್ ಟನ್ ಸಾಮರ್ಥ್ಯ ಮತ್ತು ಹೊಸಹಳ್ಳಿಯಲ್ಲಿ 2 ಗೋದಾಮುಗಳನ್ನು ಸ್ಥಾಪಿಸಿದ್ದು, ಒಟ್ಟಾರೆ 10108 ಮೆಟ್ರಿಕ್ ಟನ್ ಸಾಮರ್ಥ್ಯದ ಗೋದಾಮುಗಳನ್ನು ನಿರ್ಮಿಸಲಾಗಿದೆ.
ಆಸಕ್ತಿಯುಳ್ಳವರು ಕರ್ನಾಟಕ ರಾಜ್ಯ ಉಗ್ರಾಣ ನಿಗಮ ಪ್ರಾದೇಶಿಕ ವ್ಯವಸ್ಥಾಪಕರು ದೂರವಾಣಿ ಸಂಖ್ಯೆ 7760966953 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.