Site icon Kannada News-suddikshana

ಒಳಮೀಸಲಾತಿ ಜಾರಿ ಮಾಡೇ ಮಾಡ್ತೀವಿ: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

SUDDIKSHANA KANNADA NEWS/ DAVANAGERE/ DATE:05-04-2025

ಬೆಂಗಳೂರು: ಒಳ ಮೀಸಲಾತಿ ಬಗ್ಗೆ ಅನುಮಾನ ಬೇಡ. ಜಾರಿ ಮಾಡೇ ಮಾಡ್ತೀವಿ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮೇಲೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಡಾ.ಬಾಬು ಜಗಜೀವನ ರಾಮ್ ಅವರ 118 ನೇ ಜನ್ಮ ದಿನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ನೀವು ಬೇಡ ಅಂದರೂ ನಾವು ಜಾರಿ ಮಾಡ್ತೀವಿ. ಸುಪ್ರೀಂಕೋರ್ಟ್ ಆದೇಶವನ್ನು ನಾವು ಖಚಿತವಾಗಿ ಪಾಲಿಸುತ್ತೇವೆ. ನಾಗಮೋಹನ್ ದಾಸ್ ಅವರು ಎರಡು ತಿಂಗಳ ಕಾಲಾವಧಿ ಕೇಳಿದ್ದಾರೆ. ನಾವು ಕೊಟ್ಟಿದ್ದೇವೆ. ಬಳಿಕ ಯಾರಿಗೂ ಅನ್ಯಾಯ ಆಗದಂತೆ ಜಾರಿ ಮಾಡುತ್ತೇವೆ ಎಂದು ಸಿಎಂ ಭರವಸೆ ನೀಡಿದರು.

ಈ ವೇಳೆ ಡಿಸಿಎಂ ಡಿ. ಕೆ. ಶಿವಕುಮಾರ್, ಗೃಹ ಸಚಿವ ಡಾ. ಜಿ. ಪರಮೇಶ್ವರ್, ಸಚಿವರಾದ ಹೆಚ್. ಸಿ. ಮಹಾದೇವಪ್ಪ, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಮತ್ತಿತರರು ಹಾಜರಿದ್ದರು.

Exit mobile version