SUDDIKSHANA KANNADA NEWS/ DAVANAGERE/ DATE:29-03-2025
ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿ ಇವರುಗಳ ಸಂಯುಕ್ತಾಶ್ರಯದಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ಏಪ್ರಿಲ್ 5 ಮತ್ತು 6 ರಂದು ದಾವಣಗೆರೆ ಕೊಂಡಜ್ಜಿ ಕೆರೆಯಲ್ಲಿ ಜಲಸಾಹಸ ಕ್ರೀಡೆಯನ್ನು ಆಯೋಜಿಸಲಾಗಿದೆ.
ಜಲಸಾಹಸ ಕ್ರೀಡೆಯಲ್ಲಿ ಲೋಕಸಭಾ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಭಾಗವಹಿಸುವರು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.