SUDDIKSHANA KANNADA NEWS/ DAVANAGERE/ DATE:30-08-2024
ದಾವಣಗೆರೆ: ಚನ್ನಗಿರಿ ತಾಲ್ಲೂಕಿನ ಜೋಳದಾಳು ಗ್ರಾಮದಲ್ಲಿಅಸ್ವಸ್ಥಗೊಂಡಿದ್ದ 45 ಜನರ ಆರೋಗ್ಯವನ್ನು ಶಾಸಕ ಬಸವರಾಜು ವಿ ಶಿವಗಂಗಾ ವಿಚಾರಿಸಿದರು.
ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿದ ಅವರು ಚಿಕಿತ್ಸೆ ಪಡೆಯುತ್ತಿದ್ದ ಜನರಿಗೆ ಆತ್ಮವಿಶ್ವಾಸ ತುಂಬಿದರು. ಆಕಸ್ಮಿಕ ಕಾರಣದಿಂದ ಇದ್ದಕ್ಕಿಂದ್ದಂತೆ ಅಸಸ್ಥಗೊಂಡಿದ್ದ ಹಿನ್ನೆಲೆ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ತಾಲ್ಲೂಕು ಆಡಳಿತದೊಂದಿಗೆ ಆಸ್ಪತ್ರೆ ಭೇಟಿ ಚಿಕಿತ್ಸೆ ಬಗ್ಗೆ ಮಾಹಿತಿ ಪಡೆದರು.

ಡಿಹೆಚ್ ಓ ಷಣ್ಮುಖಪ್ಪ ಮತ್ತು ಆಸ್ಪತ್ರೆ ತಾಲ್ಲೂಕು ಆರೋಗ್ಯ ಅಧಿಕಾರಿ ಸೇರಿದಂತೆ ಇಲಾಖೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಅಸ್ವಸ್ಥಗೊಂಡರಿಗೆ ಸೂಕ್ತ ಚಿಕಿತ್ಸೆ ನೀಡಿ ಅವಶ್ಯಕತೆ ಇದ್ದರೆ ಜಿಲ್ಲಾ ಆಸ್ಪತ್ರೆಗೂ ಕಳುಯಿಸಿ ಎಂದು ಸೂಚನೆ ನೀಡಿದರು.
ಘಟನೆಗೆ ಕಾರಣ ಏನು ಎಂಬುದರ ಬಗ್ಗೆ ವರದಿ ನೀಡಿ. ಮುಂದೆ ಇಂಥ ಸಮಸ್ಯೆ ಎದುರಾಗದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸಾಮಾನ್ಯವಾಗಿ ಇಂಥ ಘಟನೆಗಳು ಕಲುಷಿತ ನೀರು ಅಥವಾ ಆಹಾರ ಸೇವನೆಯಿಂದ ಕಂಡು ಬರುತ್ತದೆ. ಈ ಕಾರಣ ಗ್ರಾಮಗಳಲ್ಲಿ ಸ್ವಚ್ಛತೆ, ಆರೋಗ್ಯ ಅಭಿಯಾನ ಮೂಲಕ ಜಾಗೃತಿ ಮೂಡಿಸಬೇಕೆಂದು ತಿಳಿಸಿದರು.
ಇನ್ನು ಅಸ್ವಸ್ಥಗೊಂಡ ಕುಟುಂಬದವರಿಗೂ ಧೈರ್ಯ ಹೇಳಿ ಸದಾ ನಿಮ್ಮ ಜೊತೆ ಇರುತ್ತೇನೆ ಎಂದು ತಿಳಿಸಿದರು. ನಂತರ ಜೋಳದಾಳು ಮತ್ತು ಅಮ್ಮನ ಗುಡ್ಡಕ್ಕೂ ಭೇಟಿ ನೀಡಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲು ಆಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಈ ವೇಳೆ ಆರೋಗ್ಯ ಇಲಾಖೆ ಅಧಿಕಾರಿಗಳು, ತಾಲ್ಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.