SUDDIKSHANA KANNADA NEWS/ DAVANAGERE/ DATE:31-01-2024
ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಮುಖ್ಯಮಂತ್ರಿಗಳು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.
ಪ್ರತಿ ಜಿಲ್ಲೆಯ ಪ್ರಗತಿ ಪರಿಶೀಲನೆಯನ್ನು ಸವಿವರವಾಗಿ ಮಾಡಬೇಕು. ಅದರಿಂದ ಜಿಲ್ಲೆಯ ಸಮಸ್ಯೆಗಳನ್ನು ಅರಿಯಲು ಸಾಧ್ಯವಾಗುತ್ತದೆ. ಆಯಾ ಜಿಲ್ಲೆಯ ರಸ್ತೆ ಸಾರಿಗೆ ನಿಗಮದ ಡಿಸಿ ಗಳೊಂದಿಗೆ ಸಭೆ ನಡೆಸಿ, ಬಸ್ ಗಳ ಕೊರತೆ, ಸ್ಥಗಿತಗೊಳಿಸಿರುವ ಮಾರ್ಗಗಳು, ಬಸ್ ಸೇವೆಯಲ್ಲಿನ ವ್ಯತ್ಯಯ ಮೊದಲಾದ ವಿಷಯಗಳ ಕುರಿತು ಚರ್ಚಿಸಿ, ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು.
ಮಾನವ-ವನ್ಯಪ್ರಾಣಿ ಸಂಘರ್ಷದ ಸಮಸ್ಯೆ ಕುರಿತು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು , ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಮ್ಮ ಜಿಲ್ಲೆಯಲ್ಲಿ ವನ್ಯಪ್ರಾಣಿಗಳು ರೈತರ ಜಮೀನಿಗೆ, ತೋಟಕ್ಕೆ ನುಗ್ಗಲು ಆಹಾರ, ನೀರಿನ
ಕೊರತೆಯೇ ಕಾರಣ. ಅರಣ್ಯದೊಳಗೆಯೇ ಆಹಾರ, ನೀರಿನ ವ್ಯವಸ್ಥೆ ಕಲ್ಪಿಸುವ ಕುರಿತು ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು
ಮೇವು ಸಾಲದೆ ಇದ್ದರೆ, ಬೆಳೆಯಬೇಕು. ರೈತರಿಂದ ಕೊಂಡುಕೊಳ್ಳಬೇಕು. ಮೇವಿಗೆ ಯಾವುದೇ ಕೊರತೆಯಾಗದಂತೆ ಎಚ್ಚರ ವಹಿಸಲು ಸೂಚಿಸಿದರು.
20 ಕೋಟಿ ರೂ. ಮೇವು ಮಿನಿಕಿಟ್ ವಿತರಣೆ ಕುರಿತು ಸಂಚಿವ ಸಂಪುಟದ ಮುಂದೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು. ಮೇವಿನ ಲಭ್ಯತೆಯನ್ನು ವಾಸ್ತವಾಂಶವನ್ನು ಆಧರಿಸಿ ಲೆಕ್ಕಾಚಾರ ಹಾಕಬೇಕು. ಮೇವು ಸಾಲದೇ ಇದ್ದರೆ, ಬೆಳೆಯಬೇಕು. ರೈತರಿಂದ ಕೊಂಡುಕೊಳ್ಳಬೇಕು. ಮೇವಿಗೆ ಯಾವುದೇ ಕೊರತೆಯಾಗದಂತೆ ಎಚ್ಚರ ವಹಿಸಬೇಕು. ಮೇವಿನ ಲಭ್ಯತೆಯನ್ನು ವಾಸ್ತವಾಂಶವನ್ನು ಆಧರಿಸಿ ಲೆಕ್ಕಾಚಾರ ಹಾಕಬೇಕು ಎಂದರು.
20 ಕೋಟಿ ರೂ. ಮೇವು ಮಿನಿಕಿಟ್ ವಿತರಣೆ ಕುರಿತು ಸಂಚಿವ ಸಂಪುಟದ ಮುಂದೆ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮುಂದೆ ಮಾರ್ಚ್, ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಸಮಸ್ಯೆ ಎದುರಾಗಬಹುದು. ಇದಕ್ಕೆ ಈಗಲೇ ಸಿದ್ಧತೆ ಮಾಡಿಕೊಳ್ಳಬೇಕು. ರೇಷ್ಮೆ, ತೋಟಗಾರಿಕೆ ಹಾಗೂ ಪಶುಸಂಗೋಪನಾ ಇಲಾಖೆಯ ಫಾರಂಗಳಲ್ಲಿ ಮೇವು ಬೆಳೆಯಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಕುಡಿಯುವ ನೀರು, ಮೇವು, ಜನರು ಗುಳೆ ಹೋಗದಂತೆ ನೋಡಿಕೊಳ್ಳುವುದು ಹಾಗೂ ಇನ್ಪುಟ್ ಸಬ್ಸಿಡಿ ವಿತರಣೆ – ಈ ನಾಲ್ಕು ಅಂಶಗಳಿಗೆ ಹೆಚ್ಚಿನ ಒತ್ತು ನೀಡಬೇಕು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಡೈರಿ ನಿರ್ವಹಣೆ ಮಾಡಬೇಕು. ತಿಂಗಳಿಗೆ ಕನಿಷ್ಠ ಎರಡು ಬಾರಿಯಾದರೂ ತಮ್ಮ ತಮ್ಮ ಉಸ್ತುವಾರಿಯ ಜಿಲ್ಲೆಗಳಿಗೆ ಭೇಟಿ ನೀಡುವುದು ಕಡ್ಡಾಯ ಮಾಡಿಕೊಳ್ಳಿ ಎಂದು ಸಿದ್ದರಾಮಯ್ಯ ಸೂಚನೆ ನೀಡಿದರು.