SUDDIKSHANA KANNADA NEWS/ DAVANAGERE/ DATE:05-01-2025
ದಾವಣಗೆರೆ: ಕೆಪಿಸಿಸಿ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿ ಬದಲಾವಣೆ ವಿಚಾರ ಕುರಿತಂತೆ ದಾವಣಗೆರೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು.
ನಗರದ ಬಾಪೂಜಿ ಎಂಬಿಎ ಗ್ರೌಂಡ್ ನಲ್ಲಿ ಆಯೋಜಿಸಿರುವ ರಾಜ್ಯಮಟ್ಟದ ಯುವಜನೋತ್ಸವದಲ್ಲಿ ಪಾಲ್ಗೊಳ್ಳುವುದಕ್ಕಿಂತ ಮುಂಚೆ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರು ಹಾಗೂ
ಮುಖ್ಯಮಂತ್ರಿ ಬದಲಾವಣೆ ಮಾಡುವುದು, ಬಿಡುವುದು ಹೈಕಮಾಂಡ್ ಗೆ ಬಿಟ್ಟ ವಿಚಾರ. ಹೈಕಮಾಂಡ್ ನವರು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದರು.
ಕೆಪಿಸಿಸಿ ಅಧ್ಯಕ್ಷರನ್ನು ನಾವು ಬದಲಾವಣೆ ಮಾಡಲು ಆಗುತ್ತದೆಯೇ? ಹೈಕಮಾಂಡ್ ಈ ಬಗ್ಗೆ ಕ್ರಮ ತೆಗೆದುಕೊಳ್ಳುತ್ತದೆ. ಏನೇ ಪ್ರಮುಖ ನಿರ್ಧಾರಗಳು ಆಗುವುದು ಹೈಕಮಾಂಡ್ ತೀರ್ಮಾನದ ಬಳಿಕವೇ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.