SUDDIKSHANA KANNADA NEWS/ DAVANAGERE/ DATE:31-03-2025
ದಾವಣಗೆರೆ: ನ್ಯಾಮತಿ ಎಸ್ ಬಿ ಐ ಬ್ಯಾಂಕ್ ದರೋಡೆ ಪ್ರಕರಣದ ಬಳಿಕ ಆರೋಪಿಗಳು ಇಷ್ಟೊಂದು ಪ್ರಮಾಣದ ಚಿನ್ನಾಭರಣ ಅಡಗಿಸಿಟ್ಟಿದ್ದನ್ನು ಪತ್ತೆ ಹಚ್ಚಿರುವ ಪೊಲೀಸರ ಕಾರ್ಯಕ್ಷಮತೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ತಮಿಳುನಾಡಿನ ಮೂಲತಃ ಮಧುರೈನ ಸುರಹೊನ್ನೆ ವಾಸಿಯಾದ ತಿಂಡಿ ವ್ಯಾಪಾರಿ ವಿಜಯಕುಮಾರ್ (30), ವಿಜಯ್ ಸಹೋದರ ಅಜಯ ಕುಮಾರ್ (28), ನ್ಯಾಮತಿ ಪಟ್ಟಣದ ಬೆಳಗುತ್ತಿ ಕ್ರಾಸ್ ನ ಶಾಂತಿನಗರ ಶಾಲೆಯ ಎದುರಿನ ವಾಸಿ ಅಭಿಷೇಕ (23), ಸುರಹೊನ್ನೆಯ ಶಾಂತಿನಗರ ವಾಸಿ ತೆಂಗಿನ ವ್ಯಾಪಾರಿ ಚಂದ್ರು (23), ಚಾಲಕ ಮಂಜುನಾಥ್ 32) ಹಾಗೂ ಸಿಹಿ ತಿಂಡಿ ವ್ಯಾಪಿರ ಪರಮಾನಂದ (30) ಬಂಧಿತ ಆರೋಪಿಗಳು ಚಿನ್ನ ಬಚ್ಚಿಡಲು ಮಾಡಿದ್ದ ಪ್ಲ್ಯಾನ್ ಪೊಲೀಸರಿಗೆ ಅಚ್ಚರಿ ತಂದಿದೆ.
ಕದ್ದು ತಂದಂತಹ ಚಿನ್ನವನ್ನು ವಿಜಯಕುಮಾರನು ತನ್ನ ಮನೆಯಲ್ಲಿದ್ದಂತಹ ಸಿಲ್ವರ್ ಕಲರ್ ಡಸ್ಟರ್ ಕಾರಿನ ಡಿಕ್ಕಿಯಲ್ಲಿ ಬಚ್ಚಿಟ್ಟಿದ್ದು ಅದನ್ನು ಯಾವ ರೀತಿಯಲ್ಲಿ ವಿಲೇವಾರಿ ಮಾಡಬೇಕೆಂದು ಪ್ರತ್ತೇಕವಾದ ಪ್ಲಾನ್ ಮಾಡಿದ್ದ. ಕೃತ್ಯಕ್ಕೆ ಬಳಸಿದ ವಸ್ತುಗಳಾದ ಮಂಕಿ ಕ್ಯಾಪ್, ಹ್ಯಾಂಡ್ ಗ್ಲೌಸ್‌ಗಳನ್ನು ನಾಶಪಡಿಸಿದ್ದು, ಇನ್ನುಳಿದ ಹೈಡ್ರಾಲಿಕ್ ಕಟ್ಟರ್, ಗ್ಯಾಸ್ ಸಿಲೆಂಡರ್ ಇತರ ವಸ್ತುಗಳನ್ನು ಸವಳಂಗ ಕೆರೆಗೆ ಎಸೆದಿದ್ದ.
ಎಸ್.ಬಿ.ಐ. ಬ್ಯಾಂಕ್ ನಿಂದ ತಂದಿದ್ದಂತಹ ಹಾರ್ಡ್ ಡಿಸ್ಕ್, ಡಿವಿಆರ್‌ನ್ನು ಮೊದಲು ಕಲ್ಲಿನಿಂದ ಜಜ್ಜಿ ಹಾಳು ಮಾಡಿ ನಂತರ ಕೆರೆಗೆ ಎಸೆದಿದ್ದ. ಕಳೆದ ವರ್ಷದ ನವೆಂಬರ್ ಮೊದಲನೆ ವಾರದಲ್ಲಿ ವಿಜಯ ತನ್ನ ಸ್ವಂತ ಊರಾದ ತಮಿಳುನಾಡಿನ ಮಧುರೈನ ಮನೆಗೆ ವಿಜಯ ಒಬ್ಬನೇ ತನ್ನ ಡಸ್ಟರ್ ಕಾರಿನಲ್ಲಿ ತಲುಪಿ, ಮನೆಯು ಊರಿನ ಹೊರಗಡೆ ನಿರ್ಜನ ಪ್ರದೇಶದಲ್ಲಿದ್ದು ಸುತ್ತಲೂ ದಟ್ಟ ಅರಣ್ಯವಿದ್ದದ್ದನ್ನು ಗಮನಿಸಿದ್ದಾನೆ. ಸುಮಾರು 25ರಿಂದ 30 ಅಡಿ ಆಳವಿರುವ ಬಾವಿಯಲ್ಲಿ ಒಂದು ಸಣ್ಣ ಲಾಕರ್‌ಗೆ ಚಿನ್ನವನ್ನು ತುಂಬಿ ಅದಕ್ಕೆ ಹಗ್ಗ ಕಟ್ಟಿ ಆ ಬಾವಿಯಲ್ಲಿ ಯಾರಿಗೂ ಗೊತ್ತಾಗದ ರೀತಿಯಲ್ಲಿ ಬಚ್ಚಿಟ್ಟಿದ್ದ. ಈ ವಿಷಯ ಯಾರಿಗೂ ಹೇಳಿರಲಿಲ್ಲ.
ಆ ಚಿನ್ನದಲ್ಲಿ ಸ್ವಲ್ಪ ಭಾಗ ತೆಗೆದುಕೊಂಡು ಬ್ಯಾಂಕ್‌ಗಳಲ್ಲಿ ಮತ್ತು ಚಿನ್ನದ ಅಂಗಡಿಗಳಲ್ಲಿ ತನ್ನ ಹಾಗೂ ಸಂಬಂಧಿಕರ ಹೆಸರಿನಲ್ಲಿ ಅಡವಿಟ್ಟು ಹಣ ಪಡೆದಿದ್ದ. ಆ ಹಣದಿಂದ ಸ್ವಲ್ಪ ಹಣವನ್ನು ಅಭಿ, ಚಂದ್ರು, ಮಂಜುಗೆ ತಲಾ 1 ಲಕ್ಷ ತಂದುಕೊಟ್ಟು ಊರಿನಲ್ಲಿ ಒಂದು ದೊಡ್ಡ ಮನೆ ಕಟ್ಟಿಸಿದ್ದ. ಕೆಲವು ನಿವೇಶನಗಳನ್ನು ಖರೀದಿ ಮಾಡಿದ್ದು, ತನ್ನ ಸಂಬಂಧಿಗಳಿಗೆ ಸ್ವಲ್ಪ ಚಿನ್ನವನ್ನು ಕೊಟ್ಟಿರುವುದಾಗಿ ತಿಳಿಸಿದ್ದ.
ಉಳಿದ ಚಿನ್ನವನ್ನು 2ರಿಂದ 3 ವರ್ಷಗಳ ವರೆಗೆ ತೆಗೆಯಬಾರದೆಂದು, ಪೊಲೀಸರು ಆ ಪ್ರಕರಣದ ತನಿಖೆ ಅಥವಾ ವಿಚಾರಣೆಯನ್ನು ನಿಲ್ಲಿಸಿದಾಗ ಈ ಚಿನ್ನವನ್ನು ಹೊರತೆಗೆಯೋಣ ಎಂದು ಪ್ಲ್ಯಾನ್ ರೂಪಿಸಿದ್ದ ಎಂದು ಐಜಿಪಿ ರವಿಕಾಂತೇಗೌಡ ಮಾಹಿತಿ ನೀಡಿದ್ದಾರೆ.
ತಂಡದಲ್ಲಿದ್ದ ಅಧಿಕಾರಿ ಮತ್ತು ಸಿಬ್ಬಂಧಿಗಳು ವಿವರ:
ಎಸ್ಪಿ ಉಮಾ ಪ್ರಶಾಂತ್. ಎಎಸ್ಪಿಗಳಾದ ವಿಜಯಕುಮಾರ್ ಎಂ ಸಂತೋಷ, ಜಿ. ಮಂಜುನಾಥ ಅವರ ಮಾರ್ಗದರ್ಶನದಲ್ಲಿ ಚನ್ನಗಿರಿ ಉಪವಿಭಾಗದ ಡಿವೈಎಸ್ಪಿ ಮತ್ತು ತನಿಖಾಧಿಕಾರಿ ಸ್ಯಾಮ್ ವರ್ಗೀಸ್, ಡಿವೈಎಸ್ಪಿ ಬಿ. ಎಸ್. ಬಸವರಾಜ್, ಒಳಗೊಂಡಂತೆ ತಂಡದಲ್ಲಿ ನ್ಯಾಮತಿ ಪೊಲೀಸ್ ಠಾಣೆಯ ಪೊಲೀಸ್ ಇನ್ ಸ್ಪೆಕ್ಟರ್ ಎನ್. ಎಸ್. ರವಿ, ಹೊನ್ನಾಳಿ ಪಿಐ ಸುನೀಲ್ ಹುಲ್ಮನಿ, ಸಂತೇಬೆನ್ನೂರು ಸಿಪಿಐ ಲಿಂಗನಗೌಡ ನೆಗಳೂರು, ಹರಿಹರ ನಗರ ಠಾಣೆಯ ಪಿಐ ದೇವಾನಂದ್, ಸಿಪಿಐ ಸುರೇಶ್ ಸಗರಿ, ಹರಿಹರ ಗ್ರಾಮಾಂತರ ಠಾಣೆಯ ಪಿಎಸ್ಐ ಮಂಜುನಾಥ ಕುಪ್ಪೆಲೂರು, ಹೊನ್ನಾಳಿ ಪಿಎಸ್ ಐ ಸಂಜೀವ್ ಕುಮಾರ್, ಕೆಟಿಜೆ ನಗರ ಠಾಣೆಯ ಸಾಗರ್ ಅತ್ತಾರ್ ವಾಲ್, ಗಾಂಧಿನಗರ ಠಾಣೆಯ ಪಿಎಸ್ ಐ ರವಿ ನಾಯ್ಕ ಲಂಬಾಣಿ, ದಾವಣಗೆರೆ ಗ್ರಾಮಾಂತರ ಠಾಣೆಯ ಪಿಎಸ್ ಐ ಹರೋನ್ ಅಕ್ತರ್, ಹರಿಹರ ಗ್ರಾಮಾಂತರ ಠಾಣೆಯ ಪಿಎಸ್ ಐ-2 ಮಹಾದೇವ ಭತ್ತೆ, ಹರಿಹರ ನಗರ ಠಾಣೆಯ ಪಿಎಸ್ ಐ ಶ್ರೀಪತಿ ಗಿನ್ನಿ, ಜಗಳೂರು ಪಿಎಸ್ಐ ಗಾಧಿಲಿಂಗಪ್ಪ, ಸಂತೇಬೆನ್ನೂರು ಪಿಎಸ್ಐ ಜಗದೀಶ್, ದಾವಣಗೆರೆ ಗ್ರಾಮಾಂತರದ ಪಿಎಸ್ ಐ ಅಬ್ದುಲ್ ಖಾದರ್ ಜಿಲಾನಿ, ಶ್ರೀ ಜೋವಿತ್ ರಾಜ್, ಪಿಎಸ್‌ಐ, ದಾವಣಗೆರ ಗ್ರಾ ಠಾಣೆ, ಜಯ್ಯಪ್ಪ ನಾಯ್ಕ್, ಪಿಎಸ್‌ಐ ಚನ್ನಗಿರಿ, ಪಿಎಸ್ ಐ ಸೈಫೂದ್ದೀನ್, ಮಜೀದ್ ಸಿಹೆಚ್‌ಸಿ, ಡಿಸಿಐಬಿ, ಶ್ರೀ ರಾಘವೇಂದ್ರ ಸಿಹೆಚ್‌ಸಿ, ಡಿಸಿಐಬಿ, ಆಂಜನೇಯ, ಬಾಲಾಜಿ, ರಮೇಶ್ ನಾಯ್ಕ್, ಶಿವರಾಜ್, ಮಲ್ಲಿಕಾರ್ಜುನ್, ಶಿವರಾಜ್ ಕೆಟಿಜೆ ನಗರ ಪೊಲೀಸ್ ಠಾಣೆ, ನ್ಯಾಮತಿಯ ಆನಂದ, ಮಾರುತಿ, ಸತೀಶ್, ಮಹೇಶ್ ನಾಯ್ಕ್, ವೀರಭದ್ರಪ್ಪ, ರುದ್ರೇಶ್, ಇಬ್ರಾಹಿಂ, ಅಣ್ಣಪ್ಪ, ಯೂಸುಫ್, ರವಿ, ಸಿದ್ದೇಶ್, ಯೋಗೀಶ್ ನಾಯ್ಕ್, ಗಿರೀಶ್ ಸೇರಿದಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.