SUDDIKSHANA KANNADA NEWS/ DAVANAGERE/ DATE:25-01-2025
ದಾವಣಗೆರೆ: ಪೂರ್ವ ವಲಯದ ನೂತನ ಐಜಿಪಿಯಾಗಿರುವ ರವಿಕಾಂತೇಗೌಡ ಅವರು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಅವರ ಗೃಹ ಕಚೇರಿಗೆ ಆಗಮಿಸಿದ್ದರು.
ಈ ವೇಳೆ ಐಜಿಪಿ ರವಿಕಾಂತೇಗೌಡ ಅವರೊಂದಿಗೆ ಸಚಿವರು ಚರ್ಚೆ ನಡೆಸಿದರು. ಐಜಿಪಿಯಾಗಿ ಬಂದ ರವಿಕಾಂತೇಗೌಡ ಅವರಿಗೆ ಶುಭ ಕೋರಿದರು.
ನಗರದ ಗೃಹ ಕಚೇರಿಯಲ್ಲಿ ನೂತನ ಐಜಿಪಿ ಅವರಿಗೆ ಸಚಿವರು ಶುಭ ಕೋರಿದರು. ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಇದ್ದರು. ದಾವಣಗೆರೆ ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಂತೆ ಸಚಿವರು ಸೂಚನೆ ನೀಡಿದರು.