Site icon Kannada News-suddikshana

ದಾವಣಗೆರೆ ವಿವಿ ಅಂತರಕಾಲೇಜು ಭಾರ ಎತ್ತುವ ಸ್ಪರ್ಧೆ: ಹೊನ್ನೂರು ಗೊಲ್ಲರಹಟ್ಟಿ ವಿದ್ಯಾರ್ಥಿಗಳ ಅತ್ಯುನ್ನತ ಸಾಧನೆ

ದಾವಣಗೆರೆ

SUDDIKSHANA KANNADA NEWS/DAVANAGERE/DATE:13_10_2025

ದಾವಣಗೆರೆ: ಚಿತ್ರದುರ್ಗದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ನಡೆದ 2025-26 ನೇ ಸಾಲಿನ ದಾವಣಗೆರೆ ವಿಶ್ವವಿದ್ಯಾಲಯ ಅಂತರ ಕಾಲೇಜು ಭಾರ ಎತ್ತುವ ಸ್ಪರ್ಧೆಯಲ್ಲಿ ಹೊನ್ನೂರು ಗೊಲ್ಲರಹಟ್ಟಿಯ ಡಿ.ದೇವರಾಜ ಅರಸು ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಅದ್ಭುತ ಸಾಧನೆ ಮಾಡಿದ್ದಾರೆ.

READ ALSO THIS STORY: ರೈಲ್ವೆ ನೇಮಕಾತಿ ಮಂಡಳಿಯ ಜೂನಿಯರ್ ಎಂಜಿನಿಯರ್ ನೇಮಕ: 2570 ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

ಪವನ್ ಹೆಚ್. ಅವರು 66ಕೆಜಿ ವಿಭಾಗದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಒಟ್ಟು 410 ಕೆಜಿ ಭಾರ ಎತ್ತುವ ಮೂಲಕ ಪ್ರಥಮ ಸ್ಥಾನ ಪಡೆದಿದ್ದಾರೆ. ವೆಯ್ಟ್ ಲಿಫ್ಟಿಂಗ್ ನ 65 ಕೆಜಿ ವಿಭಾಗದಲ್ಲಿ 180 ಕೆಜಿ ಎತ್ತುವ ಮೂಲಕ ಫಸ್ಟ್ ಬಂದಿದ್ದಾರೆ.

ನವೀನ್ ಎಸ್. ಅವರು 71ಕೆಜಿ ವಿಭಾಗದ ವೆಯ್ಟ್ ಲಿಫ್ಟಿಂಗ್ ವಿಭಾಗದಲ್ಲಿ ಒಟ್ಟು 215ಕೆಜಿ ಭಾರ ಎತ್ತುವ ಮೂಲಕ ಪ್ರಥಮ ಸ್ಥಾನ ಪಡೆದಿದ್ದಾರೆ.

ವಿಷ್ಣು ಎಂ. ಅವರು 59ಕೆಜಿ ವಿಭಾಗದ ಪವರ್ ಲಿಫ್ಟಿಂಗ್ ನಲ್ಲಿ ಒಟ್ಟು 445ಕೆಜಿ ಭಾರ ಎತ್ತುವ ಮೂಲಕ ದ್ವೀತಿಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.

ಸಾಧನೆ ಮಾಡಿದ ಪವನ್ ಹೆಚ್., ಎಸ್. ನವೀನ್ ಹಾಗೂ ಎಂ. ವಿಷ್ಣು ಅವರಿಗೆ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಡಾ. ಗೀತಾ ಶಿವಮೂರ್ತಿ ನಾಯ್ಕ್, ಪ್ರಾಂಶುಪಾಲರಾದ ತಿಪ್ಪೇಶಿ ಜಿ. ಆರ್., ಡಾ. ಶಿವಶಂಕರ ವಿ., ದೈಹಿಕ ಶಿಕ್ಷಣ ನಿರ್ದೇಶಕರು ಮತ್ತು ಎಲ್ಲಾ ಬೋಧಕ ಮತ್ತು ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ. ಈ ವಿದ್ಯಾರ್ಥಿಗಳು ಮುಂಬರುವ ದಿನಗಳಲ್ಲಿ ರಾಜ್ಯ, ಅಂತರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಅತ್ಯುನ್ನತ ಸಾಧನೆ ಮಾಡಲು ಎಂದು ಹಾರೈಸಿದ್ದಾರೆ.
Exit mobile version