SUDDIKSHANA KANNADA NEWS/ DAVANAGERE/ DATE:15-01-2025
ನವದೆಹಲಿ: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಸಂಬಂಧ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನವದೆಹಲಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರು ಬದಲಾಗಬೇಕು ಎಂದು ಅಭಿಪ್ರಾಯಪಟ್ಟಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು.
ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಅವರ ತೀರ್ಮಾನವೇ ಅಂತಿಮ ಎಂದು ತಿಳಿಸಿದರು.
ಹಂತ ಹಂತವಾಗಿ ಬಾಕಿ ಪಾವತಿ:
ಕಿಯೋನಿಕ್ಸ್ ಅಸೋಸಿಯೇಷನ್ ಅವರು ಬಾಕಿ ಇರುವ ಬಿಲ್ಲುಗಳು ಪಾವತಿಯಾಗದಿರುವ ಬಗ್ಗೆ ರಾಜ್ಯಪಾಲರಿಗೆ ದೂರು ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹಿಂದಿನ ಬಿಜೆಪಿ ಸರ್ಕಾರದವರು ದೊಡ್ಡ ಮೊತ್ತದ ಬಿಲ್ಲುಗಳನ್ನು ಪಾವತಿ ಮಾಡದೇ ಬಾಕಿ ಉಳಿಸಿದ್ದಾರೆ. ಈ ಬಿಲ್ಲುಗಳನ್ನು ಹಂತ ಹಂತವಾಗಿ ಪಾವತಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.