Site icon Kannada News-suddikshana

ಧರ್ಮಸ್ಥಳದ ಪಾವಿತ್ರ್ಯತೆಗೆ ಧಕ್ಕೆಯಾದರೆ ಸುಮ್ಮನಿರಲ್ಲ: ಬುರುಡೆ ಕಥೆ ಸರ್ಕಾರ ಅಲ್ಲಾಡಿಸುತ್ತೆ!

Dharmasthala

SUDDIKSHANA KANNADA NEWS/ DAVANAGERE/DATE:11_08_2025

ಬೆಂಗಳೂರು: ಧರ್ಮಸ್ಥಳದಲ್ಲಿ ನಡೆಯುತ್ತಿರುವ ಎಸ್‌ಐಟಿ ತನಿಖೆ ಹಾಗೂ ಧಾರ್ಮಿಕ ನಂಬಿಕೆ ಕೆಡಿಸಲು ನಡೆಯುತ್ತಿರುವ ಹುನ್ನಾರಗಳ ಕುರಿತು ತಮ್ಮದೇ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಬಾಹ್ಯ ಶಕ್ತಿಗಳ ಒತ್ತಡಕ್ಕೆ ಮಣಿದು ಎಸ್‌ಐಟಿ ತನಿಖೆಗೆ ಆದೇಶಿಸಿದ್ದು ಎಂಬುದು ಲೋಕಸತ್ಯ ಎಂದು ಬಿಜೆಪಿ ಕಿಡಿಕಾರಿದೆ.

READ ALSO THIS STORY: ಕೂಲಿ ಅಬ್ಬರಕ್ಕೆ ಮಂಕಾದ ವಾರ್ 2 ಮುಂಗಡ ಬುಕಿಂಗ್: ಎಲ್ಲೆಲ್ಲೂ ಸೂಪರ್ ಸ್ಟಾರ್ ರಜನಿಕಾಂತ್ ಮೇನಿಯಾ!

ಕೆಪಿಸಿಸಿ ಮಾಜಿ ಅಧ್ಯಕ್ಷರು,ಕೇಂದ್ರದ ಮಾಜಿ ಸಚಿವರು, ಹಿರಿಯ ಕಾಂಗ್ರೆಸ್‌ ನಾಯಕರಾದ ಜನಾರ್ದನ ಪೂಜಾರಿ ಅವರು ಸರ್ಕಾರದ ನಡವಳಿಕೆ ವಿರುದ್ಧ ಸಿಡಿದೆದ್ದಿದ್ದು, ಧರ್ಮಸ್ಥಳದ ಪಾವಿತ್ರ್ಯತೆಗೆ ಧಕ್ಕೆಯಾದರೆ ಸುಮ್ಮನಿರುವುದಿಲ್ಲ ಎಂದು ಗುಡುಗಿದ್ದಾರೆ. ಕಾಂಗ್ರೆಸ್ ಪಕ್ಷದ ಹಲವಾರು ಶಾಸಕರು ಕೂಡಾ ಧರ್ಮಸ್ಥಳದ ವಿರುದ್ಧದ ಷಡ್ಯಂತ್ರ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರೇ, ಹಿಂದೂ ಧಾರ್ಮಿಕ ನಂಬಿಕೆಗಳನ್ನು ಕೆಡಿಸುತ್ತಿರುವ ಬುರುಡೆ ಪ್ರಕರಣ ಎಂಬ ಬುರುಡೆ ಕಥೆಗಳು ನಿಮ್ಮ ಸರ್ಕಾರವನ್ನೇ ಅಲ್ಲಾಡಿಸಬಹುದು, ಎಚ್ಚರಿಕೆ ಎಂದು ಹೇಳಿದೆ.

ಎಡಪಂಥೀಯರಿಂದ ಟಾರ್ಗೆಟ್‌ ಧರ್ಮಸ್ಥಳ:

ಇಷ್ಟುದಿನ ತೆರೆಮರೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಟಾರ್ಗೆಟ್‌ ಹಿಂದೂ ಕಾರ್ಯಕ್ರಮವನ್ನು ಜಾರಿಯಲ್ಲಿಟ್ಟಿತ್ತು. ಇದೀಗ ಇನ್ನೊಂದು ಹೆಜ್ಜೆ ಮುಂದೆ ಹೋಗಿ ಟಾರ್ಗೆಟ್‌ ಧರ್ಮಸ್ಥಳ ಅಭಿಯಾನ ಕೈಗೊಂಡಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಎಡಪಂಥೀಯರ ಒತ್ತಡಕ್ಕೆ ಮಣಿದು ಎಸ್‌ಐಟಿ ರಚನೆ ಮಾಡಿದ್ದೇವೆ ಎಂದು ಹೇಳಿದ್ದಾರೆ. ಇದಕ್ಕಿಂತ ಸರ್ಕಾರದ ಕುಮ್ಮಕ್ಕಿನ ಬಗ್ಗೆ ಸಾಕ್ಷ್ಯ ಬೇಕೆ ಎಂದು ಪ್ರಶ್ನಿಸಿದೆ.

ಕಾಶಿ ವಿಶ್ವನಾಥನೇ ಧರ್ಮಸ್ಥಳದಲ್ಲಿ ಮಂಜುನಾಥನ ರೂಪದಲ್ಲಿ ನೆಲೆಸಿದ್ದಾನೆ ಎಂಬ ನಂಬಿಕೆ ಭಕ್ತರಲ್ಲಿದೆ. ದಕ್ಷಿಣ ಭಾರತದ ಅತಿದೊಡ್ಡ ಶ್ರದ್ಧಾ ಕೇಂದ್ರವಾಗಿ ಧರ್ಮಸ್ಥಳ ಹೊರಹೊಮ್ಮಿದೆ. ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳದೆ ಹೋದರೆ,
ಬೃಹತ್‌ ಹೋರಾಟ ಮಾಡಬೇಕಾಗಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಸರ್ಕಾರವನ್ನು ಎಚ್ಚರಿಸಿದ್ದಾರೆ. ಸರ್ಕಾರ ತನ್ನ ಹಿಂದೂ ವಿರೋಧಿ ಧೋರಣೆ ಬದಲಿಸಿಕೊಳ್ಳಬೇಕು ಎಂದು ಬಿಜೆಪಿ ಆಗ್ರಹಿಸಿದೆ.

Exit mobile version