ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಸೂಳೆಕೆರೆ, ಕೊಂಡಜ್ಜಿ ಕೆರೆಯಲ್ಲಿ ಜಲಸಾಹಸ ಕ್ರೀಡೆಗಳ ತರಬೇತಿ ಅಕಾಡೆಮಿ ಸ್ಥಾಪನೆಗೆ ಸರ್ಕಾರಕ್ಕೆ ಪ್ರಸ್ತಾವನೆ

On: January 6, 2025 3:20 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:06-01-2025

ದಾವಣಗೆರೆ: ಶಾಂತಿ ಸಾಗರ ಹಾಗೂ ಕೊಂಡಜ್ಜಿ ಕೆರೆಯಲ್ಲಿ ಜಲ ಸಾಹಸ ಕ್ರೀಡೆಗಳ ತರಬೇತಿ ಅಕಾಡೆಮಿ ತೆರೆಯಲು ಸಾಕಷ್ಟು ಅವಕಾಶಗಳಿವೆ. ಜಿಲ್ಲೆಯ ಯುವಕರು ಇತರೆ ಕ್ರೀಡೆಗಳಂತೆ ಜಲಸಾಹಸ ಕ್ರೀಡೆಯಲ್ಲಿಯೂ ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಪಾಲ್ಗೊಳ್ಳಲು ಉತ್ತೇಜನ ನೀಡಲು ಇದರಿಂದ ಇಂಬು ದೊರೆಯಲಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ಹೇಳಿದರು.

ರಾಜ್ಯ ಮಟ್ಟದ ಯುವಜನೋತ್ಸವ ಅಂಗವಾಗಿ ಕುಂದುವಾಡ ಕೆರೆಯಲ್ಲಿ ಜನರಲ್ ತಿಮ್ಮಯ್ಯ ಜಲಸಾಹಸ ಅಕಾಡೆಮಿ ವತಿಯಿಂದ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ರಾಫ್ಟಿಂಗ್ ಹಾಗೂ ಕಾಯ್ಕಿಂಗ್ (ಹಾಯಿದೋಣಿ) ಕ್ರೀಡೆಗಳನ್ನು
ಸೋಮವಾರ ವೀಕ್ಷಿಸಿ ಅವರು ಮಾತನಾಡಿದರು.

ಈ ಹಿಂದೆ ಶಾಂತಿಸಾಗರದಲ್ಲಿ ಜಲ ಸಾಹಸ ಕ್ರೀಡೆಗಳ ತರಬೇತಿ ಅಕಾಡೆಮಿ ಕಾರ್ಯನಿರ್ವಹಿಸುತ್ತಿತ್ತು. ಕಾರಣಾಂತರಗಳಿಂದ ಇದನ್ನು ಸ್ಥಗಿತಗೊಳಿಸಲಾಗಿದೆ. ನೀರಾವರಿ ಯೋಜನೆಗಳ ಮೂಲಕ ಜಿಲ್ಲೆಯ ಶಾಂತಿಸಾಗರ ಹಾಗೂ ಕೊಂಡಜ್ಜಿ ಕೆರೆಗಳಲ್ಲಿ ಸರ್ವ ಋತುಗಳಲ್ಲಿಯೂ ನೀರಿನ ಲಭ್ಯತೆ ಇರುತ್ತದೆ. ಜಲ ಪರಿಸರಕ್ಕೆ ಹಾನಿಯಾಗದಂತೆ ಶಾಂತಿ ಸಾಗರ ಹಾಗೂ ಕೊಂಡಜ್ಜಿ ಕೆರೆಯಲ್ಲಿ ಜಲ ಸಾಹಸ ಕ್ರೀಡೆಗಳ ತರಬೇತಿ ಅಕಾಡೆಮಿ ಸ್ಥಾಪನೆಗೆ ಜಿಲ್ಲಾ ಉಸ್ತುವಾರಿ ಸಚಿವ ಮೂಲಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿ.ಎಂ.ಗಂಗಾಧರ ಸ್ವಾಮಿ ತಿಳಿಸಿದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment