ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಮಕ್ಕಳಲ್ಲಿರುವ ನ್ಯೂನತೆ ಗುರುತಿಸಿ ತಿದ್ದಿ ತೀಡಬೇಕು: ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್

On: June 4, 2025 8:18 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE-04-06-2025

ದಾವಣಗೆರೆ: ಮಕ್ಕಳಿಗೆ ನಿರಂತರ ಅಭ್ಯಾಸ ಮಾಡಿಸುವ ಮೂಲಕ. ಅವರ ಸಾಧನೆಗೆ ಶಕ್ತಿನೀಡಬೇಕು.ಮಕ್ಕಳಲ್ಲೂ ಅನೇಕ‌ ನೂನ್ಯತೆಗಳಿರುತ್ತವೆ ಅವುಗಳನ್ನು ಸರಿಯಾದ ಕ್ರಮದಲ್ಲಿ ತಿದ್ದಿ ತೀಡಬೇಕು ಜೊತೆಗೆ ಉತ್ತಮ ಪ್ರಜೆಯಾಗಿ ರೂಪಿಸಬೇಕು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಶಿಕ್ಷಕರಿಗೆ ಕರೆ ನೀಡಿದರು.

ದಾವಣಗೆರೆ ಸಮೀಪದ ಶಿರಮಗೊಂಡನಹಳ್ಳಿಯಲ್ಲಿ ಸ್ವಾಮಿ ವಿವೇಕಾನಂದ ಶಿಕ್ಷಣ ಅಭಿಯಾನ ಯೋಜನೆಯಡಿ ನಿರ್ಮಾಣಗೊಂಡ  ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಶಾಲಾ ಶಿಕ್ಷಣದಿಂದ ವಂಚಿತರಾದ ಮಕ್ಕಳನ್ನು ಗುರುತಿಸಬೇಕು ಅವರನ್ನು ಪುನಃ ಶಾಲೆಗೆ ದಾಖಲಿಸಿ ಅವರಿಗೆ ಉತ್ತಮ ವಿದ್ಯಾಭ್ಯಾಸ ನೀಡಬೇಕು.ಮಕ್ಕಳು ದೇಶದ ನಿಜವಾದ ಆಸ್ತಿ ಅವರನ್ನು ಸಂರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ  ಎಂದರು.
ಮಕ್ಕಳಲ್ಲಿ ಪರಿಸರ, ಹಸಿರು‌ ಇಂಧನ, ನೀರಿನ‌ ಸಂರಕ್ಷಣೆ,ಗುಣಮಟ್ಟದ ಗಾಳಿ ಬಗ್ಗೆ ಅರಿವು ಮೂಡಿಸಬೇಕು.ಶಿಕ್ಷಕರು ಮಾತೃಹೃದಯದಿಂದ ಮಕ್ಕಳ ಸಮಸ್ಯೆಗೆ ಸ್ಪಂದಿಸಬೇಕು.ಶಿಕ್ಷಣದ ಜೊತೆಗೆ ಸಂಸ್ಕೃತಿ,ಸಂಸ್ಕಾರ ಹಾಗೂ ಮಾನವೀಯ ಮೌಲ್ಯಗಳನ್ನು ತಿಳಿಸಬೇಕು.ಮಕ್ಕಳು ತಮ್ಮ ಬೆಳವಣಿಗೆಗೆ ಪೂರಕವಾದ ಹೊಸ ವಿಷಯಗಳನ್ನು ತಿಳಿದುಕೊಳ್ಳುವುದು ಅತಿ ಅಗತ್ಯ. ಮಕ್ಕಳು ತಮ್ಮ ದಿನಚರಿಯನ್ನು ಬರೆಯಬೇಕು ಇದರಿಂದ ಮುಂದಿನ ಪ್ಲಾನ್ ಇರುತ್ತದೆ ಹಾಗೂ ಅದನ್ನು ಸರಿಯಾದ ಕ್ರಮದಲ್ಲಿ ನಿಭಾಯಿಸಬೇಕು.ಆಗ ಉನ್ನತಮಟ್ಟಕ್ಕೆ ಹೋಗಲು ಸಾಧ್ಯ ಎಂದರು.
ಇಂದಿನ ಮಕ್ಕಳು ಹೆಚ್ಚಾಗಿ ಮೊಬೈಲ್ ಹಾಗೂ ಟಿವಿ ಯ ಬಳಕೆಯಲ್ಲೇ ಮುಳುಗಿದ್ದಾರೆ.ಇದರಿಂದ ಊಟ ಹಾಗೂ‌ ನಿದ್ರೆ ಮಾಡುವುದಿಲ್ಲ. ಮಕ್ಕಳಿಗೆ ಮಾನಸಿಕ ಸಮಸ್ಯೆಗಳು ಉಂಟಾಗುತ್ತಿವೆ ಆದ್ದರಿಂದ ಮಕ್ಕಳಿಗೆ ಮೊಬೈಲ್ ಬಿಡಿ ಪುಸ್ತಕ ಹಿಡಿ ಎಂಬಂತೆ ಮಾಡಬೇಕು ಎಂದು ತಿಳಿಸಿದರು.
ಪ್ರತಿಯೊಬ್ಬ ಶಿಕ್ಷಕರು ಮಕ್ಕಳ‌ಜೊತೆ ಉತ್ತಮ ಒಡನಾಟ ಹೊಂದಬೇಕು.ಶಿಕ್ಷಕರು ಮಕ್ಕಳಿಗೆ ಬೇಕು- ಬೇಡಗಳ ಬಗ್ಗೆ ತಿಳಿದು ತರಬೇತಿ ಕೊಟ್ಟಾಗ ಮಾತ್ರ ಒಳ್ಳೆಯ ಶಿಕ್ಷಕರಾಗಲು ಸಾಧ್ಯ.ವಿದ್ಯಾರ್ಥಿಗಳಿಗೆ ನಿರಂತರ ಅಭ್ಯಾಸ ಮಾಡಿಸುವ ಮೂಲಕ. ಅವರ ಸಾಧನೆಗೆ ಶಕ್ತಿನೀಡಬೇಕು. ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ‌ಹಾಗೂ‌ ಗಣಿತ‌ ಕಷ್ಟದ ವಿಷಯಗಳು ಎನ್ನುವ ಮಾತಿದೆ ಈ‌ಬಗ್ಗೆ ಗಮನ‌ಹರಿಸಬೇಕು.ಸರಳವಾಗಿ‌ ಅರ್ಥೈಸುವ ವಿಧಾನ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಸರ್ಕಾರಿ ಶಾಲೆಗಳಿಗೆ ಸೇರುವ ಮಕ್ಕಳ ಪ್ರಮಾಣ ಕುಸಿತಕಾಣುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ವರ್ಷ ವರ್ಷವೂ ದಾಖಲಾತಿ ಕಡಿಮೆ ಆಗುತ್ತಿದ್ದು,  ಇದನ್ನು ತಡೆಯಲು ಪೋಷಕರೊಂದಿಗೆ ನಿಯಮಿತ ಸಭೆಗಳನ್ನು ನಡೆಸಬೇಕು. ಬಿಇಒ ಗಳು ನಿಯಮಿತವಾಗಿ ಶಾಲೆಗಳಿಗೆ ಭೇಟಿ ನೀಡಬೇಕು. ಈ ಬಗ್ಗೆ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಬೇಕು.ನಮ್ಮ ಶಾಲೆ ನಮಗೆ ಹೆಮ್ಮೆಯಾಗಬೇಕು ಎಂದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಎಸ್.ಎ ರವೀಂದ್ರನಾಥ್, ಬಿಇಒ ಪುಷ್ಪಲತಾ,ಗ್ರಾ.ಪಂ‌.ಅಧ್ಯಕ್ಷರಾದ ಇ.ಪ್ರಸನ್ನ,ಉಪಾಧ್ಯಕ್ಷೆ ರೇಣುಕಾಬಾಯಿ, ಪಿಡಿಒ ಜಯಲಕ್ಷ್ಮಿ,ಜಿಲ್ಲಾ ಸರ್ಕಾರಿ‌ ಆಸ್ಪತ್ರೆಯ  ರಕ್ಷಾ ಸಮಿತಿ ಸದಸ್ಯರಾದ ಎಸ್ .ಎಂ ರುದ್ರೇಶ್ ,ಶಾಲಾ ಶಿಕ್ಷಕವೃಂದ ಹಾಗೂ ಶಿರಮಗೊಂಡನಹಳ್ಳಿ‌ ಗ್ರಾಮಸ್ಥರು‌ ಇದ್ದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment