SUDDIKSHANA KANNADA NEWS/ DAVANAGERE/ DATE:21-11-2024
ದಾವಣಗೆರೆ: ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ ಮುಂಗಾರು ಹಂಗಾಮಿಗೆ ಜುಲೈ 29 ರಿಂದ ಭದ್ರಾ ಜಲಾಶಯದಿಂದ ನೀರನ್ನು ಹರಿಬಿಡಲಾಗಿರುತ್ತದೆ.
ಸತತ 120 ದಿನಗಳವರೆಗೆ ನೀರು ಹರಿಸಿರುವುದರಿಂದ ನವೆಂಬರ್ 26 ರ ರಾತ್ರಿಯಿಂದ ಬಲದಂಡೆ ಮತ್ತು ಎಡದಂಡೆ ನಾಲೆಗಳಲ್ಲಿ ನೀರು ಹರಿಸುವುದನ್ನು ನಿಲ್ಲಿಸಲಾಗುವುದು ಎಂದು ಕ.ನೀ.ನಿ.ನಿ ಭದ್ರಾ ಯೋಜನಾ ವೃತ್ತ, ಬಿ.ಆರ್ ಪ್ರಾಜೆಕ್ಟ್ ಅಧೀಕ್ಷಕ ಅಭಿಯಂತರರು ಹಾಗೂ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.
ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ 2024-25ನೇ ಸಾಲಿನ ಮುಂಗಾರು ಹಂಗಾಮಿಗೆ 85 ನೇ ನೀರಾವರಿ ಸಲಹಾ ಸಮಿತಿ ಸಭೆಯ ತೀರ್ಮಾನದಂತೆ ನೀರು ಹರಿಸಲಾಗಿತ್ತು. ನೀರನ್ನು ಹರಿಸುವ ಗರಿಷ್ಠ ಅವಧಿ 120 ದಿನಗಳು ನವೆಂಬರ್ 26ಕ್ಕೆ ಪೂರ್ಣಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ನೀರು ಸ್ಥಗಿತಗೊಳಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.