SUDDIKSHANA KANNADA NEWS/ DAVANAGERE/ DATE:03-01-2024
ದಾವಣಗೆರೆ: 1992ರಗಲಭೆಯ ಹಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶ್ರೀಕಾಂತ್ ಬಂಧನ ವಿರೋಧಿಸಿ ಜಿಲ್ಲಾ ಬಿಜೆಪಿ ಪ್ರತಿಭಟನೆ ನಡೆಸಿತು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ, ಸಿದ್ದೇಶ್ವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ವಿಹೆಚ್ ಪಿ ಮುಖಂಡ ಶ್ರೀಕಾಂತ್ ಅವರ ಬಂಧನ ಖಂಡನೀಯ. ಇಷ್ಟು ವರ್ಷ ಸುಮ್ಮನಿದ್ದು 31 ವರ್ಷದ ಬಳಿಕ ಹಳೆ ಪ್ರಕರಣವನ್ನು ಕೆದಕಿ ತೆಗೆದು ರಾಮ ಜನ್ಮ ಭೂಮಿ ಹೋರಾಟಗಾರರನ್ನು ರಾಮನ ಮುಖ್ಯಪ್ರಾಣ ಪ್ರತಿಷ್ಠಾಪನೆ ಇದ್ದಾಗ ರಾಜ್ಯದ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಅನುಸರಿಸುತ್ತಿದೆ. ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ಇಲಾಖೆಯನ್ನು ದುರುಪಯೋಗಪಡಿಸಿಕೊಂಡು ದ್ವೇಷ ಸಾಧಿಸುತ್ತಿರುವುದನ್ನು ಖಂಡಿಸುತ್ತೇವೆ ಎಂದು ಪ್ರತಿಭಟನಾಕಾರರು ಹೇಳಿದರು.
ಹಿಂದೂಪರ ಹೋರಾಟಗಾರರನ್ನು ಹೆದರಿಸುವ ತಂತ್ರವನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಇದು ಅಲ್ಪಸಂಖ್ಯಾತರ ತುಷ್ಟಿಕರಣದ ಪರಮಾವಧಿಯಾಗಿದೆ. ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಆರಂಭಿಸಿದೆ. ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಹಿಂದೂ ಸಂಘಟನೆಗಳ ಕಾರ್ಯಕರ್ತರ ಕಗ್ಗೊಲೆಯಾಗಿತ್ತು. ಹಳೆಯ ಪ್ರಕರಣಗಳನ್ನು ಹೊರ ತೆಗೆದು ಬಂಧಿಸಲು ಪೊಲೀಸ್ ಇಲಾಖೆಯನ್ನು ಬಳಸಿಕೊಂಡಿದ್ದು ದ್ವೇಷದ ರಾಜಕಾರಣವನ್ನು ಬಿಜೆಪಿ ಸಹಿಸುವುದಿಲ್ಲ ಎಂದು ಹೇಳಿದರು.
ಕೂಡಲೇ ಬಂಧಿತರನ್ನು ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ. ಬಂಧಿತರ ಬಿಡುಗಡೆಯಾಗುವವರೆಗೂ ಹೋರಾಟ ನಿಲ್ಲದು ಎಂದು ಪ್ರತಿಭಟನಕಾರರು ಎಚ್ಚರಿಕೆ ನೀಡಿದರು.
ಹುಬ್ಬಳ್ಳಿಯಲ್ಲಿ ಬಂಧನಕ್ಕೊಳಗಾದ ಶ್ರೀಕಾಂತ್ ಪೂಜಾರಿ ಕರಸೇವಕ. ರಾಜ್ಯಾದ್ಯಂತ ರಾಮಭಕ್ತರ ಮೇಲೆ ಆಗುತ್ತಿರುವ ದೌರ್ಜನ್ಯವನ್ನು ತಕ್ಷಣವೇ ನಿಲ್ಲಿಸಬೇಕೆಂದು ಒತ್ತಾಯಿಸಿ “ಬೃಹತ್ ಪ್ರತಿಭಟನೆಯಲ್ಲಿ” ನಡೆಸಲಾಯಿತು. ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ, ಉಪಾಧ್ಯಕ್ಷ ಶ್ರೀನಿವಾಸ್ ದಾಸಕರಿಯಲ್ಲ, ಮಾಜಿ ಶಾಸಕ ಎಸ್. ವಿ. ರಾಮಚಂದ್ರಪ್ಪ, ಮಾಯಕೊಂಡ ಬಿಜೆಪಿ ಯುವ ಮುಖಂಡ ಜಿ. ಎಸ್. ಶ್ಯಾಮ್, ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಪ್ರಸನ್ನಕುಮಾರ್, ಜಿಲ್ಲಾ ಮಾಧ್ಯಮ ಪ್ರಮುಖ್ ವಿಶ್ವಾಸ್, ಟಿಂಕರ್ ಮಂಜಣ್ಣ ಸೇರಿದಂತೆ ಇತರರು ಪಾಲ್ಗೊಂಡಿದ್ದರು.