ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಲು ನಮ್ಮದೇನೂ ವಿರೋಧವಿಲ್ಲ: ಸಿಎಂ ಸಿದ್ದರಾಮಯ್ಯ ಹೇಳಿಕೆ

On: November 17, 2023 12:21 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:17-11-2023

ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಲು ನಮ್ಮ ವಿರೋಧ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ರಾಮಮಂದಿರ ಕಟ್ಟುವುದಕ್ಕೆ ನಾವೇಕೆ ವಿರೋಧ ವ್ಯಕ್ತಪಡಿಸಬೇಕು ಎಂದರು.

ಜನವರಿ 22 ರಂದು ರಾಮಮಂದಿರ ಉದ್ಘಾಟನೆಗೊಳ್ಳಲಿದ್ದು ಇದರ ಲಾಭವನ್ನು ಬಿಜೆಪಿ ಪಡೆಯಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ ಅದೇನು ಹೊಸದಲ್ಲ. ವಿವಾದ ಬಹಳ ವರ್ಷಗಳಿಂದ ಇದ್ದು, ನ್ಯಾಯಾಲಯದಲ್ಲಿ ಇತ್ಯರ್ಥವಾಗಿದೆ. ರಾಮಮಂದಿರ ಕಟ್ಟಲು ನಮ್ಮದೇನು ವಿರೋಧವಿಲ್ಲ. ಅದರಿಂದ ಮತದಾರರು ಬದಲಾಗುತ್ತಾರೆ ಎನ್ನುವುದು ಸುಳ್ಳು. ನಮ್ಮ ದೇಶದ ಜನ ವೈವಿಧ್ಯತೆಯಲ್ಲಿ ಏಕತೆಯನ್ನು ಕಂಡುಕೊಂಡಿದ್ದಾರೆ. ಬ್ರಿಟಿಷರ ಹಾಗೂ ಮೊಘಲರ ದಾಳಿಯಾದರೂ ಒಂದು ದೇಶವಾಗಿ ನಾವು ಉಳಿದುಕೊಂಡಿದ್ದೇವೆ. ಈ ದೇಶದಲ್ಲಿ ಅನೇಕ ಜಾತಿ, ಭಾಷೆಗಳು ಹಾಗೂ ಧರ್ಮಗಳಿದ್ದರೂ ದೇಶವಾಗಿ ಒಂದಾಗಿದ್ದು, ಐಕ್ಯತೆ, ಒಗ್ಗಟ್ಟಿನಿಂದ. ಉಳಿದುಕೊಂಡು ಬಂದಿದ್ದೇವೆ. ಒಳಗೊಳ್ಳುವಿಕೆಯಲ್ಲಿ ನಂಬಿಕೆ ಇಟ್ಟವರು ದೇಶದಲ್ಲಿ ಹೆಚ್ಚಿದ್ದಾರೆ ಎಂದರು.

ಅಧಿವೇಶನದಲ್ಲಿ ಉತ್ತರ ಕೊಡುತ್ತೇವೆ:

ಮಾಜಿ ಮುಖ್ಯಮತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಇಂದು ಕೂಡ ಪತ್ರಿಕಾಗೋಷ್ಠಿ ಕರೆದು ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ ವಿಧಾನಸಭಾ ಅಧಿವೇಶನದಲ್ಲಿ ಅವರು ಚರ್ಚೆ ಮಾಡಲಿ. ಉತ್ತರ ಕೊಡುತ್ತೇವೆ ಎಂದರು. ಸರ್ಕಾರ ಓಡಿಹೋಗುವುದಿಲ್ಲ. ಕುಮಾರಸ್ವಾಮಿಯವರು ಯಾವಾಗ ಸತ್ಯ ಹೇಳಿದ್ದಾರೆ. ಯಾವಾಗಲೂ ಹಿಟ್ ಅಂಡ್ ರನ್ ಕೇಸ್ ಅವರದ್ದು ಎಂದು ತಿಳಿಸಿದರು. ಸುಳ್ಳನ್ನೆಲ್ಲಾ ತನಿಖೆ ಮಾಡಿಸಲು ಆಗುವುದಿಲ್ಲ. ಏನಾದರೂ ಆಧಾರ ಇದ್ದರೆ, ದಾಖಲಾತಿ ಇದ್ದರೆ ತನಿಖೆ ಮಾಡಬಹುದು ಎಂದು ಸವಾಲು ಹಾಕಿದರು.

ಹಿಂದೇಟು ಹಾಕೋಲ್ಲ:

ಹೆಚ್.ಡಿ ಕುಮಾರಸ್ವಾಮಿಯವರು ಅವರ ಭ್ರಷ್ಟಾಚಾರಗಳ ಬಗ್ಗೆ ತನಿಖೆ ಮಾಡುವಂತೆ ಸವಾಲು ಹಾಕಿರುವುದಾಗಿ ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಮಾಡಬೇಕಾಗಿ ಬಂದರೆ ಮಾಡುತ್ತೇವೆ ಎಂದರು.

ಅದರಲ್ಲಿ ಹಿಂದೆ ಹೋಗುವ ಪ್ರಶ್ನೆಯೇ ಇಲ್ಲ. ಕುಮಾರಸ್ವಾಮಿಯಾಗಲಿ, ನಮ್ಮ ಪಕ್ಷದವರಾಗಲಿ ತಪ್ಪು ಮಾಡಿದರೆ ಶಿಕ್ಷೆ ಅನುಭವಿಸಲೇ ಬೇಕು ಎಂದರು.ಕುಮಾರಸ್ವಾಮಿಯವರ ಬಗ್ಗೆ ತನಿಖೆ ನಡೆಸಲು ಸರ್ಕಾರ ಹಿಂಜರಿಯುವುದಿಲ್ಲ ಎಂದು ತಿಳಿಸಿದರು.

ದಂಡ ಕಟ್ಟುವ ಮೂಲಕ ತಪ್ಪು ಒಪ್ಪಿಕೊಂಡಿದ್ದಾರೆ:

ಹೆಚ್ಚಿನ ಮೊತ್ತದ ವಿದ್ಯುತ್ ಬಿಲ್ಲನ್ನು ಅನಗತ್ಯವಾಗಿ ನನ್ನ ಮೇಲೆ ಹೇರಲಾಗಿದೆ ಎಂಬ ಕುಮಾರಸ್ವಾಮಿಯವರ ಹೇಳಿಕೆಯ ಬಗ್ಗೆ ಉತ್ತರಿಸುತ್ತಾ, ವಿದ್ಯುತ್ ಬಿಲ್ಲನ್ನು ಬೆಸ್ಕಾಂ ನವರು ನೀಡುತ್ತಾರೆ. ಕುಮಾರಸ್ವಾಮಿಯವರು ಮೊದಲು ತಪ್ಪನ್ನೇ ಮಾಡಿಲ್ಲ ಎಂದವರು ನಂತರ ದಂಡವನ್ನು ಕಟ್ಟಿರುವುದು, ಅವರು ಅಪರಾಧ ಮಾಡಿರುವುದನ್ನು ಒಪ್ಪಿಕೊಂಡಂತಾಗಿದೆ ಎಂದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment