ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ: ಶಾಲಿನಿ ರಜನೀಶ್ ಹೇಳಿದ್ದೇನು..?

On: February 13, 2025 8:56 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:13-02-2025

ಬೆಂಗಳೂರು: ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ಸಣ್ಣ ಫೈನಾನ್ಸ್ ಸಂಸ್ಥೆಗಳಲ್ಲಿ ಸಾಲ ಪಡೆದು ಮರುಪಾವತಿಸುವಲ್ಲಿ ವಿಳಂಬಮಾಡುವ ಸಾಲಗಾರರ ಮೇಲೆ ಮೈಕ್ರೋಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು ಹಾಗೂ ಲೇವಾದೇವಿಗಾರರು ನೀಡುವ ಕಿರುಕುಳ ಹಾಗೂ ಬಲವಂತದ ವಸೂಲಾತಿ ಕ್ರಮಗಳನ್ನು ನಿಯಂತ್ರಿಸಲು ಸರ್ಕಾರವು ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ 2025ನ್ನು ಫೆಬ್ರವರಿ 12 ರಿಂದ ಜಾರಿಗೊಳಿಸಿದೆ.

ಈ ಬಗ್ಗೆ ಬಳ್ಳಾರಿಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮಾಹಿತಿ ನೀಡಿದ್ದಾರೆ.

ಮೈಕ್ರೋಫೈನಾನ್ಸ್ ಸಂಸ್ಥೆಗಳು ಸಾಲಗಾರರಿಂದ ಯಾವುದೇ ಭದ್ರತೆ ಪಡೆಯಬಾರದು. ಗ್ರಾಹಕರಿಗೆ ವಿಧಿಸುವ ಬಡ್ಡಿದರಗಳ ಬಗ್ಗೆ ಪಾರದರ್ಶಕವಾಗಿ ಲಿಖಿತ ರೂಪದಲ್ಲಿ ತಿಳಿಸಬೇಕು. ಈ ಆದೇಶವು ಭಾರತೀಯ ರಿಸರ್ವ್
ಬ್ಯಾಂಕ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ನೊಂದಣಿಯಾಗದ ಮೈಕ್ರೋಫೈನಾನ್ಸ್ ಸಂಸ್ಥೆಗಳಿಗೆ ಮಾತ್ರ ಅನ್ವಯಿಸುತ್ತದೆ.

ನೋಂದಾಯಿತ ಸಂಸ್ಥೆಗಳಿಂದ ಅಂದಾಜು 60 ಸಾವಿರ ಕೋಟಿ ರೂ ಸಾಲವನ್ನು ಸುಮಾರು 1.09 ಕೋಟಿ ಸಾಲಗಾರರು ಪಡೆದಿದ್ದಾರೆ. ನೋಂದಣಿಯಾಗದ ಸಂಸ್ಥೆಗಳಿಂದ ಸಾಲ ಪಡೆದವರ ಮಾಹಿತಿ ನಿಖರವಾಗಿ
ಲಭ್ಯವಿಲ್ಲವಾದರೂ, ಅಂದಾಜು 40 ಸಾವಿರ ಕೋಟಿ ರೂ ಸಾಲ ಪಡೆದಿದ್ದಾರೆ ಎಂಬ ಮಾಹಿತಿ ಇದೆ.

ಮೈಕ್ರೋಫೈನಾನ್ಸ್ ಸಂಸ್ಥೆಗಳು ತಾವು ವ್ಯವಹರಿಸುತ್ತಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳಲ್ಲಿ ನೋಂದಣಿಯಾಗುವುದು ಕಡ್ಡಾಯವಾಗಿದೆ. ಈ ಸಂಸ್ಥೆಗಳು ವಿಧಿಸುವ ಬಡ್ಡಿದರ, ಸಾಲಗಾರರ ಮಾಹಿತಿ ಹಾಗೂ ಸುಸ್ತಿ ಸಾಲಗಳ ವಿವರಗಳನ್ನು ಜಿಲ್ಲಾಧಿಕಾರಿಗಳಿಗೆ ನೀಡಬೇಕು.

ತ್ರೈ ಮಾಸಿಕ ಮತ್ತು ವಾರ್ಷಿಕ ವ್ಯವಹಾರದ ವಿವರಗಳನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬೇಕು. ನಿಗದಿತ ಅವಧಿಯಲ್ಲಿ ಮಾಹಿತಿಯನ್ನು ಸಲ್ಲಿಸದಿದ್ದರೆ 6 ತಿಂಗಳ ಕಾರಗೃಹವಾಸ ಅಥವಾ 10 ಸಾವರಿರೂ ವರೆಗೆ ದಂಡ
ಅಥವಾ ಎರಡೂ ಶಿಕ್ಷೆಗೆ ಗುರಿಯಾಗುತ್ತಾರೆ. ವಿವಾದಗಳನ್ನು ಇತ್ಯರ್ಥಗಳನ್ನು ಒಂಬುಡ್ಸ್‍ಮನ್‍ಗಳನ್ನು ಸರ್ಕಾರ ಅಧಿಸೂಚನೆ ಮೂಲಕ ನೇಮಕ ಮಾಡುವ ಅಧಿಕಾರ ಹೊಂದಿರುತ್ತದೆ.

ಬಲವಂತದ ವಸೂಲಾತಿಗಳನ್ನು ಕೈಗೊಳ್ಳುವ ವ್ಯಕ್ತಿಯು ವಿಚಾರಣೆಗೆ ಒಳಪಡುತ್ತಾನೆ, ಹತ್ತು ವರ್ಷಗಳ ವರೆಗೆ ವಿಸ್ತರಿಸಬಹುದಾದ ಕಾರಗೃಹವಾಸ ಶಿಕ್ಷೆ ಹಾಗೂ 5 ಲಕ್ಷ ರೂ ವರೆಗೆ ವಿಧಿಸಬಹುದಾದ ಜುಲ್ಮಾನೆಗೆ ಒಳಪಡುತ್ತಾನೆ. ಈ ಅಪರಾಧಗಳು ಸಂಜ್ಞೆಯ (ಕಾಗ್ನಿಜಿಬಲ್) ಹಾಗೂ ಜಾಮೀನು ರಹಿತ (ನಾನ್ ಬೇಲೆಬಲ್) ಪ್ರಕರಣಗಳಾಗಿರುತ್ತವೆ. ಯಾವುದೇ ಪೊಲೀಸ್ ಅಧಿಕಾರಿಗಳು ಇಂತಹ ಪ್ರಕರಣಗಳನ್ನು ನೊಂದಣಿ ಮಾಡಿಕೊಳ್ಳಲು ನಿರಾಕರಿಸಬಾರದು ಎಂದು ಶಾಲಿನಿ ರಜನೀಶ್ ತಿಳಿಸಿದ್ದಾರೆ.

ಪೊಲೀಸ್ ಉಪ ಅಧೀಕ್ಷಕ (ಡಿವೈಎಸ್‍ಪಿ) ದರ್ಜೆಗಿಂತ ಕಡಿಮೆ ಇಲ್ಲದ ಅಧಿಕಾರಿಯು ಸ್ವತಃ (ಸುಮೊಟೊ) ಪ್ರಕರಣ ದಾಖಲಿಸಬಹುದು. ಸರ್ಕಾರವು ಈ ಅಧ್ಯಾದೇಶದ ಅನುಷ್ಠಾನಕ್ಕೆ ಕಾಲಕಾಲಕ್ಕೆ ನಿರ್ದೇಶನಗಳನ್ನು ನೀಡುವ ಅಧಿಕಾರ ಹೊಂದಿರುತ್ತದೆ. ಈ ಆದೇಶದಿಂದ ಆರ್.ಬಿ.ಐ ಮತ್ತು ಕೇಂದ್ರ / ರಾಜ್ಯ ಸರ್ಕಾರಗಳಿಂದ ನೋಂದಣಿಯಾಗದ ಮೈಕ್ರೋಫೈನಾನ್ಸ್ ಸಂಸ್ಥೆಗಳಲ್ಲಿ ಆರ್ಥಿಕ ಶಿಸ್ತು ಹೆಚ್ಚಿಸಲು ಹಾಗೂ ಸಾಲಗಾರರಿಗೆ ಕಿರುಕುಳ, ಬಲವಂತದ ವಸೂಲಿ ಕ್ರಮಗಳಿಂದ ಮುಕ್ತಿ ನೀಡುತ್ತದೆ ಎಂದು ಮಾಹಿತಿ ನೀಡಿದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment