Site icon Kannada News-suddikshana

ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀಗಳು, ವಚನಾನಂದ ಶ್ರೀಗಳಿಗೆ ಶಾಮನೂರು ಶಿವಶಂಕರಪ್ಪ ಹೇಳಿದ್ದೇನು?

SUDDIKSHANA KANNADA NEWS/ DAVANAGERE/ DATE:03-01-2025

ದಾವಣಗೆರೆ: ಬೆಂಗಳೂರಿನಲ್ಲಿ ಇಂದು ಕಾಂಗ್ರೆಸ್ ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪನವರನ್ನು ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು‌.

ನಂತರ ಶಾಮನೂರು ಶಿವಶಂಕರಪ್ಪನವರು ಪೂಜ್ಯರ ಜೊತೆ ಲವಲವಿಕೆಯಿಂದ ಮಾತನಾಡಿದರು.

ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಶ್ವಾಸಕೋಶಕ್ಕೆ ಸಂಬಂಧಿಸಿದ ಚಿಕಿತ್ಸೆ ಪಡೆಯುತ್ತಿರುವ ಅಖಿಲ ಭಾರತೀಯ ವೀರಶೈವ ಮಹಾಸಭಾ ರಾಷ್ಟ್ರಾಧ್ಯಕ್ಷ ಶಾಮನೂರು ಶಿವಶಂಕರಪ್ಪನವರ ಆರೋಗ್ಯವನ್ನು ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮೀಜಿ ಅವರು ಭೇಟಿ ಮಾಡಿ ವಿಚಾರಿಸಿದರು.

ಶಾಮನೂರು ಶಿವಶಂಕರಪ್ಪರು ಆದಷ್ಟು ಬೇಗ ಗುಣಮುಖರಾಗಲೆಂದು ಹರಸಿ ಹಾರೈಸಿ ವಚನಾನಂದ ಶ್ರೀಗಳು ಆಶೀರ್ವದಿಸಿದರು.

ನನ್ನ ಆರೋಗ್ಯ ಸುಧಾರಿಸಿದೆ. ಈಗ ಆರಾಮಾಗಿದ್ದೇನೆ. ಯಾವುದೇ ತೊಂದರೆ ಇಲ್ಲ. ವೈದ್ಯರು ಸೇರಿದಂತೆ ಎಲ್ಲರೂ ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ ಎಂದು ಶಾಮನೂರು ಶಿವಶಂಕರಪ್ಪರು ಹೇಳಿದರು.

Exit mobile version