• ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
Friday, May 9, 2025
Social icon element need JNews Essential plugin to be activated.
Kannada News-suddikshana
No Result
View All Result
  • Login
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
No Result
View All Result
Morning News
No Result
View All Result

ಲಿಂಗಾಯತ ಸಮುದಾಯದ ಸ್ವಾಮೀಜಿಗಳು, ಸಚಿವರು, ಶಾಸಕರು, ಮುಖಂಡರ ಬೇಡಿಕೆಗಳೇನು? ಸಿಎಂ ಹೇಳಿದ್ದೇನು..?

Editor by Editor
February 24, 2025
in ಬೆಂಗಳೂರು
0
ಲಿಂಗಾಯತ ಸಮುದಾಯದ ಸ್ವಾಮೀಜಿಗಳು, ಸಚಿವರು, ಶಾಸಕರು, ಮುಖಂಡರ ಬೇಡಿಕೆಗಳೇನು? ಸಿಎಂ ಹೇಳಿದ್ದೇನು..?

SUDDIKSHANA KANNADA NEWS/ DAVANAGERE/ DATE:24-02-2025

ಬೆಂಗಳೂರು: ನಾಡಿನ ಸಾಂಸ್ಕೃತಿಕ ನಾಯಕ ಎಂದು ಘೋಷಿತರಾಗಿರುವ ವಿಶ್ವಗುರು ಬಸವೇಶ್ವರರ ವಿಚಾರಧಾರೆಯನ್ನು ಪರಿಣಾಮಕಾರಿಯಾಗಿ ಜನಮಾನಸಕ್ಕೆ ತಲುಪಿಸುವ ನಿಟ್ಟಿನಲ್ಲಿ ಈ ವರ್ಷದ ಬಜೆಟ್ ನಲ್ಲಿ ರೂ 100 ಕೋಟಿ ನೀಡುವ ಜೊತೆಗೆ, ಮುಂದಿನ ನಾಲ್ಕು ವರ್ಷಗಳ ಬಜೆಟ್ ನಲ್ಲಿ ತಲಾ 100 ಕೋಟಿಯಂತೆ ಒಟ್ಟು ರೂ 500 ಕೋಟಿ ಅನುದಾನ ನೀಡಬೇಕು ಎಂದು ಲಿಂಗಾಯತ ಸ್ವಾಮೀಜಿಗಳು, ಸಚಿವರು, ಶಾಸಕರು, ಸಮಾಜದ ಮುಖಂಡರು ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿ ಭೇಟಿಗೂ ಮುನ್ನ ಈ ಸಂಬಂಧ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರ ರೇಸ್ ಕೋರ್ಸ್ ರಸ್ತೆಯ ಅಧಿಕೃತ ನಿವಾಸದಲ್ಲಿ ಬೆಳಿಗ್ಗೆ ಮಠಾಧೀಶರು, ಸಮುದಾಯದ ಸಚಿವರು, ಶಾಸಕರು ಸಭೆ ನಡೆಸಿದರು. ರಾಜ್ಯದೆಲ್ಲೆಡೆಯಿಂದ ಆಗಮಿಸಿದ್ದ ಸಮುದಾಯದ ಸ್ವಾಮೀಜಿಗಳು, ಶಾಸಕರು, ಮಾಜಿ ಶಾಸಕರು ಹಾಗೂ ಸಂಘ ಸಂಸ್ಥೆಗಳ ಪ್ರಮುಖರು ಸಭೆಯಲ್ಲಿ ಪಾಲ್ಗೊಂಡು ಚರ್ಚಿಸಿದರು. ನಂತರ, ಮುಖ್ಯಮಂತ್ರಿಯವರ ಅಧಿಕೃತ ನಿವಾಸ ‘ಕಾವೇರಿ’ಗೆ ತೆರಳಿ ಮನವಿ ಸಲ್ಲಿಸಿದರು.

ಯುವ ಪೀಳಿಗೆಗೆ ಬಸವಣ್ಣ ಅವರನ್ನು ಪರಿಚಯಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಕೆಲವು ಮಹತ್ವದ ಕ್ರಮಗಳನ್ನು ಕೈಗೊಳ್ಳಬೇಕೆಂದು ಇತ್ತೀಚೆಗೆ ಚಿತ್ರದುರ್ಗದಲ್ಲಿ ನಡೆದ 13ನೇ ಅಖಿಲಭಾರತ ಶರಣ ಸಾಹಿತ್ಯ ಸಮ್ಮೇಳನದಲ್ಲಿ ಪರಮಪೂಜ್ಯರು, ಗಣ್ಯರು, ಚಿಂತಕರು, ಅಭಿಪ್ರಾಯಪಟ್ಟಿದ್ದಾರೆ. ನಂತರದಲ್ಲಿಯೂ ಈ ಕುರಿತು ಹಲವು ಸಭೆಗಳನ್ನು ನಡೆಸಿ ಹಿಂತಚಿಂತಕರೆಲ್ಲರ ಅಭಿಪ್ರಾಯಗಳನ್ನು ಕ್ರೋಢಿಕರಿಸಲಾಗಿದೆ. ಅದರಂತೆ, ಕಾರ್ಯಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಸಕ್ತ ಸಾಲಿನ ಬಜೆಟ್ ನಿಂದಲೇ ಅಗತ್ಯ ಅನುದಾನ ಒದಗಿಸಬೇಕು ಎಂದು ಒತ್ತಾಯಿಸಿದರು.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಬಸವಣ್ಣನ ಬೃಹತ್ ಪ್ರತಿಮೆ ಪ್ರತಿಷ್ಠಾಪಿಸಬೇಕು. ಜೊತೆಗೆ, ಬೆಂಗಳೂರಿನಲ್ಲಿ 25 ಎಕರೆ ಪ್ರದೇಶದಲ್ಲಿ ಅಕ್ಷರಧಾಮದ ಮಾದರಿಯಲ್ಲಿ ಬೃಹತ್ ‘ಶರಣ ದರ್ಶನ’ ಕೇಂದ್ರ ಸ್ಥಾಪಿಸಿ, ಅಲ್ಲಿ, ಉದ್ಯಾನ, ಗ್ರಂಥಾಲಯ, ಅತಿಥಿಕೇಂದ್ರ, ದಾಸೋಹ ಭವನ, ಸಭಾಂಗಣ ನಿರ್ಮಿಸಿ ಪ್ರವಾಸಿ ತಾಣವನ್ನಾಗಿಸಬೇಕು ಎಂಬುದನ್ನು ಬಾಲ್ಕಿ ಮಠದ ಬಸವಲಿಂಗ ಪಟ್ಟದೇವರು ಸ್ವಾಮೀಜಿ ಅವರು ಎಲ್ಲರ ಪರವಾಗಿ ಮುಖ್ಯಮಂತ್ರಿಯವರ ಗಮನಕ್ಕೆ ತಂದರು.

ಎಲ್ಲ ಶರಣರ ಜನ್ಮ ಸ್ಥಳ, ಐಕ್ಯಸ್ಥಳ ಹಾಗೂ ಇತರೆ ಸ್ಮಾರಕಗಳ ರಕ್ಷಣೆಗಾಗಿ ‘ಪ್ರತ್ಯೇಕ ಶರಣ ಸ್ಮಾರಕ ರಕ್ಷಣೆ ಪ್ರಾಧಿಕಾರ’ ರಚಿಸಬೇಕು. ಬಸವಕಲ್ಯಾಣದಲ್ಲಿ ನಿರ್ಮಿಸುತ್ತಿರುವ ಅನುಭವ ಮಂಟಪದ ಸದ್ಬಳಕೆಯಾಗಲು ಅಲ್ಲಿಯೇ ‘ವಚನ ವಿಶ್ವವಿದ್ಯಾಲಯ’ ಮತ್ತು ಸಂಶೋಧನ ಕೇಂದ್ರ ಆರಂಭಿಸಬೇಕು. ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ‘ಬಸವಭವನ’ ನಿರ್ಮಿಸಿ, ಅಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಿರಂತರವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಬೇಕು. ವಚನ ಸಾಹಿತ್ಯ ಸಂಗ್ರಹ, ಪ್ರಕಟಣೆ, ಮರು ಪ್ರಕಟಣೆ, ಹಸ್ತಪ್ರತಿಗಳ ದಾಖಲೀಕರಣ, ಶರಣ ಕ್ಷೇತ್ರಗಳ ಅಧ್ಯಯನ ಮತ್ತು ದಾಖಲೀಕರಣ, ವಿಚಾರಸಂಕಿರಣ, ಸಮ್ಮೇಳನಗಳು, ವಚನಾಧಾರಿತ ಸಾಂಸ್ಕೃತಿಕ ಕಾರ್ಯಕ್ರಮಗಳು ಇತ್ಯಾದಿ ಚಟುವಟಿಕೆಗಳನ್ನು ನಡೆಸಲು ಶರಣ ಸಾಹಿತ್ಯ ಮತ್ತು ಸಂಸ್ಕೃತಿ ಪ್ರಸಾರಕ್ಕಾಗಿಯೇ ಇರುವ ಸಂಸ್ಥೆಗಳಿಗೆ ಅನುದಾನ ಒದಗಿಸಬೇಕು ಎಂದು ಆಗ್ರಹಿಸಿದರು.

ಮುಂದಿನ ಐದು ವರ್ಷಗಳಲ್ಲಿ 500 ಕೋಟಿ ಅನುದಾನ ಒದಗಿಸುವ ಮೂಲಕ ಸಾಂಸ್ಕೃತಿಕ ನಾಯಕ ಬಸವಣ್ಣನವರನ್ನು ಮುಂಬರುವ ಪೀಳಿಗೆಗಳಿಗೆ ಪರಿಚಯಿಸುವುದಕ್ಕೆ ಸಂಬಂಧಿಸಿದ ಈ ಕಾರ್ಯಯೋಜನೆಗಳಿಗೆ ಚಾಲನೆ ನೀಡಿ, ಇತಿಹಾಸ ಸದಾ ನೆನಪಿಸಿಕೊಳ್ಳುವಂತಹ ಕಾರ್ಯಕ್ಕೆ ಮುಂದಾಗಬೇಕು ಎಂದು ಮುಖ್ಯಮಂತ್ರಿ ಅವರನ್ನು ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಹಂತಹಂತವಾಗಿ ಶ್ರೀಗಳ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದರು. ಈ ವೇಳೆ ಸಚಿವ ಎಂ. ಬಿ. ಪಾಟೀಲ್, ವಿವಿಧ ಮಠಾಧೀಶರು ಹಾಜರಿದ್ದರು.

Next Post
ಮುಂದಿನ ಶೈಕ್ಷಣಿಕ ಸಾಲಿನಿಂದ ಪಠ್ಯದೊಂದಿಗೆ ಕೌಶಲ್ಯ ತರಬೇತಿ : ಸಚಿವ ಎಸ್. ಮಧು ಬಂಗಾರಪ್ಪ

ಮುಂದಿನ ಶೈಕ್ಷಣಿಕ ಸಾಲಿನಿಂದ ಪಠ್ಯದೊಂದಿಗೆ ಕೌಶಲ್ಯ ತರಬೇತಿ : ಸಚಿವ ಎಸ್. ಮಧು ಬಂಗಾರಪ್ಪ

Leave a Reply Cancel reply

Your email address will not be published. Required fields are marked *

Recent Posts

  • ಆಪರೇಷನ್ ಸಿಂಧೂರ ನಡೆದ ದಿನ ಜನಿಸಿದ ಮಗುವಿಗೆ “ಸಿಂಧೂರಿ” ಹೆಸರಿಟ್ಟ ದಂಪತಿ!
  • ಸೋಫಿಯಾ ಖುರೇಷಿ, ವ್ಯೋಮಿಕಾ ಸಿಂಗ್ ಗೆ ಸಾನಿಯಾ ಮಿರ್ಜಾ ಬಹುಪರಾಕ್!
  • ಪಾಕಿಸ್ತಾನದ ಹಲವು ನೆಲೆಗಳು ಉಡೀಸ್, 50 ಡ್ರೋಣ್ ಗಳು ಪೀಸ್ ಪೀಸ್!
  • ಪಾಕಿಸ್ತಾನದ F-16 ಮತ್ತು ಎರಡು JF-17 ವಿಮಾನ ಹೊಡೆದುರುಳಿಸಿದ ಭಾರತ!
  • ಈ ರಾಶಿಯವರಿಗೆ ವಿದೇಶ ಪ್ರವಾಸ ಯೋಗ: ಈ ರಾಶಿಯವರ ಜೊತೆ ನೀವು ಮದುವೆಯಾದರೆ ನಿಮ್ಮಂತ ಅದೃಷ್ಟಶಾಲಿ ಯಾರು ಇಲ್ಲ!

Recent Comments

No comments to show.

Archives

  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023

Categories

  • Chitradurga
  • CINEMA
  • DHARAVADA
  • DINA BHAVISHYA
  • Home
  • Hubli
  • JOB NEWS
  • KALABURAGI
  • Mangalore
  • MYSORE
  • SHIVAMOGGA
  • STATE
  • Stock market (ಷೇರು ಮಾರುಕಟ್ಟೆ)
  • UDUPI
  • ಅಡಿಕೆ ಧಾರಣೆ ಮತ್ತು ಅಡಿಕೆ ಮಾಹಿತಿ
  • ಕನ್ನಡ ರಾಜ್ಯೋತ್ಸವ
  • ಕ್ರಿಕೆಟ್
  • ಕ್ರೀಡೆ
  • ಕ್ರೈಂ ನ್ಯೂಸ್
  • ದಾವಣಗೆರೆ
  • ನವದೆಹಲಿ
  • ಬೆಂಗಳೂರು
  • ವಾಣಿಜ್ಯ
  • ವಿದೇಶ
  • ಹಾರ್ಟ್ ಬೀಟ್ಸ್- ಬದುಕು ಬೆಳಕು
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ

© 2023 Newbie Techy -Suddi Kshana by Newbie Techy.

No Result
View All Result

© 2023 Newbie Techy -Suddi Kshana by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In