ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಬೀದಿನಾಯಿಗಳ ದಾಳಿ ನಿಯಂತ್ರಿಸದಿದ್ದರೆ ಬೀದಿಗಿಳಿದು ಹೋರಾಟ: ಮೊಹಮ್ಮದ್ ಜಿಕ್ರಿಯಾ ಎಚ್ಚರಿಕೆ

On: August 20, 2025 9:31 AM
Follow Us:
dog
---Advertisement---

SUDDIKSHANA KANNADA NEWS/ DAVANAGERE/DATE:20_08_2025

ದಾವಣಗೆರೆ: ದಾವಣಗೆರೆ ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಕೂಡಲೇ ನಿಗ್ರಹಕ್ಕೆ ಕ್ರಮ ಕೈಗೊಳ್ಳದಿದ್ದರೆ ಬೀದಿಗಿಳಿದು ಸಂಘಟನೆಗಳ ಜೊತೆಗೂಡಿ ಹೋರಾಟ ಮಾಡಬೇಕಾಗುತ್ತದೆ ಎಂದು ಜವಾಹರ್ ಬಾಲ್ ಮಂಚ್ ಜಿಲ್ಲಾ ಘಟಕದ ಅಧ್ಯಕ್ಷ ಮೊಹಮ್ಮದ್ ಜಿಕ್ರಿಯಾ ಎಚ್ಚರಿಕೆ ನೀಡಿದ್ದಾರೆ.

READ ALSO THIS STORY: 2029ರಲ್ಲಿ ರಾಹುಲ್ ಗಾಂಧಿಯವರನ್ನು ದೇಶದ ಪ್ರಧಾನಿಯನ್ನಾಗಿ ಮಾಡ್ತೇವೆ! ಹೇಳಿದ್ದು ಯಾರು?

ದಾವಣಗೆರೆಯಲ್ಲಿ ನಾಲ್ಕು ವರ್ಷದ ಮಗು ನಾಯಿ ಕಚ್ಚಿದ್ದರಿಂದ ರೇಬಿಸ್ ರೋಗಕ್ಕೆ ತುತ್ತಾಗಿತ್ತು. ಪೋಷಕರು ಬೆಂಗಳೂರು ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಿದರೂ ಗುಣಮುಖವಾಗಲಿಲ್ಲ. ಕೊನೆಗೆ ರೇಬೀಸ್
ರೋಗದಿಂದ ಮೃತಪಟ್ಟಿದ್ದು, ಪೋಷಕರ ಆಕ್ರಂದನ ಹೇಳತೀರದ್ದಾಗಿದೆ. ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ ಹೆಚ್ಚಾಗುತ್ತಿದ್ದು, ಕೂಡಲೇ ಬೇರೆಡೆ ಸ್ಥಳಾಂತರಿಸಬೇಕು. ಇಲ್ಲದಿದ್ದರೆ ಅವುಗಳನ್ನು ಬೇರೆ ಕಡೆ ವ್ಯವಸ್ಥೆ ಮಾಡಿ
ಬಿಡಬೇಕು ಎಂದು ಒತ್ತಾಯಿಸಿದ್ದಾರೆ.

ಮಕ್ಕಳು ಮಾತ್ರವಲ್ಲ, ಬೈಕ್ ಸವಾರರು, ಪಾದಚಾರಿಗಳ ಮೇಲೂ ನಾಯಿಗಳು ರೌಡಿಗಳಂತೆ ದಾಳಿ ಮಾಡುತ್ತಿವೆ. ಮಕ್ಕಳಿಗೆ ಕಚ್ಚುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ನಾಯಿಗಳ ಉಪಟಳದಿಂದ ಮನೆಯಿಂದ ಮಕ್ಕಳು ಹೊರ ಬರದಂತ
ಪರಿಸ್ಥಿತಿ ನಿರ್ಮಾಣವಾಗಿದೆ. ಶಾಲೆಗೆ ಹೋಗಲು ಮಕ್ಕಳು ಹಿಂದೇಟು ಹಾಕುವಂಥ ಸ್ಥಿತಿ ನಿರ್ಮಾಣ ಆಗಿದೆ. ಕೂಡಲೇ ನಾಯಿಗಳ ಹಾವಳಿ ತಪ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

ಹಳೇದಾವಣಗೆರೆಯಲ್ಲಿ ಪರಿಸ್ಥಿತಿ ಹೇಳತೀರದ್ದಾಗಿದೆ. ಈ ಹಿಂದೆಯೂ ಮಕ್ಕಳು, ಜನರ ಮೇಲೆ ನಾಯಿಗಳು ದಾಳಿ ಮಾಡಿದ್ದವು. ನಾಯಿಗಳ ಹಾವಳಿ ಕಡಿವಾಣಕ್ಕೆ ಪದೇ ಪದೇ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ನಾಯಿಗಳ ಕಾಟ ತಪ್ಪಿಸದಿದ್ದರೆ ಜನರೇ ರೊಚ್ಚಿಗೇಳುವ ಪರಿಸ್ಥಿತಿ ಬರುತ್ತದೆ. ಮಹಾನಗರ ಪಾಲಿಕೆಯ ಅಧಿಕಾರಿಗಳು ಕೂಡಲೇ ಈ ಬಗ್ಗೆ ಬಿಗಿ ನಿಲುವು ತೆಗೆದುಕೊಳ್ಳಬೇಕು. ಜನಸಾಮಾನ್ಯರು, ಮಕ್ಕಳ ಹಿತದೃಷ್ಠಿಯಿಂದ ಕಠಿಣ ಕ್ರಮ ಜರುಗಿಸಬೇಕು ಎಂದು ಮೊಹಮ್ಮದ್ ಜಿಕ್ರಿಯಾ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment