Home ದಾವಣಗೆರೆ ಲ್ಯಾಂಡ್ ಲಾರ್ಡ್ ಚಿತ್ರ ವೀಕ್ಷಿಸಿ ಪ್ಲೀಸ್: ದುನಿಯಾ ವಿಜಯ್ ಮನವಿಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ದಾವಣಗೆರೆನವದೆಹಲಿಬೆಂಗಳೂರುಸಿನಿಮಾ

ಲ್ಯಾಂಡ್ ಲಾರ್ಡ್ ಚಿತ್ರ ವೀಕ್ಷಿಸಿ ಪ್ಲೀಸ್: ದುನಿಯಾ ವಿಜಯ್ ಮನವಿಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

Share
Share

ಬೆಂಗಳೂರು: “ಲ್ಯಾಂಡ್ ಲಾರ್ಡ್” ಚಿತ್ರತಂಡದವರು ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ತಮ್ಮ ಚಿತ್ರ ವೀಕ್ಷಣೆಗೆ ಆಗಮಿಸುವಂತೆ ಪ್ರೀತಿಯಿಂದ ಆಹ್ವಾನಿಸಿದರು.

ಈ ಚಿತ್ರದ ಮೂಲಕ ಸಮಾಜದಲ್ಲಿನ‌ ಜಾತಿ ಅಸಮಾನತೆ ಮತ್ತು ಸಾಂವಿಧಾನಿಕ ಮೌಲ್ಯಗಳ ಮೇಲೆ ಬೆಳಕು ಚೆಲ್ಲುವಂತಹ ಪ್ರಯತ್ನವನ್ನು ಚಿತ್ರತಂಡ ಮಾಡಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಕಳಕಳಿಯ ಕಥಾಹಂದರದ ಸಿನಿಮಾಗಳು ಮೂಡಿಬರುತ್ತಿರುವುದು ಅಪರೂಪ. ನಿಜಕ್ಕೂ ಇದೊಂದು ದಿಟ್ಟ ಪ್ರಯತ್ನ, ಇದಕ್ಕಾಗಿ ಇಡೀ ಚಿತ್ರತಂಡಕ್ಕೆ ಅಭಿನಂದನೆಗಳು ಎಂದು ಸಿದ್ದರಾಮಯ್ಯ ಹೇಳಿದರು.

ದುನಿಯಾ ವಿಜಯ್ ನಾಯಕ ನಟನಾಗಿ ಅಭಿನಯಿಸಿರುವ “ಲ್ಯಾಂಡ್ ಲಾರ್ಡ್” ಸಿನಿಮಾ ಶತದಿನೋತ್ಸವವನ್ನು ಪೂರೈಸಲಿ, ಇಂತಹ ಇನ್ನಷ್ಟು ಚಿತ್ರಗಳು ಮೂಡಿಬರಲು ಈ ಸಿನಿಮಾ ಸ್ಪೂರ್ತಿಯಾಗಲಿ ಎಂದು ಹಾರೈಸುತ್ತೇನೆ ಎಂದು ಹೇಳಿದರು.

ಎಲ್ಲರೂ ನೋಡಲೇಬೇಕಾದ ಚಿತ್ರವಿದು. ನಾನೂ ಖಂಡಿತವಾಗಿ ಚಿತ್ರಮಂದಿರಕ್ಕೆ ತೆರಳಿ ಈ ಸಿನಿಮಾ ವೀಕ್ಷಿಸುತ್ತೇನೆ, ನೀವೂ ನೋಡಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Share

Leave a comment

Leave a Reply

Your email address will not be published. Required fields are marked *