Site icon Kannada News-suddikshana

ಫಾಲೋ, ಅನ್ ಫಾಲೋ ಅವ್ರವರ ವೈಯಕ್ತಿಕ: “ಪೋಸ್ಟ್ ಬಿರುಗಾಳಿ”ಗೆ ರೆಬಲ್ ಲೇಡಿ ಸುಮಲತಾ ಅಂಬರೀಷ್ ಹೇಳಿದ್ದೇನು…?

SUDDIKSHANA KANNADA NEWS/ DAVANAGERE/ DATE:12-03-2025

ಬೆಂಗಳೂರು: ನನ್ನ ಹಿಂದಿನ ಒಂದು ಪೋಸ್ಟ್‌ ಕುರಿತು ಅನಗತ್ಯವಾದ ವಿವಾದ ಸೃಷ್ಟಿಯಾಗಿರುವುದರಿಂದ ಈ ಸ್ಪಷ್ಟನೆ ನೀಡಲು ನಾನು ಇಚ್ಛಿಸುತ್ತೇನೆ. ನನ್ನ ಪೋಸ್ಟ್‌ ಯಾರನ್ನಾದರೂ ಗುರಿಯಾಗಿಸಿ ಮಾಡಲಾದದ್ದಲ್ಲ. ಅದು ಸರಳವಾಗಿ ಹಂಚಿಕೊಂಡ ವಿಷಯ ಮಾತ್ರ ಎಂದು ಹಿರಿಯ ನಟಿ ಮತ್ತು ಮಾಜಿ ಸಂಸದೆ ಸುಮಲತಾ ಅಂಬರೀಷ್ ಹೇಳಿದ್ದಾರೆ.

ಯಾರು ನನ್ನನ್ನು ಫಾಲೋ ಮಾಡುತ್ತಾರೆ ಅಥವಾ ಅನ್‌ಫಾಲೋ ಮಾಡುತ್ತಾರೆ ಎಂಬುದನ್ನು ಗಮನಿಸುವ ಅಭ್ಯಾಸ ಹೊಂದಿಲ್ಲ. ಮಾಧ್ಯಮಗಳಲ್ಲಿ ಈ ವಿಷಯದ ಬಗ್ಗೆ ಸುದ್ದಿಗಳು ಬಂದ ಬಳಿಕವೇ ನನಗೂ ಈ ಬೆಳವಣಿಗೆ ತಿಳಿಯಿತು ಎಂದು ತಿಳಿಸಿದ್ದಾರೆ.

ನಿಜಕ್ಕೂ, ದರ್ಶನ್ ಅವರು ಇನ್‌ಸ್ಟಾಗ್ರಾಂ ಮತ್ತು ಟ್ವಿಟರ್‌ನಲ್ಲಿ ಯಾರನ್ನೂ ಫಾಲೋ ಮಾಡುತ್ತಿಲ್ಲ. ಇದು ಅವರ ವೈಯಕ್ತಿಕ ಆಯ್ಕೆ, ಮತ್ತು ಅದನ್ನು ಎಲ್ಲರೂ ಗೌರವಿಸಬೇಕು. ಇದನ್ನು ಬೇರೆ ರೀತಿಯಲ್ಲಿ ಅರ್ಥೈಸುವುದು ಅಗತ್ಯವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ತಾಯಿ-ಮಗನ ಸಂಬಂಧದಲ್ಲಿ ಅನಗತ್ಯವಾದ ವಿವಾದಗಳನ್ನು ಸೃಷ್ಟಿಸಬೇಡಿ ಎಂದು ಎಲ್ಲರಲ್ಲಿ ಮನವಿ ಮಾಡುತ್ತೇನೆ. ನನ್ನ ಪೋಸ್ಟ್‌ ಯಾರನ್ನೂ ಉದ್ದೇಶಿಸಿಲ್ಲ ಎಂಬುದನ್ನು ಮತ್ತೊಮ್ಮೆ ಸ್ಪಷ್ಟಪಡಿಸುತ್ತೇನೆ. ನಾನು ನನ್ನ ಕುಟುಂಬ ಹಾಗೂ ಆಪ್ತರ ವಿಚಾರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಎಳೆದು ತರುವ ಅಭ್ಯಾಸವನ್ನು ಎಂದಿಗೂ ಹೊಂದಿಲ್ಲ ಎಂದು ಸ್ಪಷ್ಟನೆ ಕೊಡುವ ಪ್ರಯತ್ನ ಮಾಡಿದ್ದಾರೆ.

Exit mobile version